Sunday, July 5, 2026
spot_img
More
    spot_img
    HomeLatest newsಕಾಂಗ್ರೆಸ್‌ ಬೆಂಬಲಿತ ಮತದಾರರನ್ನು ಡಿಲಿಟ್‌ ಮಾಡಿರುವುದಕ್ಕೆ ಸಾಕ್ಷಿ ಇದೆ ಎಂದ ಬಿಆರ್‌ ಪಾಟೀಲ್‌

    ಕಾಂಗ್ರೆಸ್‌ ಬೆಂಬಲಿತ ಮತದಾರರನ್ನು ಡಿಲಿಟ್‌ ಮಾಡಿರುವುದಕ್ಕೆ ಸಾಕ್ಷಿ ಇದೆ ಎಂದ ಬಿಆರ್‌ ಪಾಟೀಲ್‌

    ನವದೆಹಲಿ: ಮತದಾರರ ಪಟ್ಟಿಯನ್ನು ಕಾಂಗ್ರೆಸ್‌‍ ಬೆಂಬಲಿತ ಮತದಾರರನ್ನು ಡಿಲಿಟ್‌ ಮಾಡಿರುವುದು ಹಾಗೂ ಬೇರೆಯವರನ್ನು ಸೇರ್ಪಡೆ ಮಾಡಿರುವುದಕ್ಕೆ ತಮ ಕ್ಷೇತ್ರದಲ್ಲಿ ಸಂಪೂರ್ಣ ಸಾಕ್ಷ್ಯ ಇದೆ ಎಂದು ಅಳಂದ ಕ್ಷೇತ್ರದ ಶಾಸಕ ಬಿ.ಆರ್‌. ಪಾಟೀಲ್‌ ಆರೋಪಿಸಿದರು.

    Advertisement

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಗಳ್ಳತನದ ಬಗ್ಗೆ ಚುನಾವಣಾ ಅಧಿಕಾರಿಯೇ ದೂರು ನೀಡಿದ್ದಾರೆ. ಅದನ್ನು ತನಿಖೆ ನಡೆಸಲು ಆಯೋಗ ನಿರಾಕರಿಸಿತ್ತು. ನಾವು ಬಿಡದೆ ಬೆನ್ನತ್ತಿದ್ದು ಸಿಐಡಿಗೆ ವಹಿಸಲಾಗಿದೆ. ಸಿಐಡಿ ಅಧಿಕಾರಿಗಳು 18 ಬಾರಿ ಪತ್ರ ಬರೆದರು, ಈವರೆಗೂ ಆಯೋಗದ ಅಧಿಕಾರಿಗಳು ಉತ್ತರ ನೀಡಿಲ್ಲ ಎಂದು ಆಕ್ಷೇಪಿಸಿದರು.

    ಮತಗಳ್ಳತನದ ಬಗ್ಗೆ ನಮಗೆ ಮಾಹಿತಿ ಸಿಗುತ್ತಿದ್ದಂತೆ ತಕ್ಷಣವೇ ಚುನಾವಣಾ ಆಯೋಗಕ್ಕೆ ದೂರು ನೀಡಿ ಪ್ರತಿಭಟಿಸಿದ್ದರಿಂದಾಗಿ ಹೆಚ್ಚಿನ ಹಾನಿಯಾಗುವುದು ತಪ್ಪಿದೆ. ಇಲ್ಲವಾದರೆ ನಾನು ಸೋಲಬೇಕಿತ್ತು ಎಂದಿದ್ದಾರೆ.

    ಮತದಾರರ ಪಟ್ಟಿಯ ಅಕ್ರಮದ ಬಗ್ಗೆ ಜಿಲ್ಲಾ ಚುನಾವಣಾ ಅಧಿಕಾರಿಯೇ ದೂರು ನೀಡಿದ್ದರು. ತನಿಖೆಗೆ ಸಹಕರಿಸದೇ ಇರುವುದು ಹಲವು ಅನುಮಾನಗಳನ್ನು ಮೂಡಿಸಿದೆ ಎಂದು ಆರೋಪಿಸಿದರು.

    ತಮ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು ಹಾಗೂ ಪರಿಶಿಷ್ಟ ಜಾತಿಯ ಮತದಾರರ ಹೆಸರನ್ನೇ ಕೈ ಬಿಡಲಾಗಿದೆ. ಕಾಂಗ್ರೆಸ್‌‍ನ ಮತದಾರರು ಎಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೋ ಅಲ್ಲಿ ಪಟ್ಟಿಯಿಂದ ಕೈಬಿಡುವ ಪ್ರಯತ್ನಗಾಳಾಗಿವೆ ಎಂದು ಬಿ.ಆರ್‌.ಪಾಟೀಲ್‌ ಆರೋಪಿಸಿದರು.

    ಸ್ವಿಗ್ಗಿಯಿಂದ ಮತ್ತೊಂದು ಡೆಲಿವರಿ ಆ್ಯಪ್‌ ಲಾಂಚ್; ಕೇವಲ 99 ರೂಗೆ ಊಟ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    ಬೆಂಗಳೂರು: ಡೇ ಕೇರ್‌ನಲ್ಲಿ ಮಕ್ಕಳಿಗೆ ಹಿಂಸೆ, ಐವರು ಮಹಿಳೆಯರ ವಿರುದ್ಧ ಎಫ್‌ಐಆರ್

    ಕ್ಯಾಪ್‌ಜೆಮಿನಿ ಕ್ಯಾಂಪಸ್‌ನ ಡೇ ಕೇರ್‌ನಲ್ಲಿ ಪುಟ್ಟ ಮಕ್ಕಳಿಗೆ ಹಿಂಸೆ ನೀಡಿದ ಆರೋಪದ ವಿಡಿಯೊ ವೈರಲ್; ಐವರು ಮಹಿಳಾ ಆರೈಕೆದಾರರ ವಿರುದ್ಧ ಪ್ರಕರಣ ದಾಖಲು.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading