Monday, August 31, 2026
spot_img
More
    spot_img
    HomeLatest newsಬೆಂಗಳೂರಲ್ಲಿ ಮತ್ತೆ ಮಳೆ ಅಬ್ಬರ: ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!

    ಬೆಂಗಳೂರಲ್ಲಿ ಮತ್ತೆ ಮಳೆ ಅಬ್ಬರ: ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!

    ಮತ್ತೆ ಬೆಂಗಳೂರಿಗೆ ಮಳೆರಾಯನ ಆಗಮನವಾಗಿದೆ. ಬುಧವಾರ ರಾತ್ರಿ ಸುರಿದ ಭಾರಿ ಮಳೆಯಿಂದ ತತ್ತರಿಸಿದ್ದ ಸಿಲಿಕಾನ್ ಸಿಟಿಯಲ್ಲಿ, ಗುರುವಾರ ಸಂಜೆ ಮತ್ತೆ ಧಾರಾಕಾರ ಮಳೆ ಸುರಿದಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ.
    ಗುಂಡಿ ಬಿದ್ದ ರಸ್ತೆಗಳು ಮಳೆ ನೀರಿನಿಂದ ತುಂಬಿ ಹರಿಯುತ್ತಿದ್ದು, ಸಂಜೆ ಕಚೇರಿ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ವಾಹನ ಸವಾರರು ಪರದಾಡಿದರು. ನಗರದ ಹಲವು ಪ್ರಮುಖ ಭಾಗಗಳಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ.

    Advertisement

    ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಜನರು ತೊಂದರೆ ಅನುಭವಿಸುತ್ತಿದ್ದಾರೆ.

    ಮಳೆ ಪೀಡಿತ ಪ್ರದೇಶಗಳು: ಮೆಜೆಸ್ಟಿಕ್, ಕಾರ್ಪೊರೇಷನ್, ವಿಧಾನಸೌಧ, ರಿಚ್ಮಂಡ್ ಸರ್ಕಲ್, ಶಾಂತಿನಗರ, ಮಲ್ಲೇಶ್ವರಂ, ರಾಜಾಜಿನಗರ, ಜೆ.ಪಿ. ನಗರ, ವೈಟ್‌ಫೀಲ್ಡ್, ನಾಯಂಡಹಳ್ಳಿ, ಕೆ.ಆರ್. ಮಾರುಕಟ್ಟೆ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ.ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಬೆಂಗಳೂರಿನಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ.

    ಬೆಂಗಳೂರಿನಲ್ಲಿ ಗುರುವಾರ ಸಂಜೆ ಮತ್ತೆ ಧಾರಾಕಾರ ಮಳೆ ಸುರಿದಿದೆ. ಬೆಳಗ್ಗೆಯಿಂದ ಇದ್ದ ಬಿಸಿಲು ಮಧ್ಯಾಹ್ನ ಇಳಿಕೆ ಕಂಡಿದ್ದು, ಸಂಜೆ ವೇಳೆಗೆ ಹೆಬ್ಬಾಳ, ನಾಗವಾರ, ಯಲಹಂಕ, ಕೋರಮಂಗಲ, ಹೊರಮಾವು, ಡೈರಿ ವೃತ್ತ, ರಾಜಾಜಿನಗರ, ಕೆಂಗೇರಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ.

    ಡೈರಿ ವೃತ್ತ-ನಿಮ್ಹಾನ್ಸ್ ರಸ್ತೆ, ಬೆಳ್ಳಂದೂರು, ಮಾರತ್ತಹಳ್ಳಿ, ಮಹಾದೇವಪುರ, ಮೈಸೂರು ರಸ್ತೆ ಮತ್ತು ರಾಜಾಜಿನಗರ ಸೇರಿದಂತೆ ಅನೇಕ ಕಡೆಗಳಲ್ಲಿ ರಸ್ತೆ ಗುಂಡಿಗಳಲ್ಲಿ ನೀರು ನಿಂತು ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಈ ಸಮಸ್ಯೆಯನ್ನು ಪರಿಹರಿಸಲು, ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಲು ಗಡುವು ನೀಡಿದೆ. ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು, ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ನಗರ ಪಾಲಿಕೆಗಳ ರಸ್ತೆಗಳನ್ನು ಗುಂಡಿ ಮುಕ್ತಗೊಳಿಸುವಂತೆ ಸೂಚನೆ ನೀಡಿದ್ದಾರೆ.

    ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ: ಬೆಂಗಳೂರು ಸೇರಿ 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading