Thursday, November 5, 2026
spot_img
More
    spot_img
    HomeLatest newsಅಭಿಮಾನಿಗಳಿಗೆ ಕೆ.ಅಣ್ಣಾಮಲೈ ವಿಶೇಷ ಮನವಿ

    ಅಭಿಮಾನಿಗಳಿಗೆ ಕೆ.ಅಣ್ಣಾಮಲೈ ವಿಶೇಷ ಮನವಿ

    ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ರಾಜ್ಯದ ಬಿಜೆಪಿ ನಾಯಕ ಕೆ.ಅಣ್ಣಾಮಲೈ ಅಭಿಮಾನಿಗಳಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ. 2021ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅರಾವಕುರಿಚಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಅವರು ಈಗ 2026ರ ವಿಧಾನಸಭೆ ಚುನಾವಣೆಯತ್ತ ಗಮನಹರಿಸಿದ್ದಾರೆ.

    ಕೆ.ಅಣ್ಣಾಮಲೈ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ. ತಮ್ಮ ಅಭಿಮಾನಿಗಳಿಗೆ ವಿಶೇಷ ಮನವಿಯನ್ನು ಮಾಡಿದ್ದಾರೆ. ಈ ಪೋಸ್ಟ್‌ಗೆ ಕಾರಣವಾಗಿದ್ದು, ಅಣ್ಣಾಮಲೈ ಬೆಂಬಲಿಗರು ತಿರುನಲ್ವೇಲಿ ಪ್ರದೇಶದಲ್ಲಿ ‘ಅಣ್ಣಾಮಲೈ ನರ್ಪಣಿ ಮಂಟ್ರಂ’ ಎಂಬ ಚಾರಿಟಿ ಆರಂಭಿಸಿದ್ದು.

    ಈ ಚಾರಿಟಿಯ ಲೋಗೋ ಮತ್ತು ಧ್ವಜವನ್ನು ಬಿಡುಗಡೆ ಮಾಡಲಾಗಿತ್ತು. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ನೆಲ್ಲೈ ವೇಲ್ಕಣ್ಣನ್ ಎಂಬುವವರು ಈ ಚಾರಿಟಿ ಅಧ್ಯಕ್ಷರಾಗಿದ್ದರು, ಅವರೇ ಧ್ವಜ ಅನಾವರಣ ಮಾಡಿದ್ದರು. ಇದನ್ನು ಗಮನಿಸಿದ ಕೆ.ಅಣ್ಣಾಮಲೈ ಪೋಸ್ಟ್ ಹಾಕಿದ್ದಾರೆ.

    ಪೋಸ್ಟ್‌ನಲ್ಲಿ ಏನಿದೆ?: ಕೆ.ಅಣ್ಣಾಮಲೈ ತಮ್ಮ ಪೋಸ್ಟ್‌ನಲ್ಲಿ ‘ಪ್ರಿಯ ಸಹೋದರರು ಮತ್ತು ಸಹೋದರಿಯರೇ, ನಮಸ್ಕಾರ. ಇಂದು ತಿರುನೆಲ್ವೇಲಿಯಲ್ಲಿ ನನ್ನ ಹೆಸರಿನಲ್ಲಿ ಸಂಸ್ಥೆ ಸ್ಥಾಪನೆಗೊಂಡು, ಅದರ ಧ್ವಜವನ್ನು ಅನಾವರಣಗೊಳಿಸಿದ ಕುರಿತು ಮಾಧ್ಯಮಗಳಲ್ಲಿ ವರದಿಯನ್ನು ನೋಡಿದೆ. ನನ್ನ ಮೇಲೆ ತೋರಿಸುತ್ತಿರುವ ನಿಮ್ಮ ಪ್ರೀತಿ ಮತ್ತು ಅಭಿಮಾನಕ್ಕೆ ನಾನು ತುಂಬಾ ಕೃತಜ್ಞನಾಗಿದ್ದೇನೆ’ ಎಂದು ಹೇಳಿದ್ದಾರೆ.

    ‘ಆದಾಗ್ಯೂ, ಇಂತಹ ಸಂಸ್ಥೆಗಳು ಅಥವಾ ಧ್ವಜಗಳು ಸೇರಿದಂತೆ ಯಾವುದಕ್ಕೂ ನನ್ನ ಒಪ್ಪಿಗೆ ಇಲ್ಲ. ಆದ್ದರಿಂದ, ದಯವಿಟ್ಟು ನನ್ನ ಹೆಸರು, ಚಿತ್ರ ಮೊದಲಾದವುಗಳನ್ನು ಬಳಸಿ ನಡೆಯುತ್ತಿರುವ ಇಂತಹ ಚಟುವಟಿಕೆಗಳನ್ನು ತಕ್ಷಣವೇ ನಿಲ್ಲಿಸುವಂತೆ ವಿನಂತಿಸುತ್ತೇನೆ. ಮುಂದಿನ ದಿನಗಳಲ್ಲಿ ಸಹ ಇಂತಹ ಕಾರ್ಯಗಳಿಂದ ದೂರವಿರಬೇಕೆಂದು ಎಲ್ಲರಿಗೂ ಮನವಿ ಮಾಡುತ್ತೇನೆ’ ಎಂದು ಮನವಿ ಮಾಡಿದ್ದಾರೆ.

    ‘ಗೋಡೆ ಇದ್ದಾಗ ಮಾತ್ರ ಚಿತ್ರವನ್ನು ಮೂಡಿಸಬಹುದು. ಅದೇ ರೀತಿ, ನಿಮ್ಮ ಜೀವನಕ್ಕೂ, ನಿಮ್ಮ ಕುಟುಂಬದ ಕಲ್ಯಾಣಕ್ಕೂ ಮೊದಲ ಆದ್ಯತೆ ನೀಡುವಂತೆ ಎಲ್ಲರಿಗೂ ವಿನಂತಿಸುತ್ತೇನೆ. ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲಕ್ಕೆ ಹೃತ್ಪೂರ್ವಕ ಧನ್ಯವಾದಗಳು’ ಎಂದು ತಿಳಿಸಿದ್ದಾರೆ.

    2026ರಲ್ಲಿ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಬಿಜೆಪಿ ಮತ್ತು ಎಐಎಡಿಎಂಕೆ ಪಕ್ಷಗಳು ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲಿವೆ. ಆದ್ದರಿಂದ ಎಐಎಡಿಎಂಕೆ ಪಕ್ಷದ ಬೇಡಿಕೆಯಂತೆ ಕೆ.ಅಣ್ಣಾಮಲೈ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸಲಾಗಿದೆ.

    ತಮಿಳುನಾಡು ಬಿಜೆಪಿಯ ಪ್ರಮುಖ ನಾಯಕ ಕೆ.ಅಣ್ಣಾಮಲೈ. ಕರ್ನಾಟಕ ಕೇಡರ್‌ನ ಮಾಜಿ ಐಪಿಎಸ್‌ ಅಧಿಕಾರಿ. 2019ರಲ್ಲಿ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಇವರು, 2020ರ ಆಗಸ್ಟ್‌ನಲ್ಲಿ ಬಿಜೆಪಿ ಸೇರಿದ್ದರು.

    2021ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅವರು ಸೋಲು ಕಂಡಿದ್ದರು. 2024ರ ಲೋಕಸಭೆ ಚುನಾವಣೆಯಲ್ಲಿ ಕೋಯಮತ್ತೂರು ಕ್ಷೇತ್ರದಲ್ಲಿ ಡಿಎಂಕೆಯ ಗಣಪತಿ ರಾಜ್‌ಕುಮಾರ್ ವಿರುದ್ಧ ಸಹ ಕೆ.ಅಣ್ಣಾಮಲೈ ಸೋಲು ಕಂಡಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search