Friday, November 6, 2026
spot_img
More
    spot_img
    HomeLatest newsದೀಪಾವಳಿ ಗಿಫ್ಟ್:‌ ರಾಜ್ಯದ ವೈದ್ಯಕೀಯ ಕಾಲೇಜುಗಳ ಸಂಖ್ಯೆಯಲ್ಲಿ ಏರಿಕೆ

    ದೀಪಾವಳಿ ಗಿಫ್ಟ್:‌ ರಾಜ್ಯದ ವೈದ್ಯಕೀಯ ಕಾಲೇಜುಗಳ ಸಂಖ್ಯೆಯಲ್ಲಿ ಏರಿಕೆ

    ಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳವಾಗಿದೆ. ಈ ಮೂಲಕ ಹಲವಾರು ವರ್ಷಗಳ ಬೇಡಿಕೆ ಈಗ ಈಡೇರಿದಂತಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಆರ್.ಪಾಟೀಲ್ ತಿಳಿಸಿದ್ದಾರೆ.

    ಈ ಕುರಿತು ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಅವರು, ಈ ಕುರಿತು ಸಂಪೂರ್ಣ ಮಾಹಿತಿ ನೀಡಿದರು.

    ಪ್ರೀ ಕ್ಲಿನಿಕಲ್‌, ಪ್ಯಾರಾ ಕ್ಲಿನಿಕಲ್‌ ಮತ್ತು ಕ್ಲಿನಿಕಲ್‌ ವಿಭಾಗಕ್ಕೆ ಒಟ್ಟು 422 ಪಿಜಿ ಸೀಟುಗಳನ್ನು ಹೆಚ್ಚಳ ಮಾಡಲಾಗಿದೆ. ಪೀಡಿಯಾಟ್ರಿಕ್ಸ್‌, ಅನಸ್ತೇಷಿಯಾ, ಫೋರೆನ್ಸಿಕ್‌ ಮೆಡಿಸಿನ್‌, ಮೈಕ್ರೊ ಬಯಲಾಜಿ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ವಿಭಾಗದಲ್ಲಿ ಪಿಜಿ ಸೀಟುಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

    ಪ್ರತಿಬಾರಿಯಂತೆ ಈ ಬಾರಿಯೂ ಪಿಜಿ ಕೋರ್ಸ್‌ಗೆ ಬೇಡಿಕೆ ಇತ್ತು. ಪಿಜಿಯಲ್ಲಿ 572 ಸೀಟುಗಳನ್ನು ಮಂಜೂರು ಮಾಡಲು ನಾವು ಮನವಿ ಮಾಡಿದ್ದೆವು. ಇದರಲ್ಲಿ ನಮಗೆ 422 ಸೀಟು ಲಭ್ಯವಾಗಿವೆ. ಕಳೆದ ವರ್ಷ 1694 ಪಿಜಿ ಸೀಟು ಇದ್ದರೆ, ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ 422 ಸೀಟು ಹೆಚ್ಚಳ ಆಗಲಿದೆ. ಈ ವರ್ಷ ಒಟ್ಟು 2116 ಸೀಟು ವಿದ್ಯಾರ್ಥಿಗಳಿಗೆ ಸಿಗಲಿದೆ. ಇದು ವಿದ್ಯಾರ್ಥಿಗಳಿಗೆ ದೀಪಾವಳಿ ಕೊಡುಗೆ ಎಂದು ಸಂತಸ ವ್ಯಕ್ತಪಡಿಸಿದರು.

    ಈಗಾಗಲೇ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‍ಎಂಸಿ) ಆದೇಶ ನೀಡಿದೆ. ಇದರ ಜೊತೆಗೆ ಇದೇ ಮೊದಲ ಬಾರಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯರಿಗೆ ಶೇ.15ರಷ್ಟು ಕೋಟಾ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

    ಇನ್ಫೋಸಿಸ್‌ನವರು ಏನು ಬೃಹಸ್ಪತಿನಾ? ಜಾತಿಗಣತಿಯಲ್ಲಿ ಭಾಗವಹಿಸಲ್ಲ ಎಂದ ಸುಧಾಮೂರ್ತಿ ದಂಪತಿಗೆ ಸಿದ್ದು ಗುದ್ದು


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search