ಹೊಸದಿಲ್ಲಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ದೂರುಗಳಿಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಪ್ರತಿಕ್ರಿಯೆ ನೀಡಲು ಚುನಾವಣಾ ಆಯೋಗಕ್ಕೆ ಏಳು ದಿನಗಳ ಕಾಲಕಾವಕಾಶ ಪಡೆದುಕೊಂಡಿವೆ ಎಂದು ಪಿಟಿಐ ಮೂಲ ವರದಿಗಳಿಂದ ತಿಳಿದು ಬಂದಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಪ್ರತ್ಯೇಕವಾಗಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದವು. ಈ ದೂರಿನ ಆಧಾರದ ಮೇಲೆ ಆಯೋಗವು ನವೆಂಬರ್ 16ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಂದು ಮಧ್ಯಾಹ್ನ ಒಂದು ಗಂಟೆಯ ಒಳಗಾಗಿ ಉತ್ತರಿಸುವಂತೆ ಪತ್ರದಲ್ಲಿ ತಿಳಿಸಿತ್ತು. ಆಯೋಗದ ಈ ಆದೇಶದ ಮೇರೆಗೆ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಏಳು ದಿನಗಳ ಕಾಲಾವಕಾಶವನ್ನು ಪಡೆದಿವೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


