ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಮಗನ ಚುನಾವಣೆಯೆಂದು ಹೇಳಿ ಅನೇಕ ಖಾಸಗಿ ಕಂಪನಿಗಳಿಂದ ಸಾವಿರಾರು ಕೋಟಿ ರೂಪಾಯಿಗಳಷ್ಟು ಗಿಫ್ಟ್ ಪಡೆದಿದ್ದಾರೆ ಎಂದು ಸಚಿವ ಎನ್.ಚಲುರಾಯಸ್ವಾಮಿ ಆರೋಪಿಸಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿಂದು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ನನಗೆ ಮಾಹಿತಿ ಬಂದಿರುವ ಪ್ರಕಾರ ಕುಮಾರಸ್ವಾಮಿ ಅವರಿಗೆ ಬೇರೆ ಸಮಯದಲ್ಲಿ ಹಣ ಸಿಗುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಮಗನ ಚುನಾವಣೆ, ಮಗನ ಚುನಾವಣೆಯೆಂದು ಹೇಳಿ ಹಲವು ಖಾಸಗಿ ಕಂಪನಿಗಳಿಂದ ಸಾವಿರಾರು ಕೋಟಿ ರೂಪಾಯಿಗಳಷ್ಟು ಹಣ ಪಡೆದಿರುವುದು ಸತ್ಯ ಎಂದು ಆರೋಪಿಸಿದರು.
ಇನ್ನು ಚನ್ನಪಟ್ಟಣ ಉಪ ಚುನಾವಣೆಯಲ್ಲಿ ದುಡ್ಡು ಖರ್ಚು ಮಾಡಿದ ತಕ್ಷಣ ಚುನಾವಣೆ ಗೆಲ್ಲುತ್ತೇವೆ ಎಂದಲ್ಲ. ಏನೇ ಆಗಲಿ ಹಣ ಹಂಚಿಕೆ ಮಾಡಿದಾಕ್ಷಣ ಚುನಾವಣೆ ಗೆಲ್ಲುತ್ತಾರೆ ಎಂಬಂತೆ ನಿರೀಕ್ಷೆ ಮಾಡಲು ಅಸಾಧ್ಯ. ನಾವು ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಅಭಿವೃದ್ಧಿ ಮಾಡಿದ್ದೇವೆ. ಹಾಗಾಗಿ ನಾವೇ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


