ಚಿಕ್ಕಮಗಳೂರು: ಬಿಜೆಪಿಯಿಂದ 100 ಕೋಟಿ ರೂ ಆಫರ್ ಬಂದಿದೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ನನ್ನನ್ನು ಯಾರು ಕೂಡ ಸಂಪರ್ಕ ಮಾಡಿಲ್ಲ ಎಂದು ಕಾಂಗ್ರೆಸ್ ಶಾಸಕ ಎಚ್.ಡಿ.ತಮ್ಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ 100 ಕೋಟಿ ಆಫರ್ ಬಂದಿದೆ ಎಂಬುದು ಸುಳ್ಳು. ಈ ಬಗ್ಗೆ ನನ್ನನ್ನು ಯಾರೂ ಕೂಡ ಸಂಪರ್ಕ ಮಾಡಿಲ್ಲ, ಆಫರ್ ಬಂದಿದೆ ಎಂದು ಯಾರ್ ಹೇಳಿದ್ದಾರೆ ಅವರನ್ನೇ ಹೋಗಿ ನೀವು ಕೇಳಬೇಕು. ನನಗೆ ಅದರ ಬಗ್ಗೆ ಯಾವ ಮಾಹಿತಿಯೂ ಇಲ್ಲ. ನನ್ನನ್ನು ಈ ಭಾಗದ ಪ್ರಜೆಗಳು ಆಯ್ಕೆ ಮಾಡಿದ್ದಾರೆ. ಆ ಕಾರಣದಿಂದಾಗಿ ನಾನು ಕಾಂಗ್ರೆಸ್ ನೇತೃತ್ವದಲ್ಲಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿಕೊಂಡು ಹೋಗುತ್ತೇನೆ ಎಂದರು.
ರಾಜ್ಯದ ಜನತೆ ಆದೇಶದ ಮೇರೆಗೆ ಕಾಂಗ್ರೆಸ್‌ನ 136 ಶಾಸಕರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜನಾದೇಶದ ಮೂಲಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಡಳಿತ ನಡೆಸುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಶಾಸಕರನ್ನು ಕೊಂಡುಕೊಳ್ಳುವ ಬಗ್ಗೆ ಯಾರು ಹೇಳಿದ್ದಾರೋ ಅವರನ್ನೇ ಕೇಳಬೇಕು. ಈ ವಿಚಾರವನ್ನು ಚರ್ಚಿಸುವಷ್ಟು ನಾನು ದೊಡ್ಡ ವ್ಯಕ್ತಿಯಲ್ಲ ಎಂದು ಹೇಳಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


