Thursday, November 12, 2026
spot_img
More
    spot_img
    HomeBreaking Newsಆಪ್‌ಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬಿಜೆಪಿ ಸೇರಿದ ಕೈಲಾಶ್‌ ಗೆಹ್ಲೋಟ್

    ಆಪ್‌ಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬಿಜೆಪಿ ಸೇರಿದ ಕೈಲಾಶ್‌ ಗೆಹ್ಲೋಟ್

    ಹೊಸದಿಲ್ಲಿ: ನಿನ್ನೆಯಷ್ಟೇ ಆಮ್ ಆದಿ ಪಕ್ಷಕ್ಕೆ ರಾಜೀನಾಮೆ ನೀಡಿ ಅಚ್ಚರಿ ಮೂಡಿಸಿದ್ದ ಎಎಪಿ ನಾಯಕ ಕೈಲಾಶ್ ಗೆಹ್ಲೋಟ್ ಅವರು ಸೋಮವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.

    ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಮನೋಹರ್ ಲಾಲ್ ಕಟ್ಟರ್ ಮತ್ತಿತರರು ಅವರನ್ನು ಹೂಗುಚ್ಛ ನೀಡಿ ಬರಮಾಡಿಕೊಂಡರು. ಕೈಲಾಸ್ ಗೆಹ್ಲೋಟ್ ಬಿಜೆಪಿ ಸೇರ್ಪಡೆಯಾಗಿರುವುದಕ್ಕೆ ಕಿಡಿಕಾರಿದ ಮಾಜಿ ಮುಖ್ಯಮಂತ್ರಿ ಹಾಗೂ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರೀವಾಲ್ ಕೈಲಾಶ್ ಗೆಹ್ಲೋಟ್ ಯಾವುದೇ ಪಕ್ಷದ ಸೇರಲು ಸರ್ವ ಸ್ವತಂತ್ರರು. ತಮಗೆ ಬೇಕಾದ ಕಡೆ ಹೋಗಲಿ. ತಮದೇನು ಅಭ್ಯಂತರವಿಲ್ಲ ಎಂದಿದ್ದಾರೆ.

    ಆಡಳಿತಾರೂಢ ಆಮ್ ಆದಿ ಪಕ್ಷದ ಹಿರಿಯ ನಾಯಕ ಕೈಲಾಶ್ ಗೆಹ್ಲೋಟ್ ತಮ ಸಚಿವ ಸ್ಥಾನ ಹಾಗೂ ಪಕ್ಷದ ಸದಸ್ಯತ್ವಕ್ಕೆ ಭಾನುವಾರ ರಾಜೀನಾಮೆ ನೀಡಿದ್ದರು. ಮುಖ್ಯಮಂತ್ರಿ ಆತಿಶಿ ನೇತೃತ್ವದ ಸಂಪುಟದಲ್ಲಿ ಸಾರಿಗೆ, ಗೃಹ ಸೇರಿದಂತೆ ಮಹತ್ವದ ಖಾತೆಗಳನ್ನು ನಿಭಾಯಿಸುತ್ತಿದ್ದರು.

    ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಕೈಲಾಶ್ ಗೆಹ್ಲೋಟ್ ಅವರ ರಾಜೀನಾಮೆಯಿಂದ ಆಮ್ ಆದಿ ಪಕ್ಷಕ್ಕೆ ಹಿನ್ನೆಡೆಯಾಗಿದೆ. ರಾಜೀನಾಮೆ ಸಂದರ್ಭದಲ್ಲಿ ಕೈಲಾಶ್ ಗೆಹ್ಲೋಟ್ ಆಪ್ ಸಂಚಾಲಕ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‍ಗೆ ಪ್ರತ್ಯೇಕವಾಗಿ ಪತ್ರ ಬರೆದು ತಮ ಅಸಮಾಧಾನ ಹೊರಹಾಕಿದ್ದಾರೆ. ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವಲ್ಲಿ ಪಕ್ಷ ಸಂಪೂರ್ಣ ಸೋತಿದೆ. ಯಮುನಾ ನದಿ ಶುದ್ಧೀಕರಣಗೊಳಿಸುವ ಭರವಸೆಯನ್ನೂ ಈಡೇರಿಸಲು ಸಾಧ್ಯವಾಗಿಲ್ಲ. ಪ್ರಸ್ತುತ ಯಮುನಾ ನದಿ ಮೊದಲಿಗಿಂತಲೂ ಹೆಚ್ಚು ಮಲಿನವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಜತೆಗೆ ಕೇಜ್ರಿವಾಲ್ ಅಧಿಕೃತ ನಿವಾಸವಾಗಿದ್ದ ಶೀಶಮಹಲ್‍ನವೀಕರಣ ವಿವಾದದ ಕುರಿತೂ ಪ್ರಸ್ತಾಪಿಸಿದ್ದಾರೆ.

    ದೆಹಲಿ ಸರ್ಕಾರ ಜನಪರ ಕೆಲಸ ಮಾಡುವುದನ್ನು ಬಿಟ್ಟು ಕೇಂದ್ರದ ಜತೆ ಸಂಘರ್ಷದಲ್ಲಿದೆ. ಜನರ ಮೂಲಸೌಲಭ್ಯಗಳ ಕಡೆ ಗಮನಕೊಡದೆ ರಾಜಕೀಯ ದ್ವೇಷದಲ್ಲಿ ಮುಳುಗಿದೆ. ಇದರಿಂದಾಗಿ ದೆಹಲಿಯ ಪ್ರಗತಿ ಅಸಾಧ್ಯವಾಗಿದೆ. ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಬದಲು ಆಮ್ ಆದಿ ರಾಜಕೀಯ ಅಜೆಂಡಾ ಸಾಧಿಸಲು ಪ್ರಯತ್ನಿಸುತ್ತಿದೆ ಎಂದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search