ಮೈಸೂರು: ಬಾಯಿಗೆ ಬಂದಂತೆ ಮಾತನಾಡಿದರೆ ಕೇಳಿಸಿಕೊಳ್ಳೋಕೆ ನಾವು ಸಿದ್ಧರಿಲ್ಲ. ಇತಿಹಾಸದ ಚರ್ಚೆ ಅವಶ್ಯಕತೆ ಇದ್ದರೆ ಆಹ್ವಾನ ಕೊಡುತ್ತೇನೆ ಎಂದು ಸಚಿವ ಚಲುವರಾಯಸ್ವಾಮಿ ಅವರು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಸವಾಲು ಹಾಕಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮೀರ್ ಹಾಗೂ ಆ ನಾಲ್ವರ ಜೊತೆ ಇದ್ದಿದ್ದು ನನ್ನ ಕರಾಳ ದಿನ ಎಂಬ ಕುಮಾರಸ್ವಾಮಿ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದರು.
ನನಗೆ ಕುಮಾರಸ್ವಾಮಿಯವರಂತೆ ಮಾಧ್ಯಮದವರ ಮುಂದೆ ನಾಲಿಗೆ ಹರಿಬಿಡಲು ಸಾಧ್ಯವಿಲ್ಲ. ಅವರು ಚರ್ಚೆಗೆ ಬರುವುದಾದರೆ ಒಂದು ವೇದಿಕೆ ಸಿದ್ಧಮಾಡಿ. ಯಾರು ಹೊಲಸು, ಕಚಡ ಎಂದು ಚರ್ಚೆ ಮಾಡೋಣ ಎಂದು ಸವಾಲು ಹಾಕಿದರು.
ಇನ್ನು ಉಪಚುನಾವಣೆ ಸಂಬಂಧ ಮಾತನಾಡಿದ ಅವರು, ಮೂರು ಕ್ಷೇತ್ರಗಳಲ್ಲೂ ನಾವೇ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸರ್ಕಾರ ಐದು ಗ್ಯಾರಂಟಿ ಯೋಜನೆಗಳಿಂದ ಜನರು ಸಂತೋಷದಿಂ ದ ಇದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ಪ್ರಬಲ ಪ್ರಚಾರ ನಡೆಸಿದರೂ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


