Monday, November 2, 2026
spot_img
More
    spot_img
    HomeSportsಬಾರ್ಡರ್‌ - ಗವಾಸ್ಕರ್‌ ಟ್ರೋಫಿ: ಪರ್ತ್‌ ಟೆಸ್ಟ್‌ಗೆ ರೋಹಿತ್‌ ಅಲಭ್ಯ

    ಬಾರ್ಡರ್‌ – ಗವಾಸ್ಕರ್‌ ಟ್ರೋಫಿ: ಪರ್ತ್‌ ಟೆಸ್ಟ್‌ಗೆ ರೋಹಿತ್‌ ಅಲಭ್ಯ

    ಸದ್ಯ ಟೀಮ್‌ ಇಂಡಿಯಾ 5 ಪಂದ್ಯಗಳ ಬಾರ್ಡರ್‌ – ಗವಾಸ್ಕರ್‌ ಟೆಸ್ಟ್‌ ಸರಣಿಯನ್ನು ಆಡಲು ಆಸ್ಟ್ರೇಲಿಯಾ ತಲುಪಿದ್ದು, ಇದೇ ನವೆಂಬರ್‌ 22ರಿಂದ ಮೊದಲ ಪಂದ್ಯ ಪರ್ತ್‌ನಲ್ಲಿ ಆರಂಭವಾಗಲಿದೆ. ಆದರೆ ನಾಯಕ ರೋಹಿತ್ ಶರ್ಮಾ ಈ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.

    ಹೌದು, ರೋಹಿತ್‌ ಶರ್ಮಾ ಮೊದಲ ಪಂದ್ಯದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಬಿಸಿಸಿಐಗೆ ತಿಳಿಸಿದ್ದಾರೆ. ಹೀಗಾಗಿ ಅವರು ಮೊದಲ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ರೋಹಿತ್‌ ಅನುಪಸ್ಥಿತಿಯಲ್ಲಿ ಉಪನಾಯಕ ಜಸ್‌ಪ್ರೀತ್‌ ಬುಮ್ರಾ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ.

    ಇನ್ನು ಇತ್ತೀಚೆಗಷ್ಟೇ ರೋಹಿತ್‌ ಶರ್ಮಾ ಪತ್ನಿ ರಿತಿಕಾ ಎರಡನೇ ಮಗುವಿಗೆ ಜನ್ಮ ನೀಡಿದ್ದರು. ಇದೇ ಕಾರಣದಿಂದಾಗಿ ರೋಹಿತ್‌ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ರೋಹಿತ್‌ ಶರ್ಮಾ ಡಿಸೆಂಬರ್‌ 2ರಿಂದ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದಿಂದ ತಂಡ ಸೇರಿಕೊಳ್ಳಲಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search