ಬೆಂಗಳೂರು: ಮುಡಾ ಪ್ರಕರಣದ ಮೂರನೇ ಆರೋಪಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಮೈದನೂ ಆಗಿರುವ ಬಿ.ಎಂ. ಮಲ್ಲಿಕಾರ್ಜುನ ಸ್ವಾಮಿ ಅವರನ್ನು ಸೋಮವಾರ (ನವೆಂಬರ್ 18) ಜಾರಿ ನಿದೇರ್ಶನಾಲಯ (ಇ.ಡಿ) ಅಧಿಕಾರಿಗಳು ವಿಚಾರಣೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.
ಇ.ಡಿ.ಅಧಿಕಾರಿಗಳು ನೋಟಿಸ್ ನೀಡಿ, ವಿಚಾರಣೆಗೆ ಬರುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಶಾಂತಿನಗರದ ಕೇಂದ್ರ ಕಚೇರಿಗೆ ಮಧ್ಯಾಹ್ನ 2 ಗಂಟೆಗೆ ಆಗಮಿಸಿದ ಮಲ್ಲಿಕಾರ್ಜುನ ಸ್ವಾಮಿ ಅವರನ್ನು ಸತತ ಮೂರು ಗಂಟೆಗೂ ಹೆಚ್ಚು ಕಾಲ ವಿಚಾರಣೆಗೆ ಒಳಪಡಿಸಿದ್ದರು.
ಪ್ರಕರಣದ ನಾಲ್ಕನೇ ಆರೋಪಿ ಜೆ. ದೇವರಾಜು ಅವರಿಂದ ಜಮೀನು ಖರೀದಿ ಮಾಡಿದ ಸಂಬಂಧ ಮಾಹಿತಿಯನ್ನು ಕಲೆ ಹಾಕಿದ್ದಾರೆ ಎಂದು ಗೊತ್ತಾಗಿದೆ. ವಿಚಾರಣೆ ವೇಳೆ ದಾಖಲಾತಿ ಪರಿಶೀಲನೆ ನಡೆಸಿ, ಬಳಿಕ ಹೇಳಿಕೆಯನ್ನು ದಾಖಲಿಸಿಕೊಂಡು ಸಹಿ ಪಡೆದು ಕಳುಹಿಸಲಾಗಿದೆ.ಪುನಃ ನೋಟೀಸ್ ನೀಡಿದಾಗ ವಿಚಾರಣೆಗೆ ಬರುವಂತೆ ಸೂಚನೆ ಕೊಡಲಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


