ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದತಿಗೆ ಸಂಬಂಧಿಸಿದಂತೆ ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡುವುದಿಲ್ಲ.ಕೆಲವರು ಬಿಪಿಎಲ್‌ಗೆ ಅರ್ಹರಲ್ಲದವರು ಇದ್ದಾರೆ. ಅವರನ್ನು ತೆಗೆದು ಎಪಿಎಲ್‌ಗೆ ಹಾಕ್ತೀವಿ. ಕಾರ್ಡ್ ಗಳನ್ನು ರದ್ದು ಮಾಡಲ್ಲ ಎಂದರು.
ಇನ್ನು ಬಿಪಿಎಲ್ ಕಾರ್ಡ್ ರದ್ದತಿ ಕುರಿತು ಪ್ರತಿಪಕ್ಷಗಳು ರಾಜಕೀಯವಾಗಿ ಜನರನ್ನು ಎತ್ತಿಕಟ್ಟಿ ಪಕ್ಷದ ಕುರಿತು ಕೆಟ್ಟ ಅಭಿಪ್ರಾಯ ಮೂಡುವಂತೆ ಮಾಡುತ್ತಿದ್ದಾರೆ.
ನಮ್ಮ ರಾಜ್ಯದಲ್ಲಿ ಶೇಕಡಾ. 80ರಷ್ಟು ಬಿಪಿಎಲ್ ಕಾರ್ಡ್‌ಗಳಿವೆ. ಕೇರಳ, ತಮಿಳುನಾಡು, ಆಂಧ್ರ, ತೆಲಂಗಾಣದಲ್ಲಿ ಶೇಕಡಾ50ರಷ್ಟು ಮಾತ್ರ ಬಿಪಿಎಲ್ ಕಾರ್ಡ್ ಗಳಿವೆ. ಬಿಪಿಎಲ್ ಕಾರ್ಡ್ ಗೆ ಅರ್ಹರಲ್ಲದವರನ್ನು ಮಾತ್ರ ತೆಗೆಯುತ್ತೇವೆ ಎಂದು ಸ್ಪಷ್ಟಪಡಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


