Saturday, March 28, 2026
spot_img
More
    spot_img
    HomeStateಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿ ಇಲ್ಲ 250ಕ್ಕೂ ಔಷಧಗಳ ದಾಸ್ತಾನು

    ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿ ಇಲ್ಲ 250ಕ್ಕೂ ಔಷಧಗಳ ದಾಸ್ತಾನು

    ಬೆಂಗಳೂರು: ರಾಜ್ಯದಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿದ್ದರೂ ಜೀವರಕ್ಷಕ ಔಷಧಗಳು ದಾಸ್ತಾನು(ಸ್ಟಾಕ್) ಇಲ್ಲ, ಸುಮಾರು 250ಕ್ಕೂ ಹೆಚ್ಚು ಔಷಧಿಗಳು ಖಾಲಿಯಾಗಿದ್ದು, ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

    ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿ 250 ಔಷಧಗಳ ದಾಸ್ತಾನು ಶೂನ್ಯವಿದೆ. ವಿವಿಧ ಟೆಂಡರ್ ಪ್ರಕ್ರಿಯೆ ಮುಗಿದಿದ್ದರೂ ಆದೇಶಪತ್ರ ನೀಡುವುದಕ್ಕೆ ವಿಳಂಬವಾಗಿದೆ. ಈ ಹಿನ್ನೆಲೆ ಜೀವರಕ್ಷಕ ಔಷಧಗಳು ಪೂರೈಕೆಯಾಗುತ್ತಿಲ್ಲ.

    ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳು ದಾಸ್ತಾನಿರದ ಕಾರಣ ರೋಗಿಗಳು ದುಬಾರಿ ಬೆಲೆ ಕೊಟ್ಟು ಖಾಸಗಿ ಆಸ್ಪತ್ರೆ ಅಥವಾ ಮೆಡಿಕಗೆ ತೆರಳಬೇಕಾದ ಅನಿವಾರ್ಯತೆ ಉಂಟಾಗಿದೆ.

    ಕರ್ನಾಟಕ ಸ್ಟೇಟ್ ಮಿನರಲ್ಸ್‌ ಕಾರ್ಪೋರೇಶನ್ ಲಿಮಿಟೆಡ್ ಔಷಧ ಪೂರೈಕೆಗೆ ಪ್ರತೀ ವರ್ಷ ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತದೆ. ಬ್ಯಾಂಡೇಜ್ ಕ್ಲಾತ್, ಕಾಟನ್, ಸರ್ಜಿಕಲ್ ಗ್ಲೌಸ್, ಗ್ಲೂಕೋಸ್ ಬಾಟಲ್, ಬಯೋಟಿಕ್ ಮಾತ್ರೆ ಸೇರಿದಂತೆ ವಿವಿಧ ವೈದ್ಯಕೀಯ ಸಲಕರಣೆಗಳನ್ನು ಈ ನಿಗಮ ಖರೀದಿಸುತ್ತದೆ.

    ಆದರೆ ಬೇರೆ ರಾಜ್ಯಕ್ಕೆ ಹೋಲಿಸಿದರೆ ಟೆಂಡರ್ ಪ್ರಕ್ರಿಯೆಯಲ್ಲಿ ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಶನ್ ಲಿಮಿಟೆಡ್ ಭಾರೀ ಹಿಂದೆದೆ. ಇದೀಗ ಇದರ ಪರಿಣಾಮ ಸಾಮಾನ್ಯ ವರ್ಗದ ರೋಗಿಗಳ ಮೇಲೆ ಬೀಳುತ್ತಿದೆ.

    ಶ್ವಾಸಕೋಶ, ಕರುಳು, ರಕ್ತಹೀನತೆ, ನ್ಯೂಮೋನಿಯಾ, ಅಸ್ತಮಾ, ಮಧುಮೇಹ, ಬಿ.ಪಿ, ಹೃದಯಾಘಾತ, ಕಣ್ಣಿನ ಸೋಂಕು ಸೇರಿದಂತೆ ಹಲವು ಗಂಭೀರ ಖಾಯಿಲೆಗಳನ್ನು ನಿಭಾಯಿಸುವ ಔಷಧಗಳ ಅಭಾವ ಉಂಟಾಗಿದೆ. ಸರ್ಕಾರಿ ಔಷಧ ದಾಸ್ತಾನು ಕೇಂದ್ರಗಳಲ್ಲಿ ಔಷಧಗಳು ಖಾಲಿಯಾಗಿವೆ. ಮತ್ತೊಂದೆಡೆ, ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿ 250 ಔಷಧಗಳ ದಾಸ್ತಾನು ಸಂಪೂರ್ಣ ಖಾಲಿ ಆಗಿದೆ.

    ಔಷಧ ಪೂರೈಕೆಗೆ ಪ್ರತಿ ವರ್ಷ ಕೆಎಸ್‍ಎಂಸಿಎಲ್ (ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ) ಕೋಟ್ಯಂತರ ರೂ. ಖರ್ಚು ಮಾಡುತ್ತದೆ. ಆದಾಗ್ಯೂ ಈ ವರ್ಷ ಔಷಧ ಕೊರತೆ ಎದುರಾಗಿದೆ.

    ಯಾವೆಲ್ಲ ಔಷಧಗಳು ಔಟ್ ಆಫ್ ಸ್ಟಾಕ್?
    ಶ್ವಾಸಕೋಶ, ಕರುಳು, ರಕ್ತಹೀನತೆ, ನ್ಯಮೋನಿಯಾ, ಅಸ್ತಮಾ, ಮಧುಮೇಹ, ಬಿಪಿ, ಹೃದಯಾಘಾತ, ಕಣ್ಣಿನ ಸೋಂಕು ಸೇರಿದಂತೆ ಹಲವು ಗಂಭೀರ ಖಾಯಿಲೆಗಳಿಗೆ ನೀಡುವ ಔಷಧಗಳೇ ಸದ್ಯಕ್ಕೆ ಔಟ್ ಆಫ್ ಸ್ಟಾಕ್ ಆಗಿವೆ.
    ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ಯಾರಸಿಟಮಲ್, ಅಲ್ಬುಮಿನಿ, ಆಯಂಪ್ಸಿಲಿನ್, ಲೆವೊಥೈರಾಕ್ಸಿನ್, ವಿಲ್ಡಗ್ಲೀಪ್ಟನ್, ಪ್ಯಾರಸಿಟಾ, ನ್ಯುಸ್ಟೊಜಿಮೈನ್, ಸಬ್ಲೋಟೊಮಲ್, ಅಸ್ಟೊಪೈನ್ ಸೇರಿದಂತೆ ವಿವಿಧ ಮಾತ್ರೆಗಳ ಕೊರತೆ ಇದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬ್ರೇಕಿಂಗ್ರಾ! ಮನವಮಿ ಹಬ್ಬಕ್ಕೆ ಮಾರುಕಟ್ಟೆ ಬಂದ್ ಆಗುತ್ತಾ? ಹೂಡಿಕೆದಾರರಿಗೆ ಕ್ಲಿಯರ್ ಮಾಹಿತಿ!

    “ಸ್ಟಾಕ್ ಮಾರ್ಕೆಟ್ ಹಾಲಿಡೇ 2026” ಇದೀಗ ಹೂಡಿಕೆದಾರರಲ್ಲಿ ದೊಡ್ಡ ಗೊಂದಲ ಮೂಡಿಸಿದೆ. ರಾಮನವಮಿ ಹಬ್ಬದ ಹಿನ್ನೆಲೆಯಲ್ಲಿ ಗುರುವಾರ ಅಥವಾ ಶುಕ್ರವಾರ ಷೇರು ಮಾರುಕಟ್ಟೆ ಬಂದ್ ಆಗುತ್ತದೆಯಾ? ಎಂಬ ಪ್ರಶ್ನೆ ಟ್ರೇಡರ್‌ಗಳ ನಡುವೆ ಭಾರೀ...

    ಬ್ರೇಕಿಂಗ್! ಮಾರುಕಟ್ಟೆ ರಾಕೆಟ್—ಸೆನ್ಸೆಕ್ಸ್ 1300 ಪಾಯಿಂಟ್ ಜಿಗಿತ! ರೂಪಾಯಿ ಕುಸಿತ, ಚಿನ್ನ ಏರಿಕೆ… ಏನಿದು ಮಿಶ್ರ ಸಿಗ್ನಲ್?

    “ಸ್ಟಾಕ್ ಮಾರ್ಕೆಟ್ 24 ಮಾರ್ಚ್ 2026” ಹೂಡಿಕೆದಾರರಿಗೆ ಒಂದೇ ದಿನದಲ್ಲಿ ರೋಲರ್ ಕೋಸ್ಟರ್ ಅನುಭವ ನೀಡಿದೆ! ಒಂದೆಡೆ ಷೇರು ಮಾರುಕಟ್ಟೆ ಭರ್ಜರಿ ಏರಿಕೆ ಕಂಡಿದ್ದರೆ, ಇನ್ನೊಂದೆಡೆ ರೂಪಾಯಿ ಕುಸಿತ ಮತ್ತು ಚಿನ್ನದ ಬೆಲೆ...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading