ಬೆಂಗಳೂರು: ವಿಮಾನ ನಿಲ್ದಾಣಗಳ ಮಾದರಿಯಲ್ಲಿ ರಾಜ್ಯ ರಾಜಧಾನಿಯ ಹೃದಯ ಭಾಗದಲ್ಲಿರುವ ಮೆಜೆಸ್ಟಿಕ್ ರೈಲು ನಿಲ್ದಾಣವನ್ನು ಅಭಿವೃದ್ಧಿ ಮಾಡುತ್ತೇವೆ ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಅಭಿವೃದ್ಧಿಗೆ ಡಿಪಿಆರ್ ಸಹ ಸಿದ್ಧವಾಗಿದೆ ಎಂದು ತಿಳಿಸಿದರು.
ರೈಲು ನಿಲ್ದಾಣ ಅಭಿವೃದ್ಧಿಯ ಕುರಿತು ರೈಲ್ವೆ ಮಂಡಳಿ ಕೆಲ ಸ್ಪಷ್ಟನೆ ಕೇಳಿದೆ. ಮುಂದಿನ ದಿನಗಳಲ್ಲಿ ರೈಲ್ವೆ ಮಂಡಳಿ ಮುಂದೆ ಅಗತ್ಯ ಸ್ಪಷ್ಟನೆಗಳನ್ನು ಇಡುತ್ತೇವೆ. ಒಳ್ಳೆಯ ಕೆಲಸಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೇಡ ಎನ್ನುವುದಿಲ್ಲ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಜೊತೆ ಚರ್ಚಿಸಿ ಕೆಲಸ ಆರಂಭಿಸುತ್ತೇವೆ ಎಂದು ತಿಳಿಸಿದ್ದಾರೆ.
ಇನ್ನು ಈ ಅಭಿವೃದ್ಧಿ ಕಾರ್ಯಕ್ಕೆ 1500 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ವಿಮಾನ ನಿಲ್ದಾಣಗಳಿಗಿಂತ ವಿಭಿನ್ನವಾಗಿ ಕೆಎಸ್‌ಆರ್ ಬೆಂಗಳೂರು ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿಪಡಿಸುತ್ತೇವೆ. ಏರ್‌ಪೋರ್ಟ್‌ನಲ್ಲಿ ಸಿಗುವ ಎಲ್ಲಾ ಸವಲತ್ತುಗಳು ಇಲ್ಲಿಯೂ ಸಿಗಲಿವೆ. 160 ಎಕರೆ ಜಾಗ ಖಾಲಿ ಇದ್ದು, ನಿರುದ್ಯೋಗಿಗಳಿಗೆ ಈ ಯೋಜನೆಯಿಂದ ಅನುಕೂಲವಾಗಲಿದೆ ಎಂದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


