Tuesday, November 3, 2026
spot_img
More
    spot_img
    HomeLatest newsಬಿಹಾರದಲ್ಲಿ ಹೊಸ ಸರ್ಕಾರ ರಚನೆ: ಎನ್‌ಡಿಎ ಮೈತ್ರಿಕೂಟದ ಮಹತ್ವದ ಸಭೆ

    ಬಿಹಾರದಲ್ಲಿ ಹೊಸ ಸರ್ಕಾರ ರಚನೆ: ಎನ್‌ಡಿಎ ಮೈತ್ರಿಕೂಟದ ಮಹತ್ವದ ಸಭೆ

    ಬಿಹಾರ ವಿಧಾನಸಭೆ ಚುನಾವಣೆ 2025ರ ಫಲಿತಾಂಶ ಶುಕ್ರವಾರ ಪ್ರಕಟವಾಗಿದೆ. ಜೆಡಿಯು-ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 202 ಸೀಟುಗಳಲ್ಲಿ ಜಯಗಳಿಸಿದ್ದು, ಹೊಸ ಸರ್ಕಾರ ರಚನೆ ಮಾಡಬೇಕಿದೆ. ಸರ್ಕಾರ ರಚನೆ ಕಸರತ್ತು ಆರಂಭವಾಗಿದ್ದು, ಮಹತ್ವದ ಸಭೆಗೆ ದಿನಾಂಕ ನಿಗದಿಯಾಗಿದೆ.

    ಮಂಗಳವಾರ ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಜೈಸ್ವಾಲ್ ಹೊಸ ಸರ್ಕಾರ ರಚನೆ ಕುರಿತು ಮಾತನಾಡಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ 89, ಜೆಡಿಯು 85, ಎಲ್‌ಜೆಪಿ (ಆರ್‌ವಿ) 19, ಹೆಚ್‌ಎಎಂ(ಎಸ್) 5 ಮತ್ತು ಆರ್‌ಎಲ್‌ಎಂ 4 ಸೀಟುಗಳಲ್ಲಿ ಜಯಗಳಿಸಿವೆ. ಸದ್ಯದ ಮಾಹಿತಿ ಪ್ರಕಾರ ಸಿಎಂ ಹುದ್ದೆ ಜೆಡಿಯುಗೆ, 2 ಉಪ ಮುಖ್ಯಮಂತ್ರಿ ಹುದ್ದೆಯನ್ನು ರಚನೆ ಮಾಡಲಾಗುತ್ತದೆ.

    “ನವೆಂಬರ್ 20ರಂದು ಪ್ರಮಾಣ ವಚನ ಸಮಾರಂಭ ನಡೆಯಲಿದೆ” ಎಂದು ದಿಲೀಪ್ ಜೈಸ್ವಾಲ್ ಹೇಳಿದ್ದಾರೆ. ಆದರೆ ಮುಖ್ಯಮಂತ್ರಿ ಯಾರು?, ಯಾವ ಪಕ್ಷಕ್ಕೆ ಎಷ್ಟು ಸಚಿವ ಸ್ಥಾನ?, ಉಪಮುಖ್ಯಮಂತ್ರಿಗಳು ಯಾರು? ಎಂಬ ಕುರಿತು ಅವರು ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.

    ಜೆಡಿಯು ಪಕ್ಷ ಈಗಾಗಲೇ 74 ವರ್ಷದ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಚುನಾವಣಾ ಫಲಿತಾಂಶ ಪ್ರಕಟವಾದ ದಿನವೇ ಘೋಷಣೆ ಮಾಡಿದೆ. ಆದ್ದರಿಂದ ಪಕ್ಷದಲ್ಲಿ ಯಾವುದೇ ಗೊಂದಲ ಇದ್ದಂತೆ ಇಲ್ಲ. ಈ ತೀರ್ಮಾನಕ್ಕೆ ಎನ್‌ಡಿಎ ಮೈತ್ರಿಕೂಟದ ಪಕ್ಷಗಳ ಅನುಮೋದನೆ ಬಾಕಿ ಇದೆ.

    ದಿಲೀಪ್ ಜೈಸ್ವಾಲ್, “ನವೆಂಬರ್ 19ರಂದು ಆರ್‌ಜೆಡಿ, ಬಿಜೆಪಿ ಪಕ್ಷಗಳ ಶಾಸಕಾಂಗ ಪಕ್ಷದ ಸಭೆಗಳು ನಡೆಯಲಿವೆ. ಅಲ್ಲಿಯೇ ಎಲ್ಲಾ ತೀರ್ಮಾನಗಳು ಆಗಲಿದ್ದು, ನವೆಂಬರ್ 20ರಂದು ಪ್ರಮಾಣ ವಚನ ಸಮಾರಂಭ ನಡೆಯಲಿದೆ” ಎಂದು ಹೇಳಿದ್ದಾರೆ.

    “ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಎನ್‌ಡಿಎ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ. ಬುಧವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ಬಳಿಕ ಎನ್‌ಡಿಎ ಮೈತ್ರಿಕೂಟದ ಪಕ್ಷಗಳ ಸಭೆ ನಡೆಯಲಿದೆ” ಎಂದು ತಿಳಿಸಿದ್ದಾರೆ.

    ಬಿಜೆಪಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ನವೆಂಬರ್ 19ರಂದು ಬೆಳಗ್ಗೆ 10 ಗಂಟೆಗೆ ಪಾಟ್ನಾದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಚುನಾವಣೆಯಲ್ಲಿ ಜಯಗಳಿಸಿದ ಎಲ್ಲಾ ಶಾಸಕರು ಮಂಗಳವಾರ ಸಂಜೆಯೇ ಪಾಟ್ನಾಗೆ ಆಗಮಿಸಬೇಕು ಎಂದು ಪಕ್ಷ ಸೂಚನೆ ನೀಡಿದೆ.

    ಶಾಸಕಾಂಗ ಪಕ್ಷದ ಸಭೆಗೆ ಬಿಜೆಪಿ ಹೈಕಮಾಂಡ್ ಇನ್ನೂ ವೀಕ್ಷಕರ ನೇಮಕ ಮಾಡಿಲ್ಲ. ಇಂದು ಮಧ್ಯಾಹ್ನ ವೀಕ್ಷಕರು ಯಾರು? ಎಂಬುದು ತಿಳಿಯಲಿದೆ. ವೀಕ್ಷಕರ ಸಮ್ಮುಖದಲ್ಲಿಯೇ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯನ್ನು ನಡೆಸಲಾಗುತ್ತದೆ.

    ನವೆಂಬರ್ 19ರಿಂದ ಜಾರಿಗೆ ಬರುವಂತೆ ಬಿಹಾರ ಸರ್ಕಾರವನ್ನು ವಿಸರ್ಜನೆ ಮಾಡಬೇಕು ಎಂದು ರಾಜ್ಯಪಾಲರಿಗೆ ಈಗಾಗಲೇ ಶಿಫಾರಸು ಮಾಡಲಾಗಿದೆ. ನವೆಂಬರ್ 20ರಂದು ಪಾಟ್ನಾದ ಗಾಂಧಿ ಮೈದಾನದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ.

    ಮುಖ್ಯಮಂತ್ರಿಗಳ ಜೊತೆಗೆ ಎಷ್ಟು ಜನ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡುತ್ತಾರೆ?, ಯಾವ ಪಕ್ಷದಿಂದ ಎಷ್ಟು? ಎಂಬುದು ಇನ್ನೂ ಗೌಪ್ಯವಾಗಿದೆ. ಎರಡು ಡಿಸಿಎಂ ಸ್ಥಾನವನ್ನು ರಚನೆ ಮಾಡಲಿದ್ದು, ಬಿಜೆಪಿ ಮತ್ತು ಎಲ್‌ಜೆಪಿ (ಆರ್‌ವಿ) ಒಂದು ಸ್ಥಾನವನ್ನು ಹಂಚಿಕೊಳ್ಳಲಿವೆ ಎಂಬ ಮಾಹಿತಿ ಸದ್ಯಕ್ಕೆ ಸಿಕ್ಕಿದೆ.

    ಬಿಹಾರ ರಾಜ್ಯದ 243 ಸೀಟುಗಳ ಪೈಕಿ ಬಿಜೆಪಿ 89 ಸೀಟುಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಎನ್‌ಡಿಎ ಮೈತ್ರಿಕೂಟದ ಒಪ್ಪಂದದ ಪ್ರಕಾರ ಪಕ್ಷ 85 ಸ್ಥಾನ ಗೆದ್ದಿರುವ ಜೆಡಿಯುಗೆ ಮುಖ್ಯಮಂತ್ರಿ ಹುದ್ದೆಯನ್ನು ಬಿಟ್ಟುಕೊಡಲಿದೆ.

    ಬಿಹಾರ ವಿಧಾನಸಭೆ ಸ್ಪೀಕರ್ ಸ್ಥಾನಕ್ಕಾಗಿ ಜಟಾಪಟಿ ಜೋರಾಗಿದೆ. ಬಿಜೆಪಿ ಸಿಎಂ ಹುದ್ದೆ ಬಿಟ್ಟುಕೊಟ್ಟಿರುವ ಕಾರಣ ಸ್ಪೀಕರ್ ಹುದ್ದೆ ಬೇಕು ಎಂದು ಬೇಡಿಕೆ ಇಟ್ಟಿದೆ. ಆದರೆ ಜೆಡಿಯು ಸ್ಪೀಕರ್ ಹುದ್ದೆ ತಮ್ಮ ಪಕ್ಷಕ್ಕೆ ಬೇಕು ಎನ್ನುತ್ತಿದೆ. ಆದ್ದರಿಂದ ಸ್ಪೀಕರ್ ಹುದ್ದೆ ಯಾವ ಪಕ್ಷಕ್ಕೆ? ಎಂಬ ಚರ್ಚೆ ಜೋರಾಗಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search