ಕರ್ನಾಟಕ ಸರ್ಕಾರ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿಯನ್ನು ನೀಡಿದೆ. ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿ. ನೋಂದಣಿಯಾಗಿದೆ. ಈ ಕುರಿತ ಪತ್ರವನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಹಸ್ತಾಂತರ ಮಾಡಲಾಗಿದೆ.
ಮಹಿಳೆಯರ ಆರ್ಥಿಕ ಶಕ್ತಿಗಾಗಿ 3 ಲಕ್ಷವರೆಗೆ ಕಡಿಮೆ ಬಡ್ಡಿದರ ಸಾಲ ನೀಡಲಾಗುತ್ತದೆ. ಇದಕ್ಕಾಗಿಯೇ 2025-26ರ ಬಜೆಟ್ ಭಾಷಣದಲ್ಲಿ ಘೋಷಣೆ ಮಾಡಿದಂತೆ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಸ್ಥಾಪನೆ ಮಾಡಲಾಗಿದ್ದು, ಇದನ್ನು ನೋಂದಣಿಯೂ ಮಾಡಿಸಲಾಗಿದೆ.
ಸಂಘದ ನೋಂದಣಿ ಕುರಿತು ಲಕ್ಷ್ಮೀಪತಯ್ಯ ಸಹಕಾರ ಸಂಘಗಳ ಅಪರ ನಿಬಂಧಕರು, (ವಸತಿ ಮತ್ತು ಇತರೆ) ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶ ಉದ್ದೇಶಿತ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿ, ನಂ.18, 2ನೇ ಮಹಡಿ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಕಛೇರಿ ಆವರಣ, ಕೃಷಿ ಭವನ, ನೃಪತುಂಗ ರಸ್ತೆ, ಬೆಂಗಳೂರು-01 ನೋಂದಾಯಿಸುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.
ಪ್ರಸ್ತಾವನೆ: ಉದ್ದೇಶಿತ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿ, ನಂ.18, 2ನೇ ಮಹಡಿ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಕಛೇರಿ ಆವರಣ, ಕೃಷಿ ಭವನ, ನೃಪತುಂಗ ರಸ್ತೆ, ಬೆಂಗಳೂರು-01 ಈ ಸಹಕಾರ ಸಂಘದ ಈ ಸಂಘವನ್ನು ನೋಂದಣಿ ಮಾಡುವ ಸಲುವಾಗಿ ಉದ್ದೇಶಿತ ಸಹಕಾರ ಸಂಘದ ಮುಖ್ಯ ಪ್ರವರ್ತಕರು, ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರವರ ಮುಖಾಂತರ ಸಲ್ಲಿಸಿರುವ ಪ್ರಸ್ತಾವನೆಯನ್ನು ಸಹಕಾರ ಸಂಘಗಳ ಸಹಕಾರ ಅಭಿವೃದ್ಧಿ ಅಧಿಕಾರಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಛೇರಿ, 1ನೇ ವಲಯ, ಬೆಂಗಳೂರು ನಗರ ಜಿಲ್ಲೆ ರವರಿಗೆ ಕಳುಹಿಸಿ ಸಾಧ್ಯತಾ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿತ್ತು.
ಸದರಿಯವರು ನೀಡಿದ ಸಾಧ್ಯತಾ ವರದಿಯನ್ನು ಪರಿಗಣಿಸಿ ಈ ಕಛೇರಿಯ ಸಂಘದ ನೋಂದಣಿ ಪೂರ್ವ ಷೇರು ಸಂಗ್ರಹ ಅನುಮತಿ ಪತ್ರದಲ್ಲಿ ಪ್ರಾರಂಭಿಕ ಷೇರು ಹಣ ಸಂಗ್ರಹಣೆಗಾಗಿ ಸಂಘದ ಕಾರ್ಯ ವ್ಯಾಪ್ತಿಯಲ್ಲಿ ಬರುವ 1000ಕ್ಕಿಂತ ಕಡಿಮೆ ಇಲ್ಲದ ಅರ್ಹ ಜನರಿಂದ ಕನಿಷ್ಟ ರೂ.20 ಲಕ್ಷಗಳ ಷೇರು ಹಣವನ್ನು ಸಂಗ್ರಹಿಸಲು ಷರತ್ತು ವಿಧಿಸಿ ಅನುಮತಿ ನೀಡಲಾಗಿರುತ್ತದೆ.
ಉದ್ದೇಶಿತ ಸಹಕಾರ ಸಂಘದ ಮುಖ್ಯ ಪ್ರವರ್ತಕರು, ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರವರ ಮುಖಾಂತರ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ಉದ್ದೇಶಿತ ಸಂಘದ ನೋಂದಣಿಗಾಗಿ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ. ಸದರಿಯವರು ಸಲ್ಲಿಸಿರುವ ಪ್ರಸ್ತಾವನೆಯನ್ನು ಪರಿಶೀಲಿಸಿದಾಗ ಉದ್ದೇಶಿತ ಸಹಕಾರ ಸಂಘದ ಮುಖ್ಯ ಪ್ರವರ್ತಕರು ಕಾರ್ಯವ್ಯಾಪ್ತಿಯಲ್ಲಿ ಬರುವಂತಹ ಈವರೆಗೆ 2000 ಜನರಿಂದ ಒಟ್ಟು ರೂ. 22.23 ಲಕ್ಷಗಳ ಷೇರು ಮೊತ್ತವನ್ನು ಸಂಗ್ರಹಿಸಿ ಕರ್ನಾಟಕ ರಾಜ್ಯ ಸಹಕಾರಿ ಅಫೆಕ್ಸ್ ಬ್ಯಾಂಕ್ ಲಿ, ಬೆಂಗಳೂರು ಇಲ್ಲಿ ಠೇವಣಿಕರಿಸಿರುತ್ತಾರೆ.
ಈ ಸಂಬಂಧ ಬ್ಯಾಂಕಿನಿಂದ ಅಮಾನತ್ ಖಾತೆಯ ಸ್ಟೇಟ್ಮೆಂಟ್ನ್ನು ಪಡೆದು ಸಲ್ಲಿಸಿರುತ್ತಾರೆ. ಉದ್ದೇಶಿತ ಸಹಕಾರ ಸಂಘದ ನೋದಣಿ ಸಂಬಂಧ ನೋಂದಣಿ ಶುಲ್ಕ ರೂ.2000ಗಳನ್ನು ಬ್ಯಾಂಕಿನಲ್ಲಿ ಪಾವತಿಸಿ ಚಲನ್ ಸಲ್ಲಿಸಿರುತ್ತಾರೆ. ಉದ್ದೇಶಿತ ಸಹಕಾರ ಸಂಘದ ಉಪವಿಧಿಯ ಉದ್ದೇಶಿತ ಸಹಕಾರ ಸಂಘವನ್ನು ನೋಂದಣಿ ಮಾಡಿಕೊಡಬೇಕಾಗಿ ಕೋರಿರುತ್ತಾರೆ.
ಈ ಹಿನ್ನಲೆಯಲ್ಲಿ ಉದ್ದೇಶಿತ ಸಹಕಾರ ಸಂಘದ ಮುಖ್ಯ ಪ್ರವರ್ತಕರು ನಿರ್ದೇಶಕರು, ಮಹಿಳಾ ಅಭಿವೃದ್ಧಿ ಇಲಾಖೆ ರವರ ಮುಖಾಂತರ ಸಲ್ಲಿಸಿರುವ ಪ್ರಸ್ತಾವನೆಯನ್ನು ಪರಿಗಣಿಸಿ ಉದ್ದೇಶಿತ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿ, ಸಹಕಾರ ಸಂಘವನ್ನು ನೋಂದಾಯಿಸುವುದು ಸೂಕ್ತವೆಂದು ತೀರ್ಮಾನಿಸಿ ಆದೇಶ ಹೊರಡಿಸಲಾಗಿದೆ.
ಆದೇಶ: ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959ರ ಕಲಂ 07 ರನ್ವಯ ಸರ್ಕಾರದ ಅಧಿಸೂಚನೆ ಸಂಖ್ಯೆ:ಸಿಒ:71:ಸಿಎಲ್ಎಂ:2016 ದಿನಾಂಕ 06-12-2016ರಂತೆ ಪ್ರತ್ಯಾಯೋಜಿತವಾಗಿರುವ ಅಧಿಕಾರ ದನ್ವಯ ಲಕ್ಷ್ಮೀಪತಯ್ಯ, ಕೆ.ಸಿ.ಎಸ್., ಸಹಕಾರ ಸಂಘಗಳ ಅಪರ ನಿಬಂಧಕರು (ವಸತಿ ಮತ್ತು ಇತರೆ), ಸಹಕಾರ ಸಂಘಗಳ ನಿಬಂಧಕರ ಕಛೇರಿ, ಬೆಂಗಳೂರು ಅಧಿಕಾರವನ್ನು ಚಲಾಯಿಸುತ್ತಾ ಉದ್ದೇಶಿತ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿ, ಸಂಘವನ್ನು ನೋಂದಣಿ ಮಾಡಿದ್ದಾರೆ.
ಈ ಹಿಂದಿನ ಯೋಜನೆಯಂತೆ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ನವೆಂಬರ್ 19ರಂದು ಉದ್ಘಾಟನೆ ಮಾಡಬೇಕಿತ್ತು. ಆದರೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಕಾರ್ಯಕ್ರಮಕ್ಕೆ ಆಗಮಿಸಬೇಕಾದ ಹಿನ್ನಲೆಯಲ್ಲಿ ಕಾರ್ಯಕ್ರಮ ಮುಂದೂಡಿಕೆ ಮಾಡಲಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


