ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ತೂಗುದೀಪ ಸೇರಿದಂತೆ ಇತರರಿಗೆ ಹೈಕೋರ್ಟಿನ ಏಕಸದಸ್ಯ ಪೀಠ ನೀಡಿರುವ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಬೆಂಗಳೂರು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಈ ಕುರಿತು ಮಾತನಾಡಿರುವ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ , ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ, ನಟ ದರ್ಶನ್ ತೂಗುದೀಪ ಹಾಗೂ ಇತರೆ ಆರೋಪಗಳಿಗೆ ದೊರೆತಿರುವ ಮಧ್ಯಂತರ ಜಾಮೀನು ತೆರವಿಗೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು. ಮೇಲ್ಮನವಿ ಸಲ್ಲಿಸುವ ಸಂಬಂಧ ಸರ್ಕಾರದಿಂದ ಅನುಮತಿ ದೊರೆತ್ತಿದ್ದು, ಸದ್ಯದಲ್ಲೇ ಕೋರ್ಟ್‌ಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಹೈಕೋರ್ಟಿನ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡುತ್ತೇವೆ. ಕೋರ್ಟ್ ಗೆ ಹೋಗಲು ತಯಾರಿ ನಡೆದಿದ್ದು ಶೀಘ್ರವೇ ಅರ್ಜಿ ಸಲ್ಲಿಸಲಾಗುವುದು ಎಂದು ದಯಾನಂದ್ ಹೇಳಿದ್ದಾರೆ. ನಟ ದರ್ಶನ್ ಗೆ ಜಾಮೀನು ನೀಡಿರುವುದನ್ನು ವಿರೋಧಿಸಿರುವ ಪೊಲೀಸರು ಸಾಕ್ಷಿ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದು ಆರೋಪಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದಾರೆ.
ಮಧ್ಯಂತರ ಜಾಮೀನು ತೆರವು ಕೋರಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ಈಗಾಗಲೇ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಹೀಗಾಗಿ ಕನ್ನಡದಲ್ಲಿರುವ ಪ್ರಕರಣದ ಚಾರ್ಜ್ಶೀಟ್ ಅನ್ನು ಪೊಲೀಸರು ಇಂಗ್ಲಿಷ್ಗೆ ತರ್ಜುಮೆಗೊಳಿಸಿದ್ದಾರೆ.
ಹೈಕೋರ್ಟ್‌ನಲ್ಲಿ ಎಸ್ಎಲ್‌ಪಿ (ಸ್ಪೆಷಲ್ ಲೀವ್ ಪಿಟಿಷನ್) ಇತ್ಯರ್ಥವಾದ ಬಳಿಕ ದರ್ಶನ್‌ಗೆ ದೊರೆತಿರುವ ಮಧ್ಯಂತರ ಜಾಮೀನು ಪ್ರಶ್ನಿಸಿ ಸರ್ವೋಚ್ಛ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲು ತಯಾರಿ ಮಾಡಿಕೊಳ್ಳಲಾಗಿದೆ.
ದರ್ಶನ್ ಜಾಮೀನು ಅರ್ಜಿಯನ್ನು 57ನೇ ಸಿಸಿಹೆಚ್ ನ್ಯಾಯಾಲಯ ವಜಾಗೊಳಿಸಿತ್ತು. ಆ ಬಳಿಕ ಅವರು ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ದರ್ಶನ್ರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ದರ್ಶನ್, ಪವಿತ್ರಾ ಗೌಡ, ಪ್ರದೋಶ್, ಅನುಕುಮಾರ್, ನಾಗರಾಜು, ಲಕ್ಷ್ಮಣ್, ಜಗದೀಶ್ ಅವರಿಗೆ ಜಾಮೀನು ಮಂಜೂರು ಮಾಡಿದ್ದರು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜುಲೈ 11 ರಂದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ಪ್ರಸ್ತುತ ಅವರು ಅನಾರೋಗ್ಯದ ಕಾರಣ ನೀಡಿ ಹೈಕೋರ್ಟ್ನಿಂದ ಮಧ್ಯಂತರ ಜಾಮೀನು ಪಡೆದಿದ್ದರು.
ಬೆನ್ನು ನೋವಿನ ಕಾರಣ ನಟ ದರ್ಶನ್ ಮಧ್ಯಂತರ ಜಾಮೀನಿನ ಮೇಲೆ ಹೊರಬಂದು ಕೆಂಗೇರಿ ಬಳಿ ಇರುವ ಬಿಜಿಎಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ವೈದ್ಯರು ಅವರನ್ನು ವಿಐಪಿ (VIP Suit) ಇರಿಸಿ ಚಿಕಿತ್ಸೆ ನೀಡಿದ್ದರು. ಬಳ್ಳಾರಿ ಜೈಲಿನಲ್ಲಿದ್ದ ದರ್ಶನ್ ಬೆನ್ನುಹುರಿ ನೋವಿನಿಂದ ಬಳಲುತ್ತಿದ್ದರು. ಅಂತೆಯೇ ಅವರಿಗೆ ಅಲ್ಲಿನ ವಿಮ್ಸ್ ಆಸ್ಪತ್ರೆಯಲ್ಲಿ ಎಂಆರ್ಐ ಸ್ಕ್ಯಾನ್ ಮಾಡಿಸಲಾಗಿತ್ತು. ಆ ಬಳಿಕ ಶಸ್ತ್ರಚಿಕಿತ್ಸೆಗೆ ಅಗತ್ಯತೆ ಬಗ್ಗೆ ವೈದ್ಯರು ಸಲಹೆ ನೀಡಿದ್ದರು.ಜೈಲಿನಿಂದ ಬಿಡುಗಡೆಯಾದ ಒಂದು ವಾರದಲ್ಲಿ ವೈದ್ಯಕೀಯ ವರದಿ ಸಲ್ಲಿಸುವಂತೆ ಕೋರ್ಟ್ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ದರ್ಶನ್ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ಬಳಿಕ ಅವರ ಆರೋಗ್ಯ ಪರಿಸ್ಥಿತಿ ಮತ್ತು ಚಿಕಿತ್ಸೆ ಕುರಿತ ವೈದ್ಯಕೀಯ ವರದಿಯನ್ನು ಹೈಕೋರ್ಟ್ಗೆ ದರ್ಶನ್ ಪರ ವಕೀಲರು ನವೆಂಬರ್ 6ರಂದು ಸಲ್ಲಿಸಿದ್ದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


