Tuesday, March 24, 2026
spot_img
More
    spot_img
    HomeLatest newsಜೈಲುಗಳಲ್ಲಿ ಕೈದಿಗಳ ಐಷಾರಾಮಿ ಜೀವನದ ವಿಡಿಯೊಗಳು ಹಿಂದಿನ ಸರ್ಕಾರದಲ್ಲಿ ನಡೆದ ಘಟನೆಗಳದ್ದು: ಪರಮೇಶ್ವರ್

    ಜೈಲುಗಳಲ್ಲಿ ಕೈದಿಗಳ ಐಷಾರಾಮಿ ಜೀವನದ ವಿಡಿಯೊಗಳು ಹಿಂದಿನ ಸರ್ಕಾರದಲ್ಲಿ ನಡೆದ ಘಟನೆಗಳದ್ದು: ಪರಮೇಶ್ವರ್

    ಬೆಳಗಾವಿ- ಇತ್ತಿಚೆಗೆ ರಾಜ್ಯದ ವಿವಿಧ ಕಡೆ ಜೈಲುಗಳಲ್ಲಿ ಆರೋಪಿಗಳು ಹಾಗು ಅಪರಾಧಿಗಳು ಐಷರಾಮಿ ಜೀವನ ನಡೆಸುತ್ತಿರುವ ಕುರಿತು ಹೊರಬಂದ ವಿಡಿಯೋಗಳು ಹಿಂದಿನ ಸರ್ಕಾರದಲ್ಲಿ ನಡೆದ ಘಟನೆಗಳು ಎಂದು ಗೃಹಸಚಿವ ಪರಮೇಶ್ವರ್ ಹೇಳಿದ್ದಾರೆ.

    ಬಿಜೆಪಿ ಸದಸ್ಯ ಕಿಶೋರ್‍ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಾರಾಗೃಹದಲ್ಲಿ ಎಣ್ಣೆ ಮಾರಾಟ, ನೃತ್ಯ, ಸ್ಯಾಟಲೈಟ್ ಫೆÇೀನ್ ಬಳಕೆ, ಮೊಬೈಲ್ ಬಳಕೆ, ಡ್ರಗ್ ದಂಧೆ ಸೇರಿದಂತೆ ಇತ್ಯಾದಿ ವಿಷಯಗಳು ಹೊರಬಂದಿವೆ. ಈ ಎಲ್ಲ ಘಟನೆಗಳು ಇತ್ತಿಚೆಗೆ ನಡೆದಿಲ್ಲ. ಬದಲಿಗೆ ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಿರುವ ಘಟನೆಗಳಾಗಿವೆ ಎಂದು ತಿರುಗೇಟು ನೀಡಿದರು.

    ನಾವು ಈ ಘಟನೆಗಳು ನಡೆದ ನಂತರ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕೂಲಂಕುಷವಾಗಿ ಪರಿಶೀಲಿಸಿ, ವೈಜ್ಞಾನಿಕವಾಗಿಯೂ ತನಿಖೆ ನಡೆಸಿ ವರದಿ ನೀಡಿದ್ದಾರೆ. ಇದು ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದ ಘಟನೆಗಳು. ನಾನು ಇದಕ್ಕೆ ಸದನದಲ್ಲಿ ಸಾಕ್ಷಿ ಒದಗಿಸುತ್ತೆ?ನೆ ಎಂದು ಸವಾಲು ಹಾಕಿದರು.

    ನಾವು ಇಂತಹ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಯಲು ಬಹಳ ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಇದರಲ್ಲಿ ಶಾಮೀಲಾದ ಅಧಿಕಾರಿಗಳನ್ನು ಅಮಾನತುಪಡಿಸಿದ್ದೇವೆ. ಕೆಲವು ಕಡೆ ದಾಳಿಯನ್ನೂ ನಡೆಸಿದ್ದೇವೆ. ಸರ್ಕಾರ ಏನೂ ಮಾಡಿಯೇ ಇಲ್ಲ ಕಣ್ಣಮುಚ್ಚಿ ಕಟ್ಟಿ ಕೂತಿರೆ ಇಷ್ಟೆಲ್ಲಾ ಮಾಡಲು ಸಾಧ್ಯವೇ ಎಂದು ಪ್ರಶ್ನೆ ಮಾಡಿದರು.

    ನಾವು ದಾಳಿ ಮಾಡಿದ ಸಂದರ್ಭದಲ್ಲಿ ಮೊಬೈಲ್, ಚಾಕುಗಳು ಸಿಕ್ಕಿವೆ. ತಪ್ಪಿತಸ್ಥರನ್ನು ಬಿಡುವುದಿಲ್ಲ. ಜೈಲಿನಲ್ಲಿ ಜಾಮರ್ ಹಾಕಿದರೆ ಅಪರಾಧಿಗಳು ಅದನ್ನೂ ಸಹ ಕೆಡಿಸಿ ಹಾಕುತ್ತಾರೆ. ಮಂಗಳೂರಿನಲ್ಲಿ ಜಾಮರ್ ಹಾಕಿದರೆ ಅಕ್ಕಪಕ್ಕದ ಮನೆಗಳಿಗೆ ನೆಟ್‍ವರ್ಕ್ ಸಿಗುವುದಿಲ್ಲ. ತಮ ಮನೆಗಳಿಗೆ ನೆಟ್‍ವರ್ಕ್ ಬರದಿದ್ದರೆ ಅವರು ದೂರುತ್ತಾರೆ. ಹಾಗಾದರೆ ನಾವು ಏನು ಮಾಡಬೇಕು ಎಂದು ಪರಮೇಶ್ವರ್ ಪ್ರಶ್ನೆ ಮಾಡಿದರು.

    ಈ ವೇಳೆ ಸದಸ್ಯ ಕಿಶೋರ್‍ಕುಮಾರ್ ಸದನದಲ್ಲಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಆಗ ಪರಮೇಶ್ವರ್ ಅವರ ಹೆಸರನ್ನು ಏಕೆ ಪ್ರಸ್ತಾಪ ಮಾಡಿದ್ದೀರಿ ಎಂದು ಪ್ರಶ್ನಿಸಿದರು.

    ಆಗ ಎದ್ದು ನಿಂತ ಶಿವಕುಮಾರ್ ಅವರು, ನನ್ನ ಮನೆಗೆ ಯಾವ ದೂರವಾಣಿ ಕರೆಯೂ ಬಂದಿಲ್ಲ. ನನಗೆ ಯಾರೂ ಕರೆಯನ್ನೂ ಮಾಡಿಲ್ಲ. ನಾನು ಹಿಂದೆ ಬಂಧಿಖಾನೆ ಸಚಿವನಾಗಿದ್ದೆ. ಹಾಗಾಗಿ ನನಗೆ ಅಲ್ಲಿ ಏನೇನು ನಡೆಯುತ್ತದೆ ಎಂಬ ಮಾಹಿತಿ ಇದೆ ಎಂದು ಹೇಳಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬ್ರೇಕಿಂಗ್! ರೂಪಾಯಿ ಕುಸಿತ—ಮೊದಲ ಬಾರಿಗೆ ₹93 ದಾಟಿದ ಡಾಲರ್, ಆರ್ಥಿಕತೆಗೆ ಶಾಕ್!

    “ರೂಪಾಯಿ ಕುಸಿತ 93” ಇದೀಗ ದೇಶದ ಆರ್ಥಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆ, ಭಾರತೀಯ ರೂಪಾಯಿ ಇತಿಹಾಸದಲ್ಲೇ ಮೊದಲ ಬಾರಿಗೆ ಡಾಲರ್ ಎದುರು ₹93 ಗಡಿ...

    ತೆಲಂಗಾಣ ಬಜೆಟ್ 2026: ಆರೋಗ್ಯ ಕ್ಷೇತ್ರಕ್ಕೆ ಭಾರೀ ಉತ್ತೇಜನ—₹1286 ಕೋಟಿ ಹೆಚ್ಚಳ!

    “ತೆಲಂಗಾಣ ಆರೋಗ್ಯ ಬಜೆಟ್ 2026” ಈಗ ರಾಜ್ಯ ರಾಜಕೀಯ ಹಾಗೂ ಸಾರ್ವಜನಿಕರಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆರೋಗ್ಯ ಸೇವೆಗಳನ್ನು ಬಲಪಡಿಸಲು ಸರ್ಕಾರ ದೊಡ್ಡ ಮಟ್ಟದ ಹೂಡಿಕೆ ಮಾಡಿದ್ದು, ಹೆಚ್ಚುವರಿ ₹1286 ಕೋಟಿ ಅನುದಾನ...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading