ಬೆಂಗಳೂರು: ಪರಿಚಯವಾದ ಹುಡುಗನ ಜತೆ ಲೈಂಗಿಕ ಸಂಪರ್ಕ; ವಿಡಿಯೊ ಬೆದರಿಕೆಯೊಡ್ಡಿ ಸ್ನೇಹಿತರಿಂದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್
ರಾಮನಗರ: ರಾಮನಗರದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಎಸಗಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ವಿಕಾಸ್, ಪ್ರಶಾಂತ್, ಚೇತನ್ ಎಂದು ಗುರುತಿಸಲಾಗಿದ್ದು, ಮಾಗಡಿ ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಕಾಲೇಜೊಂದರಲ್ಲಿ 19 ವರ್ಷದ ಯುವತಿ ಓದುತ್ತಿದ್ದಳು. ವಿಕಾಸ್ ಎಂಬಾತ ಯುವತಿಯನ್ನು ಪರಿಚಯ ಮಾಡಿಕೊಂಡು ಆಕೆಯ ಜೊತೆ ಲೈಂಗಿಕ ಸಂಪರ್ಕ ಹೊಂದಿದ್ದ. ಅದನ್ನು ವಿಡಿಯೋ ಮಾಡಿಕೊಂಡ ವಿಕಾಸ್ ನಾನು ಕರೆದಾಗಲೆಲ್ಲಾ ಬರಬೇಕು. ಇಲ್ಲವಾದಲ್ಲಿ ವಿಡಿಯೋ ವೈರಲ್ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದನು. ಈ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿದ ವಿಕಾಸ್ ಸ್ನೇಹಿತರಾದ ಪ್ರಶಾಂತ್, ಚೇತನ್ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಇದರಿಂದ ಮನನೊಂದ ವಿದ್ಯಾರ್ಥಿನಿ ಮಾಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


