Tuesday, November 3, 2026
spot_img
More
    spot_img
    HomeStateDistrictನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್ ಕೊಟ್ಟ ಬಿಎಂಟಿಸಿ, ಬಿಎಂಆರ್‌ಸಿಎಲ್

    ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್ ಕೊಟ್ಟ ಬಿಎಂಟಿಸಿ, ಬಿಎಂಆರ್‌ಸಿಎಲ್

    ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಡಿಸೆಂಬರ್‌ 22ರಿಂದ ಮಾರ್ಗದಲ್ಲಿ 6ನೇ ರೈಲು ಸಂಚಾರವನ್ನು ನಡೆಸಲಿದೆ. ಈಗ ಬಿಎಂಟಿಸಿ ಮತ್ತು ಬಿಎಂಆರ್‌ಸಿಎಲ್ ಈ ಮಾರ್ಗದ ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟಿವೆ.

    ಆರ್.ವಿ.ರಸ್ತೆ-ಬೊಮ್ಮಸಂದ್ರ ನಡುವಿನ 19.15 ಕಿ.ಮೀ. ಹಳದಿ ಮಾರ್ಗ ಎಲೆಕ್ಟ್ರಾನಿಕ್ ಸಿಟಿಗೆ ಸಂಪರ್ಕವನ್ನು ಕಲ್ಪಿಸುತ್ತದೆ. ಬಿಎಂಆರ್‌ಸಿಎಲ್ ಮತ್ತು ಬಿಎಂಟಿಸಿ ಜಂಟಿಯಾಗಿ ಈ ಮಾರ್ಗದಲ್ಲಿ ಬಸ್ ನಿಲ್ದಾಣಗಳ ವ್ಯವಸ್ಥೆ ಮಾಡುವ ಮೂಲಕ ಎರಡೂ ಸಂಸ್ಥೆಗಳ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಟ್ಟಿದೆ.

    ಈ ಕುರಿತು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಹಳದಿ ಮಾರ್ಗದಲ್ಲಿನ ಮೆಟ್ರೋ ನಿಲ್ದಾಣಗಳ ಸಮೀಪ ಬಿಎಂಟಿಸಿ ಬಸ್ ನಿಲ್ದಾಣಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದೆ.

    ಬಿಎಂಆರ್‌ಸಿಎಲ್‌ ವತಿಯಿಂದ ರಾಷ್ಟ್ರೀಯ ವಿದ್ಯಾಲಯ ರಸ್ತೆ – ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ಹಳದಿ ಮಾರ್ಗದಲ್ಲಿ 11 ಆಗಸ್ಟ್ 2025 ರಿಂದ ಮೆಟ್ರೋ ರೈಲು ಸೇವೆ ಆರಂಭಿಸಲಾಗಿದೆ.

    ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಆರ್‌ಸಿಎಲ್‌ ಮತ್ತು ಬಿಎಂಟಿಸಿ ಸಂಯುಕ್ತವಾಗಿ ಮಾರ್ಗ ಪರಿಶೀಲನೆ ನಡೆಸಿ, ಮೆಟ್ರೋ ನಿಲ್ದಾಣಗಳ ಸಮೀಪ ಬಸ್ ನಿಲ್ದಾಣಗಳನ್ನು ಹೊಸದಾಗಿ ಸಾಪಿಸಲಾಗಿದ್ದು ಹಾಗೂ ಕೆಲವು ಬಸ್ ವಿಲ್ದಾಣಗಳನ್ನು ಸ್ಥಳಾಂತರಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ಹೇಳಿದೆ.

    ಮೆಟ್ರೋ ನಿಲ್ದಾಣ ಸಮೀಪ ಹೊಸ ಬಸ್ ನಿಲ್ದಾಣಗಳು

    * ಬಯೋಕಾನ್ ಹಬ್ಬಗೋಡಿ

    *  ಬೆರೆಟೇನ ಅಗ್ರಹಾರ

    * ಸಿಂಗಸಂದ್ರ

    * ಹೊಂಗಸಂದ್ರ

    * ಸೆಂಟ್ರಲ್ ಸಿಲ್ಕ್ ಬೋರ್ಡ್

    * ಆರ್.ವಿ.ರಸ್ತೆ

     ಮೆಟ್ರೋ ನಿಲ್ದಾಣದ ಸಮೀಪ ಸ್ಥಳಾಂತರಿಸಿರುವ ಬಸ್ ನಿಲ್ದಾಣಗಳು

    * ಎಲೆಕ್ಟ್ರಾನಿಕ್ ಸಿಟಿ

    * ಹೊಸ ರಸ್ತೆ

    * ರಾಗಿಗುಡ

    ಜಯದೇವ, ಬಿಟಿಎಂ ಲೇಔಟ್, ಬೊಮ್ಮನಹಳ್ಳಿ, ಕುಡ್ಲುಗೇಟ್ ಹಾಗೂ ಇನ್ಫೋಸಿಸ್ ಫೌಂಡೇಶನ್ (ಕೊನಪ್ಪನ ಅಗ್ರಹಾರ) ಮೆಟ್ರೋ ನಿಲ್ದಾಣಗಳಲ್ಲಿ ಬಸ್ ನಿಲ್ದಾಣಗಳು ಈಗಾಗಲೇ 100 ಮೀಟರ್ ಒಳಗೆ ಲಭ್ಯವಿವೆ.

    ಹಸ್ಕೂರು ರಸ್ತೆ ಮತ್ತು ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ಮೆಟ್ರೋ ನಿಲ್ದಾಣಗಳಲ್ಲಿ ಸ್ಥಳದ ಕೊರತೆಯಿಂದಾಗಿ ಬಸ್ ನಿಲ್ದಾಣಗಳನ್ನು ಸ್ಥಳಾಂತರಿಸಲು ಸಾಧ್ಯವಾಗಿಲ್ಲ.

    ಬಿಎಂಟಿಸಿ, ನಮ್ಮ ಮೆಟ್ರೋ ಮೊದಲಿನಿಂದಲೂ ಪ್ರಯಾಣಿಕರನ್ನು ಸೆಳೆಯಲು ಪೈಪೋಟಿ ನಡೆಸುತ್ತಿವೆ. ನಮ್ಮ ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿ ಮೆಟ್ರೋ ಫೀಡರ್ ಬಸ್‌ಗಳನ್ನು ಓಡಿಸುತ್ತದೆ. ಈ ಬಸ್‌ಗಳು ವಿವಿಧ ಬಡಾವಣೆಗಳಿಂದ ನಮ್ಮ ಮೆಟ್ರೋ ನಿಲ್ದಾಣವನ್ನು ಸಂಪರ್ಕಿಸುತ್ತವೆ. ನಮ್ಮ ಮೆಟ್ರೋ ನಿಲ್ದಾಣಗಳಿಂದ ಬೇರೆ ಬೇರೆ ಬಡಾವಣೆಗಳಿಗೆ ಸಂಚಾರವನ್ನು ನಡೆಸುತ್ತದೆ.

    ನಮ್ಮ ಮೆಟ್ರೋ ನಿಲ್ದಾಣದ ಸಮೀಪ ಆಟೋ, ಕ್ಯಾಬ್ ಚಾಲಕರು ಪ್ರಯಾಣಿಕರನ್ನು ಸುಲಿಗೆ ಮಾಡುವುದನ್ನು ತಪ್ಪಿಸಲು ಬಿಎಂಟಿಸಿ ಬಸ್‌ ಸೇವೆಯನ್ನು ಒದಗಿಸುತ್ತದೆ. ಆದರೆ ಹಲವು ಬಸ್ ನಿಲ್ದಾಣಗಳು ಮೆಟ್ರೋ ನಿಲ್ದಾಣದ ಸಮೀಪವಿಲ್ಲ. ಪ್ರಯಾಣಿಕರು ಮೆಟ್ರೋ ಏರಲು ಅಥವ ಮೆಟ್ರೋದಿಂದ ಇಳಿದ ಮೇಲೆ ಬಸ್ ಹತ್ತಲು ದೂರ ಹೋಗಬೇಕು. ಆದ್ದರಿಂದ ಈಗ ಮೆಟ್ರೋ ನಿಲ್ದಾಣದ ಸಮೀಪವೇ ಬಸ್ ನಿಲ್ದಾಣವನ್ನು ಸ್ಥಳಾಂತರ ಮಾಡಲಾಗಿದೆ.

    ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ 15 ನಿಮಿಷಕ್ಕೆ ಒಂದರಂತೆ ಒಟ್ಟು 5 ರೈಲುಗಳು ಈಗ ಸಂಚಾರವನ್ನು ನಡೆಸುತ್ತಿದೆ. ಡಿಸೆಂಬರ್ 22ರಿಂದ 6ನೇ ರೈಲು ಸಂಚಾರವನ್ನು ನಡೆಸಲಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ಹೇಳಿದ್ದಾರೆ. ಆಗ ಪ್ರತಿ 12 ನಿಮಿಷಕ್ಕೆ ಒಂದು ರೈಲು ಸಂಚಾರವನ್ನು ನಡೆಸುತ್ತದೆ.

    ಎಲೆಕ್ಟ್ರಾನಿಕ್ ಸಿಟಿಗೆ ಈ ಮಾರ್ಗ ಮೆಟ್ರೋ ಸಂಪರ್ಕ ಕಲ್ಪಿಸುವ ಕಾರಣ ಈ ಮಾರ್ಗದ ರೈಲು ಸಂಚಾರಕ್ಕೆ ಬೇಡಿಕೆ ಹೆಚ್ಚಿದೆ. ಪ್ರತಿದಿನ ಸುಮಾರು 80,000ಕ್ಕೂ ಅಧಿಕ ಪ್ರಯಾಣಿಕರ ಸದ್ಯ ಹಳದಿ ಮಾರ್ಗದಲ್ಲಿ ಸಂಚಾರವನ್ನು ನಡೆಸುತ್ತಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search