ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿ ಬಂಧಿತನಾಗಿದ್ದ ಮಾಸ್ಕ್‌ಮ್ಯಾನ್ ಚಿನ್ನಯ್ಯ ಈಗ ಜೈಲಿನಿಂದ ಬಿಡುಗಡೆಯಾಗಿದ್ದಾನೆ.
ಚಿನ್ನಯ್ಯನಿಗೆ ನವೆಂಬರ್.24ರಂದು ಬೆಳ್ತಂಗಡಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತ್ತು. ಆದರೆ ಚಿನ್ನಯ್ಯ ಕೋರ್ಟ್ ಆದೇಶದಂತೆ ವೈಯಕ್ತಿಕ ಬಾಂಡ್ ಹಾಗೂ ಇತರೆ ಅಂಶಗಳನ್ನು ಸಲ್ಲಿಸದ ಹಿನ್ನೆಲೆಯಲ್ಲಿ ಜಾಮೀನು ನೀಡುವ ಪ್ರಕ್ರಿಯೆ ವಿಳಂಬವಾಗಿತ್ತು. ಹೀಗಾಗಿ ಆತ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿಯೇ ಇದ್ದ.
ಚಿನ್ನಯ್ಯನ ಪತ್ನಿ ಮಲ್ಲಿಕಾ ಬೆಳ್ತಂಗಡಿ ನ್ಯಾಯಾಲಯದಲ್ಲಿ ಬುಧವಾರ ಜಾಮೀನು ಪ್ರಕ್ರಿಯೆ ಮುಗಿಸಿದ ಬಳಿಕ ಇಂದು ಬೆಳಿಗ್ಗೆ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಚಿನ್ನಯ್ಯ ಬಿಡುಗಡೆ ಆಗಿದ್ದಾನೆ.
ಈತ ಎರಡು ದಿನಕ್ಕೊಮ್ಮೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿ ಸಹಿ ಹಾಕಬೇಕು ಹಾಗೂ ಮಾಧ್ಯಮಗಳೊಂದಿಗೆ ಮಾತನಾಡಬಾರದು ಎಂದು ಬೆಳ್ತಂಗಡಿ ನ್ಯಾಯಾಲಯವು ಷರತ್ತು ವಿಧಿಸಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


