Tuesday, November 3, 2026
spot_img
More
    spot_img
    HomeStateDistrictಬೆಂಗಳೂರು ಸುರಂಗ ರಸ್ತೆ ಯೋಜನೆ: ಅಪ್‌ಡೇಟ್ ಕೊಟ್ಟ ಡಿಕೆ ಶಿವಕುಮಾರ್

    ಬೆಂಗಳೂರು ಸುರಂಗ ರಸ್ತೆ ಯೋಜನೆ: ಅಪ್‌ಡೇಟ್ ಕೊಟ್ಟ ಡಿಕೆ ಶಿವಕುಮಾರ್

    ಬೆಂಗಳೂರು ನಗರದ ಸುರಂಗ ರಸ್ತೆ ಯೋಜನೆ ವಿಚಾರದಲ್ಲಿ ಪ್ರತಿಪಕ್ಷ ಬಿಜೆಪಿ ಮತ್ತು ಆಡಳಿತ ಪಕ್ಷ ಕಾಂಗ್ರೆಸ್ ನಡುವೆ ಜಟಾಪಟಿ ನಡೆಯುತ್ತಿದೆ. ಯೋಜನೆಯ ವಿಸ್ತೃತ ಯೋಜನಾ ವರದಿಯಲ್ಲಿಯೇ ದೋಷವಿದೆ ಎಂಬುದು ಬಿಜೆಪಿಯ ಆರೋಪವಾಗಿದೆ. ಯೋಜನೆ ಜಾರಿಗೊಳಿಸಲು ಬಿಡುವುದಿಲ್ಲ ಎಂದು ಬಿಜೆಪಿ ನಾಯಕರು ಸಹ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

    ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ವಿಧಾನಸಭೆಯಲ್ಲಿ ಸುರಂಗ ಮಾರ್ಗ ಯೋಜನೆ ಕುರಿತು ಚರ್ಚೆಯಾಗಿದೆ. ಉಪಮುಖ್ಯಮಂತ್ರಿ, ಬೆಂಗಳೂರು ನಗರಾಭಿವೃದ್ಧಿ ಸಚಿವರು ಆಗಿರುವ ಡಿ.ಕೆ.ಶಿವಕುಮಾರ್ ಉತ್ತರ ನೀಡಿದ್ದಾರೆ.

    ರಾಜಾಜಿನಗರ ಶಾಸಕ ಎಸ್. ಸುರೇಶ್ ಕುಮಾರ್ ಕೇಳಿದ್ದ ಪ್ರಶ್ನೆಗೆ ಡಿ.ಕೆ.ಶಿವಕುಮಾರ್ ಲಿಖಿತ ಉತ್ತರವನ್ನು ನೀಡಿದ್ದಾರೆ. ಬಿಎಂಆರ್‌ಸಿಎಲ್ ಸಂಸ್ಥೆಯ ವತಿಯಿಂದ ರಚಿಸಲಾದ ಸಮಿತಿಯು ವರದಿಯನ್ನುಸರ್ಕಾರಕ್ಕೆ ಸಲ್ಲಿಸಲಾಗಿದೆಯೇ?, ಸಲ್ಲಿಸಿದ್ದಲ್ಲಿ ವರದಿಯ ಪ್ರತಿಯನ್ನು ಒದಗಿಸುವುದು ಎಂದು ಪ್ರಶ್ನಿಸಿದ್ದರು.

    ಹೆಬ್ಬಾಳ-ಸಿಲ್ಕ್ ಬೋರ್ಡ್‌ ಉದ್ದೇಶಿತ ಸುರಂಗ ರಸ್ತೆ ನಿರ್ಮಿಸಲು ಸಿದ್ಧಪಡಿಸಿರುವ ವಿಸ್ತೃತ ಯೋಜನಾ ವರದಿ (ಡಿಪಿಆರ್) ಎಷ್ಟು ಲೋಪಗಳನ್ನು ಗುರುತಿಸಿದೆ, ಆ ಲೋಪಗಳು ಸರ್ಕಾರದ ಗಮನಕ್ಕೆ ಬಂದಿದೆಯೇ? ಎಂದು ಸುರೇಶ್ ಕುಮಾರ್ ಕೇಳಿದ್ದರು.

    ಡಿ.ಕೆ.ಶಿವಕುಮಾರ್ ಉತ್ತರ: ತಮ್ಮ ಉತ್ತರದಲ್ಲಿ ಡಿ.ಕೆ.ಶಿವಕುಮಾರ್ ಬಿಎಂಆರ್‌ಸಿಎಲ್ ಸಂಸ್ಥೆಯ ವತಿಯಿಂದ  ಸಮಿತಿ ರಚಿಸಲಾಗಿರುವುದಿಲ್ಲ ಎಂದು ಹೇಳಿದ್ದಾರೆ. ಹೆಬ್ಬಾಳ-ಸಿಲ್ಕ್‌ ಬೋರ್ಡ್ ಭೂಗತ ವಾಹನ ಸುರಂಗ ಮಾರ್ಗ ನಿರ್ಮಾಣದ ಸವಿಸ್ತಾರ ಯೋಜನೆ ವರದಿ ಪರಿಶೀಲನೆಗೆ ಸರ್ಕಾರದಿಂದ ನಾಲ್ವರು ತಜ್ಞರ ಸಮಿತಿ ರಚಿಸಲಾಗಿದೆ.

    ಸಿದ್ದನಗೌಡ ಹೆಗ್ಗಾ ರೆಡ್ಡಿ, ಎಕ್ಸಿಕ್ಯುಟಿವ್ ಡೈರೆಕ್ಟರ್, ಬಿಎಂಆರ್‌ಸಿಎಲ್ ಅವರು ಸಮಿತಿ ಅಧ್ಯಕ್ಷರಾಗಿದ್ದರು. ಸಮಿತಿಯು ಗುರುತಿಸಿದ ಅಂಶಗಳನ್ನು ಆಧರಿಸಿ ಸವಿಸ್ತಾರ ಯೋಜನಾ ವರದಿಯನ್ನು ಪರಿಷ್ಕರಿಸಿ ಅನುಪಾಲನೆಯನ್ನು ಸಮಿತಿಗೆ ನೀಡಲಾಗಿದೆ. ಈ ಬಗ್ಗೆ ಸಮಿತಿಯು ದಿನಾಂಕ 29/5/2025ರಂದು ವರದಿಯನ್ನು ಸಲ್ಲಿಸಿದ್ದು, ಪ್ರತಿಯನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.

    ವರದಿಯ ಪ್ರಕಾರ ಇರುವ ಲೋಪದೋಷಗಳ ಕುರಿತು ಸಾರ್ವಜನಿಕವಾಗಿ ಪ್ರಚುರಪಡಿಸಲಾಗಿದೆಯೇ? ಮತ್ತು ಈ ಯೋಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸಲಹೆ ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲು ಸಾರ್ವಜನಿಕ ಅಹವಾಲು ಕಾರ್ಯಕ್ರಮವನ್ನು ನಡೆಸಲು ಸರ್ಕಾರಕ್ಕಿರುವ ತೊಂದರೆಗಳೇನು? ಎಂದು ಶಾಸಕ ಸುರೇಶ್ ಕುಮಾರ್ ಪ್ರಶ್ನೆ ಮಾಡಿದ್ದರು.

    ಡಿ.ಕೆ.ಶಿವಕುಮಾರ್ ತಮ್ಮ ಉತ್ತರದಲ್ಲಿ ಶಾನಾತ್ಮಕ ಭಾದ್ಯತೆ ಇರುವ ಎಲ್ಲಾ ಪ್ರಕರಣಗಳಲ್ಲಿ ಸಾರ್ವಜನಿಕರ ಸಲಹೆ/ ಆಕ್ಷೇಪಣೆ ಪಡೆದು ಕ್ರಮವಹಿಸಲಾಗುತ್ತಿದೆ. ಸಾರ್ವಜನಿಕ ಸಲಹೆ/ ಆಕ್ಷೇಪಣೆ ಈ ಪ್ರಕರಣದಲ್ಲಿ ಶಾಸನಾತ್ಮಕ ಬಾಧ್ಯತೆ ಇರುವುದಿಲ್ಲ ಎಂದು ಹೇಳಿದ್ದಾರೆ.

    ದಿನಾಂಕ 9/10/2023ರಂದು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕರು ಮತ್ತು ಗಣ್ಯ ವ್ಯಕ್ತಿಗಳ ಜೊತೆ ಹಾಗೂ ದಿನಾಂಕ 27/7/2027ರಂದು ಬ್ರಾಂಡ್ ಬೆಂಗಳೂರು ಪರಿಕಲ್ಪನೆ ಅಡಿಯಲ್ಲಿ ಸುರಂಗ ಮಾರ್ಗದ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ನಗರದ ಎಲ್ಲಾ ಶಾಸಕರು ಮತ್ತು ಸಂಸದರುಗಳೊಂದಿಗೆ ಸಭೆಯನ್ನು ನಡೆಸಲಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

    ಹೆಬ್ಬಾಳ-ಸಿಲ್ಕ್ ಬೋರ್ಡ್‌ ಉದ್ದೇಶಿತ ಸುರಂಗ ರಸ್ತೆ 17 ಕಿ.ಮೀ. ಇದೆ. ಈ ಯೋಜನೆಗಾಗಿ ಸುಮಾರು 18,000 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಈ ರಸ್ತೆ ಕಾರುಗಳಿಗೆ ಮಾತ್ರ ಉಪಯೋಗವಾಗಲಿದ್ದು, ಈ ರಸ್ತೆಯಲ್ಲಿ ಸಂಚಾರ ನಡೆಸಲು ಕಾರು ಮಾಲೀಕರು ಟೋಲ್ ಸಹ ಪಾವತಿಸಬೇಕು ಎಂದು ಯೋಜನಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ಇಷ್ಟು ವೆಚ್ಚ ಮಾಡಿ ಟೋಲ್ ರಸ್ತೆ ನಿರ್ಮಾಣ ಮಾಡುವ ಬದಲು ಸಾರ್ವಜನಿಕರ ಸಾರಿಗೆ ವ್ಯವಸ್ಥೆ ಬಲಪಡಿಸಲು ನಮ್ಮ ಮಟ್ರೋ, ಬಿಎಂಟಿಸಿ ಬಸ್ ಸಂಚಾರ ಉತ್ತಮವಾಗಿ ಮಾಡಲು ಗಮನಹರಿಸಿ ಎಂಬುದು ಬಿಜೆಪಿ ನಾಯಕರ ವಾದವಾಗಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಟಾಪಟಿ ನಡೆಯುತ್ತಲೇ ಇದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search