Saturday, August 8, 2026
spot_img
More
    spot_img
    HomeEntertainmentನಂಜುಂಡೇಶ್ವರನ ಸನ್ನಿಧಿಯಲ್ಲಿ ಲಗ್ನಪತ್ರಿಕೆಗೆ ಪೂಜೆ ಸಲ್ಲಿಸಿದ ನಟ ಡಾಲಿ ಧನಂಜಯ್‌

    ನಂಜುಂಡೇಶ್ವರನ ಸನ್ನಿಧಿಯಲ್ಲಿ ಲಗ್ನಪತ್ರಿಕೆಗೆ ಪೂಜೆ ಸಲ್ಲಿಸಿದ ನಟ ಡಾಲಿ ಧನಂಜಯ್‌

    ನಂಜನಗೂಡು: ಮದುವೆ ಸಿದ್ಧತೆಯಲ್ಲಿರುವ ನಟ ಡಾಲಿ ಧನಂಜಯ್‌ ಅವರು ಇಂದು ನಂಜನಗೂಡಿನ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

    Advertisement

    ನಂಜುಂಡೇಶ್ವರನ ಸನ್ನಿಧಿಯಲ್ಲಿ ನಟ ಡಾಲಿ ಧನಂಜಯ್‌ ಅವರು ಲಗ್ನ ಪತ್ರಿಕೆ ಇಟ್ಟು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ನಂಜುಂಡೇಶ್ವರ, ಪಾರ್ವತಮ್ಮ, ಚಂಡಿಕೇಶ್ವರ, ಗಣಪತಿ, ನಾರಾಯಣಸ್ವಾಮಿ, ಸುಬ್ರಹ್ಮಣ್ಯ ದೇವಾಲಯಗಳ ಸುತ್ತ ಪ್ರದಕ್ಷಿಣೆ ಹಾಕಿದರು.

    ಈ ವೇಳೆ ಮಾತನಾಡಿದ ಡಾಲಿ ಧನಂಜಯ್‌ ಅವರು, ಇಂದು ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿದ್ದೇನೆ. ಶಾಸಕರಾದ ದರ್ಶನ್‌ ಧ್ರುವನಾರಾಯಣ್‌ ಅವರಿಗೆ ಮದುವೆಎಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದ್ದೇನೆ ಎಂದು ತಿಳಿಸಿದರು.

    ಇನ್ನು ದೇವಾಲಯದ ಬಳಿ ನಟ ಡಾಲಿ ಧನಂಜಯ್‌ರನ್ನು ಕಂಡು ಅವರ ನೂರಾರು ಅಭಿಮಾನಿಗಳು ದೇವಾಲಯದ ಬಳಿ ಆಗಮಿಸಿದ್ದರು. ಈ ವೇಳೆ ನೆಚ್ಚಿನ ನಟನ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು.

    ಈ ವೇಳೆ ಶಾಸಕ ದರ್ಶನ್‌ ಧ್ರುವನಾರಾಯಣ್‌ ಸೇರಿದಂತೆ ಹಲವರು ನಟ ಡಾಲಿ ಧನಂಜಯ್‌ಗೆ ಸಾಥ್‌ ನೀಡಿದರು.

    ಇನ್ನು 2025ರ ಫೆಬ್ರವರಿ.16ರಂದು ಮೈಸೂರು ಅರಮನೆಯ ಮುಂಭಾಗದ ವಸ್ತು ಪ್ರದರ್ಶನ ಮೈದಾನದಲ್ಲಿ ಡಾಲಿ ಧನಂಜಯ್‌ ಹಾಗೂ ಧನ್ಯತಾ ವಿವಾಹ ನೆರವೇರಲಿದೆ.

    ಫೆಬ್ರವರಿ.15ರ ಶನಿವಾರ ಆರತಕ್ಷತೆ ನಡೆದರೆ, ಫೆಬ್ರವರಿ.16ರ ಭಾನುವಾರ ವಿವಾಹ ಅದ್ಧೂರಿಯಾಗಿ ಜರುಗಲಿದೆ. ವಿವಾಹ ಸಮಾರಂಭಕ್ಕೆ ಸಿನಿಮಾ ಮತ್ತು ರಾಜಕೀಯ ಗಣ್ಯರು ಬಂದು ಸೇರುವ ನಿರೀಕ್ಷೆಯಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading