Friday, August 7, 2026
spot_img
More
    spot_img
    HomeTop Storyಪಿಎಂ ಜನ್‌ಮನ್‌ ಯೋಜನೆಗೆ ಕೆ.ಆರ್.ಪೇಟೆಯ ಪೂವನಹಳ್ಳಿ ಗ್ರಾಮ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ ಮಾಹಿತಿ

    ಪಿಎಂ ಜನ್‌ಮನ್‌ ಯೋಜನೆಗೆ ಕೆ.ಆರ್.ಪೇಟೆಯ ಪೂವನಹಳ್ಳಿ ಗ್ರಾಮ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ ಮಾಹಿತಿ

    ನವದೆಹಲಿ: ಬುಡಕಟ್ಟು ಸಮುದಾಯದ ಜನರನ್ನು ಮುಖ್ಯವಾಹಿನಿಗೆ ತಂದು, ಅವರನ್ನು ಆರ್ಥಿಕ ಮತ್ತು ಸಾಮಾಜಿಕವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಿಎಂ ಜನ್‌ಮನ್‌ ಯೋಜನೆ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಪೂವನಹಳ್ಳಿ ಗ್ರಾಮವನ್ನು ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

    Advertisement

    ಈ ಸಂಬಂಧ ಮಾಹಿತಿ ನೀಡಿರುವ ಅವರು, ಈ ಯೋಜನೆಯನ್ನು ಯಶಸ್ವಿಗೊಳಿಸಲು ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

    ಗಂಜಿಗೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಪೂವನಹಳ್ಳಿ ಗ್ರಾಮವನ್ನು ಪಿಎಂ ಜನ್‌ಮನ್‌ ಯೋಜನೆಗೆ ಪರಿಗಣಿಸಲಾಗಿದೆ.

    ಪ್ರಧಾನಿ ನರೇಂದ್ರ ಮೋದಿ ಅವರು, ಈ ಯೋಜನೆಯನ್ನು ಘೋಷಿಸಿ ಬುಡಕಟ್ಟು ಸಮುದಾಯದ ಜನರು ವಾಸವಿರುವ ಗ್ರಾಮಗಳನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನು ಘೋಷಣೆ ಮಾಡಿದ್ದರು.

    ಶಿಕ್ಷಣ, ಆರೋಗ್ಯ, ನೈರ್ಮಲ್ಯ, ಪೌಷ್ಠಿಕಾಂಶ ಹೆಚ್ಚಿಸುವ ಜೊತೆಗೆ ರಸ್ತೆ, ದೂರ ಸಂಪರ್ಕ ಸುಸ್ಥಿರ ಜೀವನಾವಕಾಶಗಳನ್ನು ಕಲ್ಪಿಸುವ ಉದ್ದೇಶದೊಂದಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ.

    ಆದಿವಾಸಿಗಳ ಗುಡಿ ಕೈಗಾರಿಕೆಗಳ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ತರಬೇತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

    ಇನ್ನು ಮುಂದುವರಿದು ಮಾತನಾಡಿದ ಅವರು, ಇದು ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಬದ್ಧತೆಯಿಂದ ಅನುಷ್ಠಾನ ಮಾಡಲಾಗುತ್ತಿದೆ. ಮೊದಲಿಗೆ ಪೂವನಹಳ್ಳಿ ಆಯ್ಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹಳ್ಳಿಗಳನ್ನು ಈ ಯೋಜನೆ ವ್ಯಾಪ್ತಿಗೆ ತರಲಾಗುವುದು ಎಂದು ಹೇಳಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading