Tuesday, November 3, 2026
spot_img
More
    spot_img
    HomeTop Storyಇಂದಿನಿಂದ ಚಾಂಪಿಯನ್ಸ್‌ ಟ್ರೋಫಿ: ಪಾಪ ಮೊದಲ ಪಂದ್ಯ ಆಡಲು ಬೆದರುತ್ತಿದೆ ಪಾಕ್!

    ಇಂದಿನಿಂದ ಚಾಂಪಿಯನ್ಸ್‌ ಟ್ರೋಫಿ: ಪಾಪ ಮೊದಲ ಪಂದ್ಯ ಆಡಲು ಬೆದರುತ್ತಿದೆ ಪಾಕ್!

    ಕರಾಚಿ: ಇಲ್ಲಿನ ನ್ಯಾಷನಲ್‌ ಸ್ಟೇಡಿಯಂನಲ್ಲಿ ಇಂದು (ಫೆಬ್ರವರಿ 19) ಬಹು ನಿರೀಕ್ಷಿತ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಮೊದಲ ಪಂದ್ಯ ನಡೆಯಲಿದ್ದು ಟೂರ್ನಿಗೆ ಚಾಲನೆ ದೊರೆಯಲಿದೆ.

    ಇಂದು ಮಧ್ಯಾಹ್ನ 2.30ಕ್ಕೆ ಪಂದ್ಯ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್‌ ತಂಡಗಳು ಮುಖಾಮುಖಿಯಾಗಲಿವೆ.

    ಇನ್ನು ಈ ಪಂದ್ಯ ಆರಂಭಕ್ಕೂ ಮುನ್ನವೇ ಪಾಪ ಪಾಕಿಸ್ತಾನಕ್ಕೆ ಭಯ ಶುರುವಾಗಿದೆ. ಏಕೆಂದರೆ ಇದಕ್ಕೂ ಮುನ್ನ ಪಾಕಿಸ್ತಾನದಲ್ಲೇ ಇದೇ ತಿಂಗಳು ನಡೆದಿದ್ದ ಪಾಕಿಸ್ತಾನ, ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್‌ ತಂಡಗಳ ನಡುವೆ ತ್ರಿಕೋನ ಸರಣಿ ನಡೆದಿತ್ತು.

    ಈ ಸರಣಿಯಲ್ಲಿ ಪಾಕಿಸ್ತಾನ ಎರಡು ಬಾರಿ ನ್ಯೂಜಿಲೆಂಡ್ ತಂಡವನ್ನು ಎದುರಿಸಿತ್ತು. ಲೀಗ್‌ ಹಂತದ ಒಂದು ಪಂದ್ಯ ಹಾಗೂ ಅಂತಿಮವಾಗಿ ನಡೆದ ಫೈನಲ್‌ ಪಂದ್ಯ ಎರಡರಲ್ಲೂ ಸಹ ಪಾಕ್‌ ಹೀನಾಯ ಸೋಲು ಕಂಡಿತ್ತು.

    ಮೊದಲ ಪಂದ್ಯದಲ್ಲಿ 78 ರನ್‌ಗಳ ಸೋಲನ್ನು ಕಂಡಿದ್ದ ಪಾಕ್‌ ಫೈನಲ್‌ ಪಂದ್ಯದಲ್ಲಿ 5 ವಿಕೆಟ್‌ಗಳ ಅಂತರದಿಂದ ಸೋಲನ್ನು ಕಂಡಿತ್ತು. ಅದೂ ಸಹ ಫೈನಲ್‌ ಪಂದ್ಯ ಇಂದಿನ ಪಂದ್ಯ ನಡೆಯಲಿರುವ ಕರಾಚಿ ಕ್ರೀಡಾಂಗಣದಲ್ಲಿಯೇ ನಡೆದಿತ್ತು. ಹೀಗೆ ಇದೇ ತಿಂಗಳು ತನ್ನದೇ ನೆಲದಲ್ಲಿ ನ್ಯೂಜಿಲೆಂಡ್‌ ವಿರುದ್ಧ ಎರಡು ಬಾರಿ ಮಣ್ಣು ಮುಕ್ಕಿರುವ ಪಾಕ್‌ ಇಂದು ಮತ್ತೆ ಎದುರಿಸುತ್ತಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search