ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಶಾಸಕರ ಕ್ಷೇತ್ರಗಳಿಗೆ 50 ಕೋಟಿ ರೂ. ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧೋರಣೆಗೆ ಆಕೋಶ ವ್ಯಕ್ತಪಡಿಸಿರುವ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿರುವವರು ಮಾತ್ರ ಕರ್ನಾಟಕದ ಪ್ರಜೆಗಳಾ? ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಿರುವ ಕ್ಷೇತ್ರಗಳಿಗೆ ಮಾತ್ರ ತಾವು ಮುಖ್ಯಮಂತ್ರಿನಾ? ಕನ್ನಡಿಗರಿಗೆ ದೋಹ ಬಗೆಯುತ್ತಿರುವ ಲಜ್ಜೆಗೆಟ್ಟ ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸರ್ಕಾರದ ವಿರುದ್ಧ ಸಾಲು ಸಾಲು ಪೋಸ್ಟ್ ಮಾಡಿರುವ ಅವರು, ಸೂಪರ್ ಸಿಎಂ ರಣಜಿತ್ ಸಿಂಗ್ ಸುರ್ಜೇವಾಲ ಅವರು ಶಾಸಕರೊಂದಿಗೆ ನಡೆಸಿದ ಸಭೆ ನಂತರ ಬಹಿರಂಗವಾಗಿರುವ ಅಸಮಾಧಾನಕ್ಕೆ ಬೆಚ್ಚಿ ಬಿದ್ದಿರುವ ಸಿಎಂ ಸಿದ್ದರಾಮಯ್ಯ ಅವರು ತಮ ಕುರ್ಚಿ ಉಳಿಸಿಕೊಳ್ಳಲು ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂ. ಅನುದಾನ ನೀಡಲು ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಸಿದ್ದರಾಮಯ್ಯನವರೇ, ಮಾತೆತ್ತಿದರೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ ಎಂದು ಬೊಬ್ಬೆ ಹೊಡೆಯುತ್ತೆರಲ್ಲ, ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ 50 ಕೋಟಿ ರೂ.ಗಳ ಬೆಣ್ಣೆ ಹಚ್ಚಿ, ವಿಪಕ್ಷ ಶಾಸಕರ ಕ್ಷೇತ್ರಗಳಿಗೆ ದೊಡ್ಡ ಸೊನ್ನೆ ಸುತ್ತಿ ಸುಣ್ಣ ಹಚ್ಚಿದ್ದೀರಲ್ಲ, ಇದು ಮಲತಾಯಿ ಧೋರಣೆ ಅಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.
ಮತ್ತೊಂದು ಪೋಸ್ಟ್ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಕ್ಷೇತ್ರದ ಅನುದಾನಕ್ಕಾಗಿ ವಿಪಕ್ಷದ ಶಾಸಕರು ತಾಳೆಯಿಂದ ಕಾಯಬೇಕು ಎಂದರೆ ಏನು ಸ್ವಾಮಿ? ತಾವು ಈ ಮೊದಲೇ ಹೇಳಿರುವಂತೆ ಶಾಸಕರು ತಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎನ್ನುವುದು ನಿಮ ಮಾತಿನ ಅರ್ಥಾನಾ? ಅಥವಾ ತಾಳೆಯಿಂದ ಇರದಿದ್ದರೆ ನಟ್ಟು-ಬೋಲ್ಟು ಟೈಟು ಮಾಡುತ್ತೇನೆ ಎನ್ನುವ ಧಮ್ಕಿನಾ? ಎಂದು ಪ್ರಶ್ನಿಸಿದ್ದಾರೆ.
ತಮಗೆ ಇಷ್ಟ ಬಂದ ಹಾಗೆ ಬರೀ ಕಾಂಗ್ರೆಸ್ ಶಾಸಕರಿಗೆ ಮಾತ್ರ ಅನುದಾನ ಕೊಡೋಕೆ ರಾಜ್ಯ ಸರ್ಕಾರದ ಖಜಾನೆ ನಿಮ ಪಕ್ಷದ ಪಾರ್ಟಿ ಫಂಡ್ ಅಲ್ಲ ಡಿ.ಕೆ.ಶಿವಕುಮಾರ್ ಅವರೇ, ಅದು ಆರೂವರೆ ಕೋಟಿ ಕನ್ನಡಿಗರ ಬೆವರಿನ ತೆರಿಗೆ ಹಣ. ಈ ಮಲತಾಯಿ ಧೋರಣೆ ನಿಲ್ಲಿಸಿ, ಎಲ್ಲಾ ಕ್ಷೇತ್ರಗಳಿಗೂ ಅನುದಾನ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದ್ದಾರೆ.
ಕಳೆದ 26 ತಿಂಗಳುಗಳಲ್ಲಿ ತಮದೇ ಪಕ್ಷದ ಸರ್ಕಾರದಿಂದ ನಯಾ ಪೈಸೆ ಅನುದಾನ ಪಡೆಯಲಾಗದೆ ತಮ ಕ್ಷೇತ್ರಗಳಲ್ಲಿ ತಲೆ ಎತ್ತಿಕೊಂಡು ಓಡಾಡಲಾಗದ ಪರಿಸ್ಥಿತಿ ಎದುರಿಸುತ್ತಿದ್ದ ಕಾಂಗ್ರೆಸ್ ಶಾಸಕರು, ಸೂಪರ್ ಸಿಎಂ ಸುರ್ಜೇವಾಲ ಅವರ 6 ದಿನಗಳ ಸಭೆಯ ಪರಿಣಾಮದಿಂದ, ಸಿಎಂ ಸಿದ್ದರಾಮಯ್ಯ ಅವರ ಬಳಿ ತಲಾ 50 ಕೋಟಿ ರೂ. ಅನುದಾನ ಗಿಟ್ಟಿಸಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಸೂಪರ್ ಸಿಎಂ ಸುರ್ಜೇವಾಲ ಅವರೇ, ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ಕೊಡಿಸಿಕೊಟ್ಟ ತಮಗೆ ಅಭಿನಂದನೆಗಳು. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಶಾಸಕರ ಕ್ಷೇತ್ರಗಳಿಗೂ ಅನುದಾನ ಕೊಡಿಸಿ ಪುಣ್ಯ ಕಟ್ಟಿಕೊಳ್ಳಿ ಸ್ವಾಮಿ. ನಿಮ ಸೂಚನೆಯ ಫಲವಾಗಿ ನಮ ಪಕ್ಷದ ಶಾಸಕರ ಕ್ಷೇತ್ರಗಳಿಗೂ ಅನುದಾನ ಸಿಕ್ಕರೆ ತಮಗೆ ವಿಶೇಷ ಸನಾನ ಮಾಡಿ ಅಭಿನಂದನೆ ಸಲ್ಲಿಸುತ್ತೇವೆ. ಕೊಡಿಸುತ್ತೀರಲ್ಲ? ಎಂದು ಅಶೋಕ್ ವ್ಯಂಗ್ಯಭರಿತವಾಗಿ ಪ್ರಶ್ನೆ ಮಾಡಿದ್ದಾರೆ.
ಇನ್ನೂ 5 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ; ರೆಡ್ ಅಲರ್ಟ್ ಘೋಷಣೆ
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


