ಬೆಂಗಳೂರು: ಮುಂಬರುವ ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ‘ಪ್ರಿಯದರ್ಶಿನಿ ಉಡಾನ್ ಯೋಜನೆ’ ಅಡಿ ಹೆಣ್ಣುಮಕ್ಕಳಿಗೆ ಹಂಚಲಾಗುತ್ತಿರುವ ಸ್ಯಾನಿಟರಿ ಪ್ಯಾಡ್ನ ಬಾಕ್ಸ್ಗಳ ಮೇಲೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಫೋಟೋ ಹಾಕಿರುವ ಚಿತ್ರಗಳನ್ನು ಜಾಲತಾಣಗಳಲ್ಲಿ ವೈರಲ್ ಮಾಡಿದ ಆರೋಪದಲ್ಲಿ ರತನ್ ರಂಜನ್ ಹಾಗೂ ಅರುಣ್ ಕುಮಾರ್ ಕೋಶಿಲ್ ವಿರುದ್ಧ ತಕ್ಷಣ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ.
ಯುವ ಕಾಂಗ್ರೆಸ್ ಕಾರ್ಯಕರ್ತೆ ಪ್ರಿಯಾಂಕಾದೇವಿ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಿಸಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ರತನ್ ರಂಜನ್ ಹಾಗೂ ಅರುಣ್ ಕುಮಾರ್ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಎಸ್. ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು.
ಫೋಟೋಗಳನ್ನು ಹಾಕಿರುವುದು ಅವರ ಪಕ್ಷದವರೇ, ನಾವು ಮಾಡಿದ್ದಲ್ಲ ಎಂದು ಅರ್ಜಿದಾರರ ಪರ ವಕೀಲ ಅರುಣ್ ಶ್ಯಾಮ್ ವಾದಿಸಿದರು. ಅವರ ಪಕ್ಷದವರು ಮಾಡಲಿ ಬಿಡಿ, ನಿಮಗೆ ಯಾಕೆ ಬೇಕಿತ್ತು’ ಎಂದು ನ್ಯಾಯಪೀಠ ಮರುಪ್ರಶ್ನೆ ಹಾಕಿತು. ಸರ್ಕಾರ ಮತ್ತು ದೂರುದಾರರಿಗೆ ನೋಟಿಸ್ ಜಾರಿಗೊಳಿಸಿ, ಅರ್ಜಿದಾರರ ವಿರುದ್ಧ ಮುಂದಿನ ವಿಚಾರಣೆ ತನಕ ಬಲವಂತದ ಕ್ರಮ ಜರುಗಿಸಬಾರದು ಎಂದು ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತು.
ಮಹದೇಶ್ವರ ಬೆಟ್ಟ ದೇವಾಲಯ ಹುಂಡಿಯಲ್ಲಿ ಕಳೆದ 30 ದಿನಗಳಲ್ಲಿ ಸಂಗ್ರಹವಾಗಿದ್ದೆಷ್ಟು?
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


