Friday, October 30, 2026
spot_img
More
    spot_img
    HomeLatest newsಚಾ.ನಗರ ಹಾಗೂ ಮೈಸೂರನ್ನು ಸಿದ್ದರಾಮಯ್ಯ ಅಭಿವೃದ್ಧಿ ಪಥಕ್ಕೆ ತಂದಿದ್ದಾರೆ: ಮಹದೇವಪ್ಪ

    ಚಾ.ನಗರ ಹಾಗೂ ಮೈಸೂರನ್ನು ಸಿದ್ದರಾಮಯ್ಯ ಅಭಿವೃದ್ಧಿ ಪಥಕ್ಕೆ ತಂದಿದ್ದಾರೆ: ಮಹದೇವಪ್ಪ

    ಮೈಸೂರು: ಕಾಂಗ್ರೆಸ್‌ ಪಕ್ಷ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.

    ಈ ಕುರಿತು ಮೈಸೂರಿನಲ್ಲಿ ನಡೆದ ಕಾಂಗ್ರೆಸ್‌ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡಿದ ಅವರು, ಸಿಎಂ ಸಿದ್ದರಾಮಯಯ್ಯ ರಾಜ್ಯವನ್ನು ಅಭಿವೃದ್ಧಿಯ ಮುಂಚೂಣಿಗೆ ತರುತ್ತಿದ್ದಾರೆ. ಮೈಸೂರು ಜಿಲ್ಲೆ ಹಾಗೂ ಚಾಮರಾಜನಗರವನ್ನು ಅಭಿವೃದ್ಧಿಯ ಪಥದಲ್ಲಿ ತರುತ್ತಿರುವ ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದರು.

    ಇದು ಯಾರ ಸವಾಲಿಗೂ ಕರೆದ ಸಭೆಯಲ್ಲ. 2023ರಲ್ಲಿ ಕಾಂಗ್ರೆಸ್‌ಗೆ ಜನರೇ ಶಕ್ತಿ ತುಂಬಿದ್ದಾರೆ. ಗ್ಯಾರಂಟಿ ಯೋಜನೆಗಳ ಪ್ರಮುಖ ಯೋಜನೆಗಳಲ್ಲಿ ಶಕ್ತಿ ಯೋಜನೆ ಅತ್ಯಂತ ಯಶಸ್ವಿಯಾಗಿದೆ. ಮೈಸೂರಿನಲ್ಲಿ ಹಲವು ರಸ್ತೆಗಳು ನಿರ್ಮಾಣ ಆಗಿದ್ದು, ನಮ್ಮ ಸರ್ಕಾರ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ.

    ಕಾಂಗ್ರೆಸ್‌ ಪಕ್ಷ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟಿದೆ. ಚುನಾವಣಾ ಆಶ್ವಾಸನೆಗಳನ್ನು ಈಡೇರಿಸಿದ್ದೇವೆ. ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಗ್ಯಾರಂಟಿ ಯೋಜನೆಗಳು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಲ್ಲ ಎಂದು ಹೇಳಿದರು.

    ಯಾರು ಕೆಲಸ ಮಾಡಿಲ್ಲವೋ ಅವರು ಮೈ ಪರಚಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ವಿಪಕ್ಷಗಳ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

    ಇನ್ನೂ 5 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ; ರೆಡ್‌ ಅಲರ್ಟ್‌ ಘೋಷಣೆ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search