ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆ ಬಿರುಸುಗೊಂಡ ಹಿನ್ನೆಲೆಯಲ್ಲಿ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 24ರವರೆಗೂ ಭಾರೀ ವರ್ಷಧಾರೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂದಿನ 3 ದಿನಗಳ ಕಾಲ ಬೆಂಗಳೂರಿನಲ್ಲೂ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರ್ನಾಟಕದ ಬಹುತೇಕ ಕಡೆ ಮಳೆ ಹೆಚ್ಚಾಗಿದ್ದು, ಕಳೆದ ದಿನ ಮುಲ್ಕಿ, ಕೋಟಾ, ಬಂಟ್ವಾಳ, ಕಾರವಾರ, ಉಡುಪಿ, ಕಾರ್ಕಳ, ಭಾಗಮಂಡಲ, ಕುಂದಾಪುರ, ಮೂಡುಬಿದಿರೆ, ಹುಣಸಗಿ, ಬೆಳ್ತಂಗಡಿ, ಆಗುಂಬೆ, ಗೋಕರ್ಣ, ಹೊನ್ನಾವರದಲ್ಲಿ ಹೆಚ್ಚು ಮಳೆಯಾಗಿದೆ.
ಮಾಂಸಾಹಾರ ಮಾರಾಟ ಮಾಡದಂತೆ ಕೆಎಫ್‌ಸಿ ಬಾಗಿಲು ಮುಚ್ಚಿದ ಹಿಂದೂ ರಕ್ಷಣಾ ದಳ; ವಿಡಿಯೊ
ಕೃಷಿ ಎಐ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


