ನವದೆಹಲಿ: ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಸ್ತಾಕ್ ಅವರಿಂದ ಮೈಸೂರು ದಸರಾ ಉದ್ಘಾಟನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದ್ದು, ಇಂದು ವಿಚಾರಣೆ ನಡೆಯಲಿದೆ.
ಬೆಂಗಳೂರಿನ ಹಾಲನಾಯಕನಹಳ್ಳಿ ನಿವಾಸಿ ಎಚ್.ಎಸ್. ಗೌರವ್ ಎಂಬುವವರು ಸಲ್ಲಿಸಿರುವ ಅರ್ಜಿ ವಿಚಾರಣೆ ನ್ಯಾ. ವಿಕ್ರಮ ನಾಥ್ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ನಡೆಯಲಿದೆ.
ಅರ್ಜಿದಾರರ ಪರ ವಕೀಲರು ಗುರುವಾರ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಪೀಠದ ಮುಂದೆ ಅರ್ಜಿ ವಿಚಾರಣೆಗೆ ಮನವಿ ಮಾಡಿದ್ದು, ವಿಚಾರಣೆ ನಡೆಸಲು ಪೀಠ ಸಮ್ಮತಿಸಿದೆ. ಕಾರ್ಯಕ್ರಮಕ್ಕೆ ಕೆಲವೇ ದಿನ ಬಾಕಿ ಇರುವ ಕಾರಣ ಶೀಘ್ರವಾಗಿ ಅರ್ಜಿ ವಿಚಾರಣೆ ನಡೆಸುವಂತೆ ಅರ್ಜಿದಾರರು ನ್ಯಾಯಪೀಠಕ್ಕೆ ಮನವಿ ಮಾಡಿದ್ದಾರೆ.
ಇದೇ ರೀತಿ ಬಾನು ಮುಷ್ತಾಕ್ ವಿರುದ್ಧ ಹೈಕೋರ್ಟ್‌ನಲ್ಲಿ ಸಹ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಹೈಕೋರ್ಟ್ ಇದನ್ನು ತಿರಸ್ಕರಿಸಿ ಛೀಮಾರಿ ಹಾಕಿತ್ತು. ಅದೇ ರೀತಿ ಸುಪ್ರೀಂ ಸಹ ಛೀಮಾರಿ ಹಾಕುವ ಸಾಧ್ಯತೆಗಳು ಹೆಚ್ಚಿವೆ.
ಧರ್ಮಸ್ಥಳ: ಎರಡನೇ ದಿನವೂ ಬಂಗ್ಲೆಗುಡ್ಡದಲ್ಲಿ ಬುರುಡೆಗಳು ಪತ್ತೆ; ತನಿಖೆ ವಿರೋಧಿಗಳು ಕಂಗಾಲು!
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


