Saturday, August 8, 2026
spot_img
More
    spot_img
    HomeBreaking Newsಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಎಂಎಲ್‌ಸಿ ಸಿ.ಟಿ.ರವಿ ಆಕ್ರೋಶ

    ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಎಂಎಲ್‌ಸಿ ಸಿ.ಟಿ.ರವಿ ಆಕ್ರೋಶ

    ಚಿಕ್ಕಮಗಳೂರು: ಆರ್‌ಆರ್‌ಎಸ್‌ ಹಾಗೂ ಬಿಜೆಪಿ ಪಕ್ಷವನ್ನು ವಿಷದ ಹಾವಿಗೆ ಹೋಲಿಕೆ ಮಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.

    Advertisement

    ಈ ಬಗ್ಗೆ ಚಿಕ್ಕಮಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಹುಚ್ಚು ನಾಯಿ ಕಡಿದಂತೆ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗಳು ಅವರ ಹಿರಿತನಕ್ಕೆ ಗೌರವ ತರುವ ಮಾತುಗಳಲ್ಲ. ಈ ಹೇಳಿಕೆಗಳನ್ನು ಅವರೇ ಮಾತನಾಡಿದ್ದಾರೋ ಅಥವಾ ಅವರಿಂದ ಯಾರೋ ಹೇಳಿಸಿದ್ದಾರೋ ಗೊತ್ತಿಲ್ಲ. ಬಹುಶಃ ಅವರಿಂದ ರಾಹುಲ್‌ ಗಾಂಧಿ ಅಥವಾ ಸೋನಿಯಾ ಗಾಂಧಿ ಅವರೇ ಆ ಮಾತುಗಳನ್ನು ಹೇಳಿಸಿದ್ದಾರೆ ಎಂದು ಕಾಣುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಖರ್ಗೆ ಅವರ ಹೊಡಿ, ಬಡಿ, ಕೊಲ್ಲುವುದು ಎಂಬ ಮಾತುಗಳು ತಾಲಿಬಾನಿಗಳ ಹೇಳಿಕೆಗಳಂತೆ ಅನ್ನಿಸುತ್ತಿದೆ. ಈ ಹೇಳಿಕೆಗಳು ಸಂವಿಧಾನದ ಮೇಲೆ ನಂಬಿಕೆ ಇಟ್ಟವರ ಹೇಳಿಕೆಗಳಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಹೇಳಿಕೆಗಳ ಬಗ್ಗೆ ವಿಷಾದ ವ್ಯಕ್ತಪಡಿಸಬೇಕು ಎಂದು ಆಗ್ರಹಿಸಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading