ಬೆಂಗಳೂರು: ಜೋಡಿಹಕ್ಕಿ ಧಾರವಾಹಿ ಖ್ಯಾತಿಯ ನಟ ತಾಂಡವ್ ರಾಮ್‌ರನ್ನು ಕೊಲೆ ಯತ್ನದ ಕೇಸ್‌ನಲ್ಲಿ ಚಂದ್ರಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಘಟನೆ ವಿವರ: ಸಿನಿಮಾ ನಿಂತಿದ್ದಕ್ಕೆ ಮುಗಿಲ್ ಪೇಟೆ ನಿರ್ದೇಶಕ ಭರತ್ ಮೇಲೆ ತಾಂಡವ್ ಗುಂಡು ಹಾರಿಸಿದ್ದಕ್ಕೆ ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮುಗಿಲ್ ಪೇಟೆ ಸಿನಿಮಾದಲ್ಲಿ ತಾಂಡವ್ ರಾಮ್ ನಾಯಕ ನಟನಾಗಿ ನಟಿಸುತ್ತಿದ್ದರು.
ಕಾರಣಾಂತರಗಳಿಂದ ಮುಗಿಲ್ ಪೇಟೆ ಸಿನಿಮಾದ ಶೂಟಿಂಗ್‌ನ್ನು ಅರ್ಧಕ್ಕೆ ನಿಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕಚೇರಿಯೊಂದರಲ್ಲಿ ಸಿನಿಮಾಗೆ ಸಂಬಂಧಿಸಿದಂತೆ ಮಾತುಕತೆ ನಡೆಯುತ್ತಿತ್ತು ಎನ್ನಲಾಗಿದೆ. ಈ ವೇಳೆ ತಾಂಡವ್‌ಗೂ ಚಿತ್ರದ ನಿರ್ದೇಶಕ ಭರತ್‌ಗೂ ವಾಗ್ವಾದ ನಡೆದಿದ್ದು, ಈ ವೇಳೆ ಗನ್ ತೆಗೆದು ಭರತ್ ಮೇಲೆ ತಾಂಡವ್ ಗುಂಡು ಹಾರಿಸಿದ್ದಾರೆ.
ಅದೃಷ್ಟವಶಾತ್ ಗುಂಡು ಡೈರೆಕ್ಟರ್ ಭರತ್‌ಗೆ ತಗುಲದೇ ಗೋಡೆಗೆ ಬಿದ್ದಿದೆ. ಇದೀಗ ಭರತ್ ದೂರಿನ ಮೇರೆಗೆ ನಟ ತಾಂಡವ್ ಅವರನ್ನು ಚಂದ್ರಲೇಔಟ್ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


