Friday, August 7, 2026
spot_img
More
    spot_img
    HomeEntertainmentʼಮರ್ಯಾದೆ ಪ್ರಶ್ನೆʼ ಚಿತ್ರದ 3ನೇ ಹಾಡು ಬಿಡುಗಡೆ; ಇದು ಹಿಟ್‌ ಸಾಂಗ್‌ ಅಲ್ಲ, ಹಿಟ್‌ ಬ್ಯಾಕ್‌...

    ʼಮರ್ಯಾದೆ ಪ್ರಶ್ನೆʼ ಚಿತ್ರದ 3ನೇ ಹಾಡು ಬಿಡುಗಡೆ; ಇದು ಹಿಟ್‌ ಸಾಂಗ್‌ ಅಲ್ಲ, ಹಿಟ್‌ ಬ್ಯಾಕ್‌ ಹಾಡು!

    ಕಳೆದ ವಾರ ಬಿಡುಗಡೆಯಾಗಿರುವ ಟ್ರೈಲರ್‌ನಿಂದ ನಿರೀಕ್ಷೆ ಹುಟ್ಟಿಸಿರುವ ‘ಮರ್ಯಾದೆ ಪ್ರಶ್ನೆ’ ಚಿತ್ರದ ಮೂರನೇಯ ಹಾಡು ‘ಫಿರಾಕೋ ಮಾರ್’ ಈಗ ಬಿಡುಗಡೆಯಾಗಿದೆ. ಎಲ್ಲ ಚಿತ್ರ ತಂಡಗಳು ಹಿಟ್ ಸಾಂಗ್ ಕೊಡಲು ಮುಂದಾದರೆ ಮರ್ಯಾದೆ ಪ್ರಶ್ನೆ ತಂಡ ‘ಹಿಟ್ ಬ್ಯಾಕ್’ ಹಾಡನ್ನು ನೀಡಿದೆ. ದಕ್ನಿ ರ್ಯಾಪರ್ ಪಾಶಾಬಾಯ್ ಈ ರ್ಯಾಪ್ ಬರೆದು ಹಾಡಿದ್ದಾರೆ. ಕಳೆದ ಎರಡು ಹಾಡುಗಳನ್ನು ಮೆಲೋಡಿ, ಜಾನಪದ ಶೈಲಿಯಲ್ಲಿ ಸಂಯೋಜಿಸಿದ್ದ ಸಂಗೀತ ನಿರ್ದೇಶಕ ಅರ್ಜುನ್ ರಾಮು ಈ ಹಾಡನ್ನು ಹಿಪ್‌ಹಾಪ್ ಶೈಲಿಯಲ್ಲಿ‌ ಪ್ರಸ್ತುತಪಡಿಸಿದ್ದಾರೆ.

    Advertisement

    ಈ ಹಾಡಿನ ಬಗ್ಗೆ ಮಾತನಾಡಿದ ಸಂಗೀತ ನಿರ್ದೇಶಕ ಅರ್ಜುನ್ ರಾಮು “ಮಿಡಲ್ ಕ್ಲಾಸ್ ಅಗ್ರೆಶನ್ ತೋರಿಸುವ ಹಾಡೊಂದು ಸಿನಿಮಾಕ್ಕೆ‌ ಬೇಕಿತ್ತು. ಪಾಶಾಬಾಯ್ ಜತೆ ಸೇರಿ ಈ ರ್ಯಾಪ್ ಮಾಡಿದ್ದೇವೆ. ಕ್ಲಾಸಿನ ಜತೆ ಸಕ್ಕತ್ ಮಾಸ್ ಬಿಜಿಎಮ್ ಇರುವ ಈ ಹಾಡು ಎಲ್ಲರಿಗೂ ಇಷ್ಟವಾಗುವ ಭರವಸೆ ಇದೆ” ಎಂದರು.

    ಟ್ರೇಲರಿನಲ್ಲಿ ತೋರಿಸಿದ ವಿಷಯಗಳಿಗೆ ಪುಷ್ಟಿ ನೀಡುವಂತಿರುವ ಎರಡೂವರೆ ನಿಮಿಷಗಳ ಈ ಹಾಡಿನ ಪ್ರೋಮೋ ವಿಡಿಯೋದಲ್ಲಿ ಸಿನಿಮಾದ ಮುಖ್ಯ ಪಾತ್ರಧಾರಿಗಳಾದ ಸುನೀಲ್ ರಾವ್, ರಾಕೇಶ್ ಅಡಿಗ ಮತ್ತು ಪೂರ್ಣಚಂದ್ರ ಮೈಸೂರು ಕಾಣಿಸಿಕೊಂಡಿದ್ದಾರೆ. ಮಿಡಲ್ ಕ್ಲಾಸ್ ಹುಡುಗರನ್ನ ಬೆಳೆಯೋಕೆ ಬಿಡದೇ ಇದ್ರೂ ಬೆಳೆದೇ ಬೇಳಿತಾರೆ ಎನ್ನುವುದನ್ನು ಕೂಗಿ ಹೇಳುತ್ತಿರುವ ಈ ಹಾಡನ್ನು ಈಗ ಸಖತ್ ಸ್ಟುಡಿಯೋ ಯೂಟ್ಯೂಬ್ ಚಾನೆಲ್ಲಿನಲ್ಲಿ ವೀಕ್ಷಿಸಬಹುದು.

    ರಿಯಲಿಸ್ಟಿಕ್ ರಿವೆಂಜ್ ಡ್ರಾಮಾ ‘ಮರ್ಯಾದೆ ಪ್ರಶ್ನೆ’ ಚಿತ್ರದ ತಾರಾಗಣದಲ್ಲಿ ತೇಜು ಬೆಳವಾಡಿ, ಸುನಿಲ್ ರಾವ್, ಪೂರ್ಣಚಂದ್ರ ಮೈಸೂರು, ರಾಕೇಶ್ ಅಡಿಗ, ಶೈನ್ ಶೆಟ್ಟಿ, ಪ್ರಭು ಮುಂಡ್ಕುರ್ ಇದ್ದಾರೆ. ಉಳಿದಂತೆ ಹಿರಿಯ ನಟರಾದ ನಾಗಾಭರಣ, ಪ್ರಕಾಶ್ ತುಂಭಿನಾಡು, ನಂದಗೋಪಾಲ್, ನಾಗೇಂದ್ರ ಷಾ, ರೇಖಾ ಕುಂಡ್ಲಿಗಿ, ಶ್ರವಣ್, ಹರಿಹರನ್ ಮುಂತಾದವರು ಅಭಿನಯಿಸಿದ್ದಾರೆ. .

    ಚಿತ್ರದಲ್ಲಿ ಐದು ಹಾಡುಗಳಿದ್ದು ಎಲ್ಲ ಹಾಡುಗಳಿಗೆ ಅರ್ಜುನ್ ರಾಮು ರಾಗ ಸಂಯೋಜಿಸಿದ್ದು, ಪ್ರಮೋದ್ ಮರವಂತೆ ಮತ್ತು ತ್ರಿಲೋಕ್ ತ್ರಿವಿಕ್ರಮ ಸಾಹಿತ್ಯ ರಚಿಸಿದ್ದಾರೆ. ಸಕುಟುಂಬ ಸಮೇತ, ಗೌಳಿ ಮತ್ತು ಚಾರ್ಲಿ ಸಿನಿಮಾಗೆ ಕೆಲಸಮಾಡಿರುವ ಸಂದೀಪ್ ವೆಲ್ಲುರಿ ಈ ಸಿನಿಮಾದ ಛಾಯಾಗ್ರಾಹಕರು.

    ಈಗಾಗಲೇ ಲೂಸ್ ಕನೆಕ್ಷನ್, ಹನಿಮೂನ್ ವೆಬ್ ಸೀರೀಸ್ಗಳನ್ನು ನಿರ್ಮಿಸಿ ಸದ್ದು ಮಾಡಿದ್ದ ಆರ್‌ಜೆ ಪ್ರದೀಪಾ ಅವರ ‘ಸಕ್ಕತ್ ಸ್ಟೂಡಿಯೋ’ ಈ ಚಿತ್ರವನ್ನು ನಿರ್ಮಿಸಿದೆ. ಪ್ರದೀಪಾ ಅವರೇ ಬರೆದ ಕಥೆಗೆ ನಾಗರಾಜ ಸೋಮಯಾಜಿ ಅವರ ಚಿತ್ರಕತೆ, ಸಂಭಾಷಣೆ, ನಿರ್ದೇಶನವಿದೆ. ‘ಮರ್ಯಾದೆ ಪ್ರಶ್ನೆʼ ನವೆಂಬರ್ 22ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading