ಮಡಿಕೇರಿ: ಕರ್ನಾಟಕದ ಕಾಶ್ಮೀರ ಎಂದು ಹೆಸರಾಗಿರುವ ಕೊಡಗು ಜಿಲ್ಲೆ ದೇಶದಲ್ಲೇ ಅತ್ಯಂತ ಶುದ್ಧಗಾಳಿ ಹೊಂದಿರುವ ಸ್ಥಳಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಗಿಟ್ಟಿಸಿಕೊಂಡಿದೆ.
ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಹಿತಿ ಪ್ರಕಾರ ಮಂಜಿನ ನಗರಿ ಮಡಿಕೇರಿ ಪ್ರಥಮ ಸ್ಥಾನದಲ್ಲಿದೆ. ಈ ವರದಿಯಿಂದ ಸ್ಥಳೀಯ ನಿವಾಸಿಗಳಿಗೆ ಭಾರೀ ಖುಷಿ ತಂದು ಕೊಟ್ಟಿದೆ.
ಕೇಂದ್ರ ಪರಿಸರ ಮಾಲಿನ್ಯ ಮಂಡಳಿಯ ಮಾಹಿತಿ ಪ್ರಕಾರ ಮಂಜಿನ ನಗರಿ ಮಡಿಕೇರಿ ಪ್ರಥಮ ಸ್ಥಾನದಲ್ಲಿದ್ದು, ಈ ಪಟ್ಟಿಯಲ್ಲಿ ಗದಗ ಜಿಲ್ಲೆ ಕೂಡ ಸ್ಥಾನ ಪಡೆದುಕೊಂಡಿದ್ದು, 8ನೇ ಸ್ಥಾನದಲ್ಲಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಷಪೂರಿತ ಗಾಳಿ ಸೇವನೆಯಿಂದ ಅಲ್ಲಿನ ನಿವಾಸಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಹೀಗಿರುವಾಗಲೇ ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮಾಹಿತಿ ಬಹಿರಂಗಪಡಿಸಿದ್ದು, ಕೊಡಗು ಜನತೆಯಲ್ಲಿ ಖುಷಿ ತಂದಿದೆ.
ಕರ್ನಾಟಕದ ಕಾಶ್ಮೀರ ಎಂದು ಹೆಸರಾಗಿರುವ ಕೊಡಗು ಜಿಲ್ಲೆಗೆ ಶುದ್ಧಗಾಳಿ ಹೊಂದಿರುವ ಪಟ್ಟ ಸಿಕ್ಕಿರುವ ಹಿನ್ನೆಲೆಯಲ್ಲಿ ಮೂರ್ನಾಲ್ಕು ದಿನಗಳ ಕಾಲ ರಜೆ ಸಿಕ್ಕರೆ ಸಾಕು ಜನತೆ ಮೊದಲು ಕೊಡಗು ಪ್ರವಾಸಿ ತಾಣಗಳ ಮೇಲೆ ಕಣ್ಣಿಡಲಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


