Friday, November 6, 2026
spot_img
More
    spot_img
    HomeNational/ Internationalಶಬರಿಮಲೆಯಿಂದ ವಾಪಸ್‌ ಬರುತ್ತಿದ್ದ ಕನ್ನಡಿಗರಿದ್ದ ಬಸ್‌ ಪಲ್ಟಿ

    ಶಬರಿಮಲೆಯಿಂದ ವಾಪಸ್‌ ಬರುತ್ತಿದ್ದ ಕನ್ನಡಿಗರಿದ್ದ ಬಸ್‌ ಪಲ್ಟಿ

    ವಯನಾಡು: ಕೇರಳದ ಪ್ರಸಿದ್ಧ ಯಾತ್ರಾಸ್ಥಳ ಶಬರಿಮಲೆ ದರ್ಶನ ಪಡೆದು ರಾಜ್ಯಕ್ಕೆ ಹಿಂದಿರುಗುತ್ತಿದ್ದ ಕರ್ನಾಟಕದ ಭಕ್ತರಿದ್ದ ಬಸ್‌ ಪಲ್ಟಿಯಾಗಿರುವ ಘಟನೆ ವಯನಾಡಿನಲ್ಲಿ ನಡೆದಿದೆ.

    ವಯನಾಡಿದ ತಿರುನೆಲ್ಲಿ ಥೆಟ್ಟು ಎಂಬ ಕಿರಿದಾದ ರಸ್ತೆಯಲ್ಲಿ ಬೆಳಗಿನ ಜಾವ ಆರು ಗಂಟೆಗೆ ಈ ಘಟನೆ ಸಂಭವಿಸಿದ್ದು, ಹಲವರಿಗೆ ಗಾಯಗಳಾಗಿವೆ. ಅದೃಷ್ಟವಷಾತ್‌ ಯಾವುದೇ ಸಾವು ಸಂಭವಿಸಿಲ್ಲ.

    50 ಜನ ಪ್ರಯಾಣಿಕರನ್ನು ಹೊತ್ತಿ ಕೇರಳದಿಂದ ನಾಡಿನತ್ತ ಸಾಗುತ್ತಿದ್ದ ಬಸ್‌ ರಸ್ತೆಯಲ್ಲಿ ಅಡ್ಡಲಾಗಿ ಪಲ್ಟಿಯಾಗಿದ್ದು, ಗಾಯಾಳುಗಳನ್ನು ವಿವಿಧ ವಾಹನಗಳನ್ನು ಬಳಸಿ ಮಾನಂದವಾಡಿ ವೈದ್ಯಕೀಯ ಕಾಲೇಜಿಗೆ ಸಾಗಿಸಲಾಗಿದೆ.

    ಅಪಘಾತ ಸಂಭವಿಸಿದ ಕೂಡಲೇ ಸಹ ಪ್ರಯಾಣಿಕರು ಮತ್ತು ಸ್ಥಳೀಯರು ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದು, ಕೂಡಲೇ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search