Friday, November 6, 2026
spot_img
More
    spot_img
    HomeNational/ Internationalಲಾರೆನ್ಸ್‌ ಬಿಷ್ಣೋಯಿ ಸಹೋದರನನ್ನು ವಶಕ್ಕೆ ಪಡೆದ ಅಮೆರಿಕಾ ಪೊಲೀಸರು

    ಲಾರೆನ್ಸ್‌ ಬಿಷ್ಣೋಯಿ ಸಹೋದರನನ್ನು ವಶಕ್ಕೆ ಪಡೆದ ಅಮೆರಿಕಾ ಪೊಲೀಸರು

    ವಾಷಿಂಗ್ಟನ್:‌ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯಿ ಸಹೋದರ ಅನ್ಮೋಲ್‌ ಬಿಷ್ಣೋಯಿಯನ್ನು ಅಮರಿಕಾ ಪೊಲೀಸರು ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

    ಇನ್ನು ಮುಂಬೈ ಪೊಲೀಸರು ಅನ್ಮೋಲ್‌ ಬಿಷ್ಣೋಯಿಯನ್ನು ಅಮೆರಿಕಾದಿಂದ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ಸಿದ್ಧತೆಗಳನ್ನು ಆರಂಭಿಸಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ. ಕೆಲ ವಾರಗಳ ಹಿಂದಷ್ಟೇ ಮಹಾರಾಷ್ಟ್ರ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳ ತನಿಖೆ ನಡೆಸುವ ವಿಶೇಷ ನ್ಯಾಯಾಲಯ ಅನ್ಮೋಲ್‌ ಬಿಷ್ಣೋಯಿ ವಿರುದ್ಧ ಜಾಮೀನು ರಹಿತ ವಾರೆಂಟ್‌ ಜಾರಿ ಮಾಡಿತ್ತು.

    ಪಂಜಾಬಿ ಗಾಯಕ ಸಿಧು ಮೂಸೆವಾಲ ಕೊಲೆ ಪ್ರಕರಣ, ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ರ ಮುಂಬೈ ನಿವಾಸದ ಮೇಲೆ ದಾಳಿ, ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಅನ್ಮೋಲ್‌ ಬಿಷ್ಣೋಯಿ ಭಾರತಕ್ಕೆ ಬೇಕಾದ ಕ್ರಿಮಿನಲ್‌ ಆಗಿದ್ದು, ಎನ್‌ಐಎ ಈತನ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಿದೆ.

    ಇನ್ನು ಸಲ್ಮಾನ್‌ ಖಾನ್‌ ನಿವಾಸದ ಎದುರು ಗುಂಡು ಹಾರಿಸಿದ ಪ್ರಕರಣದಲ್ಲಿ ಅನ್ಮೋಲ್‌ ಬಿಷ್ಣೋಯಿ ಪಾತ್ರವಿದೆ ಎಂದು ಶಂಕೆ ವ್ಯಕ್ತಪಡಿಸಿದ್ದ ಪೊಲೀಸರು ಕಳೆದ ಅಕ್ಟೋಬರ್‌ನಲ್ಲಿ ಈತನನ್ನು ಎನ್‌ಐಎ ʼಮೋಸ್ಟ್‌ ವಾಂಟೆಡ್‌ʼ ಪಟ್ಟಿಗೆ ಸೇರಿಸಿತ್ತು. ಅಲ್ಲದೇ ಅನ್ಮೋಲ್‌ ಬಿಷ್ಣೋಯಿ ಕುರಿತು ನಿಖರ ಮಾಹಿತಿ ನೀಡಿದವರಿಗೆ ಹತ್ತು ಲಕ್ಷ ರೂಪಾಯಿ ಬಹುಮಾನವನ್ನೂ ಸಹ ಘೋಷಿಸಿತ್ತು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search