ನವದೆಹಲಿ: ನವೆಂಬರ್.25ರಿಂದ ಡಿಸೆಂಬರ್.20ರವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದೆ.
ಇದರ ಅಂಗವಾಗಿ ನವೆಂಬರ್.24ರ ಭಾನುವಾರದಂದು ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ಕೇಂದ್ರ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿರುವ ಸಚಿವ ಕಿರಣ್ ರಿಜಿಜು ಅವರು, ಅಧಿವೇಶನಕ್ಕೂ ಮುನ್ನ ಸರ್ವಪಕ್ಷಗಳ ಸಭೆ ಕರೆಯಲಾಗುವುದು. ಸಭೆಯಲ್ಲಿ ಸಮಸ್ಯೆಗಳನ್ನು ಕುರಿತು ಚರ್ಚಿಸಿ ಒಮ್ಮತ ಮೂಡಿಸಲಾಗುತ್ತದೆ. ಇದು ಆಗಿನಿಂದಲೂ ನಡೆದುಬಂದಿರುವ ವಾಡಿಕೆಯಾಗಿದೆ ಎಂದು ಹೇಳಿದ್ದಾರೆ.
ಇನ್ನು ಸಭೆಯಲ್ಲಿ ಸರ್ಕಾರವು ತನ್ನ ಕಾರ್ಯಸೂಚಿಗಳನ್ನು ಮಂಡಿಸಲಿದ್ದು, ವಿವಿಧ ವಿಷಯಗಳ ಚರ್ಚೆಗೆ ಪ್ರತಿಪಕ್ಷಗಳು ಒತ್ತಾಯಿಸುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ.
ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆ ನಂತರ ನಡೆಯುತ್ತಿರುವ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ವಕ್ಫ್ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ.
ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಒಂದು ರಾಷ್ಟ್ರ, ಒಂದು ಚುನಾವಣಾ ಮಸೂದೆಯನ್ನು ಸಹ ಪರಿಚಯಿಸುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


