ಆಂಧ್ರಪ್ರದೇಶದ ಪ್ರಸಿದ್ಧ ಯಾತ್ರಾಸ್ಥಳ ತಿರುಪತಿ ತಿರುಮಲದ ಭಕ್ತರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಕೇವಲ 3 ಗಂಟೆಗಳಲ್ಲಿ ದರ್ಶನ ಮಾಡುವ ಯೋಜನೆಯನ್ನು ಸಿದ್ಧಪಡಿಸುತ್ತಿದೆ.
ದಿನಗಟ್ಟಲೆ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದ ಭಕ್ತರಿಗೆ ವಿಶೇಷ ದರ್ಶನದ ವ್ಯವಸ್ಥೆಯನ್ನು ತಿರುಪತಿ ದೇವಾಲಯ ಟ್ರಸ್ಟ್ ಈ ಹಿಂದೆಯೇ ಜಾರಿಗೆ ತಂದಿತ್ತು. ಆದರೆ ಇದೀಗ ಮೂರು ಗಂಟೆಗಳಲ್ಲಿ ದರ್ಶನ ಮುಗಿಸುವ ಯೋಜನೆಯನ್ನು ತರುತ್ತಿದೆ.
ದೇವಾಲಯದ ದರ್ಶನದ ವ್ಯವಸ್ಥೆಯಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗುತ್ತಿದ್ದು, ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವ ಕಾರಣ ಈ ಬಾರಿ ಆಡಳಿತ ಮಂಡಳಿಯು ಕೃತಕ ಬುದ್ಧಿಮತ್ತೆ ಮತ್ತು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಹೊಸ ದರ್ಶನ ವ್ಯವಸ್ಥೆಯನ್ನು ಜಾರಿಗೆ ತರಲು ನಿರ್ಧರಿಸಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


