ದಕ್ಷಿಣ ಕನ್ನಡ: ಟೀಂ ಇಂಡಿಯಾದ ಟಿ.20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕವನ್ನು ನೆರವೇರಿಸಿದರು.
ದಕ್ಷಿಣ ಆಫ್ರಿಕಾ ವಿರುದ್ಧ ಟಿ-20 ಸರಣಿ ಗೆದ್ದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಸೂರ್ಯಕುಮಾರ್ ಯಾದವ್ ಅವರು ಪತ್ನಿಯೊಂದಿಗೆ ಆಗಮಿಸಿ ಸುಬ್ರಮ್ಮಣ್ಯನ ದರ್ಶನ ಪಡೆದರು.
ಬಳಿಕ ಸುಬ್ರಮಣ್ಯನ ಸನ್ನಿಧಾನದಲ್ಲಿ ಪತ್ನಿಯೊಡನೆ ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕವನ್ನು ನೆರವೇರಿಸಿ ಹರಕೆ ತೀರಿಸಿದ್ದಾರೆ. ಈ ವೇಳೆ ದೇವಸ್ಥಾನದ ವತಿಯಿಂದ ಯಾದವ್ ದಂಪತಿಗೆ ಗೌರವ ಸಮರ್ಪಿಸಲಾಯಿತು. ಇನ್ನು ಸೂರ್ಯಕುಮಾರ್ ಯಾದವ್ ಕಂಡು ದೇವಾಲಯಕ್ಕೆ ಆಗಮಿಸಿದ ಭಕ್ತರು ಸಂತಸ ವ್ಯಕ್ತಪಡಿಸಿದರು. ಅವರ ಜತೆ ಸೆಲ್ಫಿ ಕ್ಲಿಕ್ಕಿಸಿಕೊಂಡರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


