ಬೆಂಗಳೂರು: ಬಿಜೆಪಿ ವಿರುದ್ಧ 100 ಕೋಟಿ ರೂಪಾಯಿ ಆಮಿಷ ಆರೋಪ ಮಾಡಿರುವ ಶಾಸಕ ರವಿಕುಮಾರ್ ಗಣಿಗ ತಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಲಿ. ಇಲ್ಲದೇ ಕ್ರಮ ಎದುರಿಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಆಧಾರರಹಿತ ಆರೋಪ ಮಾಡುವುದು ಸರಿಯಲ್ಲ. ಆರೋಪಕ್ಕೆ ಸಾಕ್ಷಿಗಳಿದ್ದರೆ ಅದನ್ನೆಲ್ಲಾ ಬಹಿರಂಗಪಡಿಸಬೇಕು. ನೂರಲ್ಲಾ ಐನೂರು ಕೋಟಿ ಇದ್ದರೂ ಪರವಾಗಿಲ್ಲ. ಅದರ ಬಗ್ಗೆ ಸಾಕ್ಷ್ಯಗಳಿದ್ದರೆ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದರು.
ಇನ್ನು ಸಿದ್ದರಾಮಯ್ಯ ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಿಲುಕಿದ್ದು, ಅವರ ವಿರುದ್ಧ ನ್ಯಾಯಾಲಯ ಸ್ಪಷ್ಟ ತೀರ್ಪು ನೀಡಿದೆ.
ಲೋಕಾಯುಕ್ತ ತನಿಖೆ ನಡೆಯುತ್ತಿದ್ದರೂ ಕಾಂಗ್ರೆಸ್ ನಾಯಕರು ನೈಜ ಸಮಸ್ಯೆಗಳಿಂದ ಗಮನ ಬೇರೆಡೆ ಸೆಳೆಯಲು ಆಧಾರ ರಹಿತ ಹೇಳಿಕೆ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.
ಇದೇ ವೇಳೆ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಕಾಂಗ್ರೆಸ್ ತನ್ನ ಅಕ್ರಮಗಳನ್ನು ಮುಚ್ಚಿಕೊಳ್ಳಲು ಷಡ್ಯಂತ್ರ ನಡೆಸುತ್ತಿದೆ. ಬಿಜೆಪಿ ನಾಯಕರು ಯಾವುದೇ ತಪ್ಪು ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


