ಬೆಂಗಳೂರು: ರಾಜ್ಯಾದ್ಯಾಂತ ನಾಳೆ ಮದ್ಯ ಮಾರಾಟ ಬಂದ್ ಮಾಡುವಂತೆ ಕರೆ ನೀಡಿದ್ದ ಘೋಷಣೆಯನ್ನು ವೈನ್ಸ್ ಮರ್ಚೆಂಟ್ಸ್ ಅಸೋಸಿಯೇಷನ್ ಇಂದು ವಾಪಸ್ ಪಡೆದಿದೆ.
ರಾಜ್ಯ ಸರ್ಕಾರದ ಮುಂದೆ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮದ್ಯ ಮಾರಾಟಗಾರರು ಬೇಡಿಕೆಯನ್ನಿಟ್ಟಿದ್ದರು.
ಈ ವಿಚಾರಕ್ಕೆ ಸಂಬಂಧಿಸಿದಂತೆ ವೈನ್ಸ್ ಮರ್ಚೆಂಟ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಕರುಣಾಕರ ಹೆಗಡೆ ಅವರು ಇಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಚರ್ಚಿಸಿದರು. ಬಳಿಕ ನಾಳೆ ಮದ್ಯ ಮಾರಾಟಕ್ಕೆ ನಿಷೇಧ ಹೇರಿದ್ದನ್ನು ಹಿಂಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


