ನೆಲಮಂಗಲ: ಚಿರತೆಯೊಂದು ಮಹಿಳೆಯನ್ನು ಕೊಂದಿದ್ದು ಮಾತ್ರವಲ್ಲದೇ ಬಳಿಕ ಮೃತದೇಹವನ್ನು ಹೊತ್ತೊಯ್ಯಲು ಯತ್ನಿಸಿದ ಘಟನೆ ದಾಬಸ್‌ಪೇಟೆಯ ಗೊಲ್ಲರಹಟ್ಟಿ ಗ್ರಾಮದ ಬಳಿ ನಡೆದಿದೆ.
ಗೊಲ್ಲರಹಟ್ಟಿ ಗ್ರಾಮದ ಬಳಿ 45 ವರ್ಷದ ಕರಿಯಮ್ಮ ಮೇಲೆ ಚಿರತೆ ದಾಳಿ ಮಾಡಿ ಕೊಂದಿತ್ತು. ರುಂಡವನ್ನು ಚಿರತೆ ತಿಂದಿದ್ದರಿಂದ ಮುಂಡ ಮಾತ್ರ ಪತ್ತೆ ಆಗಿತ್ತು. ಅರಣ್ಯಾಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಬಳಿಕ ಮೃತದೇಹವನ್ನು ಕುಟುಂಸ್ಥರಿಗೆ ಹಸ್ತಾಂತರಿಸಲಾಗಿದೆ. ಬೆಂಕಿ ಹಾಕಿ ಮಹಿಳೆಯ ಶವ ಕಾಯುತ್ತಿದ್ದವರಿಗೆ ಈ ವೇಳೆ ಮತ್ತೊಂದು ಶಾಕ್ ಎದುರಾಗಿದೆ. ಪೊಲೀಸ್ ಹಾಗೂ ಸಾರ್ವಜನಿಕರನ್ನೇ ಬೆದರಿಸಿ ಮೃತದೇಹವನ್ನು ಹೊತ್ತೊಯ್ಯಲು ಚಿರತೆ ಯತ್ನಿಸಿದೆ. ಕೂಡಲೇ ಅಲ್ಲೇ ಇದ್ದ ದೊಣ್ಣೆ, ಮಚ್ಚು ಮತ್ತು ಟಾರ್ಚ್ ಬಳಸಿ ಮತ್ತೊಮ್ಮೆ ಚಿರತೆ ಬಾಯಿಯಿಂದ ಮೃತದೇಹವನ್ನು ಬಿಡಿಸಿಕೊಂಡಿದ್ದಾರೆ.
ಇನ್ನು ಈ ಘಟನೆಯಿಂದ ಗ್ರಾಮಸ್ಥರು ಭಯಭೀತರಾಗಿದ್ದು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಹಲವು ತಲೆಮಾರುಗಳಿಂದ ಇಲ್ಲಿಯೇ ವಾಸವಿರುವ ನಮಗೆ ಅರಣ್ಯ ಇಲಾಖೆಯಿಂದ ರಕ್ಷಣೆ ಇಲ್ಲದಂತಾಗಿದೆ, ಯಾವುದೇ ಅಧಿಕಾರಿ ಬಂದರೂ ನಮ್ಮ ನೆರವಿಗೆ ಬರುವುದಿಲ್ಲ ಎಂದು ಕಿಡಿಕಾರಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


