ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ನಕ್ಸಲ್ ನಿಗ್ರಹ ಪಡೆ ಮತ್ತು ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದ್ದು, ಈ ವೇಳೆ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿಯಾಗಿದ್ದಾನೆಂದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಳೆದ ಕೆಲವು ದಿನಗಳಿಂದ ಹೆಬ್ರಿ-ಕಾರ್ಕಳ ಪ್ರದೇಶದಲ್ಲಿ ನಕ್ಸಲರ ಓಡಾಟ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕದ ಎಎನ್ಎಫ್ ಕಾರ್ಯಾಚರಣೆಗೆ ಮುಂದಾಗಿತ್ತು. ನಿನ್ನೆ ಮಧ್ಯರಾತ್ರಿ 5 ಮಂದಿ ನಕ್ಸಲರ ತಂಡ ಸೀತಂಬೈಲು ಸಮೀಪ ರೇಷನ್ ತೆಗೆದುಕೊಳ್ಳಲು ಬಂದಾಗ ಕೂಂಬಿಂಗ್ ಶುರುವಾಗಿದೆ.
ಈ ಕೂಂಬಿಂಗ್ನಲ್ಲಿ ಕಬ್ಬಿನಾಲೆ ಮೂಲದ ವಿಕ್ರಂ ಗೌಡ ಇದ್ದ ಎನ್ನಲಾಗಿದ್ದು, ಗುಂಡಿನ ದಾಳಿಗೆ ಈತ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಇನ್ನುಳಿದ ನಕ್ಸಲರಿಗಾಗಿ ತೀವ್ರ ಶೋಧಕಾರ್ಯ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ. ಹತನಾಗಿದರುವ ವಿಕ್ರಮ್ ಗೌಡ ನಕ್ಸಲರ ನೇತ್ರಾವತಿ ದಳದ ನಾಯಕನಾಗಿದ್ದ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


