ಹೊಸಪೇಟೆ: ಹಂಪಿ ವಿಶ್ವವಿದ್ಯಾಲಯದಲ್ಲಿ 2023-24ನೇ ಶೈಕ್ಷಣಿಕ ವರ್ಷದ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಇನ್ನೂ ಬಿಡುಗಡೆ ಆಗಿಲ್ಲ. ಇದರಿಂದ ಅಸಮಾಧಾನಗೊಂಡಿರುವ ವಿದ್ಯಾರ್ಥಿಗಳು ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದ್ದಾರೆ.
ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಕಳೆದ ಹಲವು ವರ್ಷಗಳಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಎರಡು ವರ್ಷಗಳ ವಿದ್ಯುತ್ ಬಿಲ್ ಪಾವತಿಸಲು ವಿಫಲವಾದ ಕಾರಣ ಸ್ಥಳೀಯ ವಿದ್ಯುತ್ ಸರಬರಾಜು ಕಂಪನಿ ಕೆಲವು ತಿಂಗಳ ಹಿಂದೆ ವಿಶ್ವವಿದ್ಯಾಲಯಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿತ್ತು.
ಬಳಿಕ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ಶೀಘ್ರವೇ ಬಾಕಿ ಪಾವತಿಸಲು ಕ್ರಮಕೈಗೊಳ್ಳಲಾಗುವುದು ಎಂದು ಕಂಪನಿಗೆ ಭರವಸೆ ನೀಡಿ ವಿದ್ಯುತ್ ಪೂರೈಕೆ ಮುಂದುವರಿಯುವಂತೆ ಮಾಡಿತ್ತು.
ಅಷ್ಟೇ ಅಲ್ಲದೇ ವಿವಿಯ 100ಕ್ಕೂ ಹೆಚ್ಚು ಗುತ್ತಿಗೆ ಕಾರ್ಮಿಕರಿಗೂ ಕಳೆದ 8 ತಿಂಗಳುಗಳಿಂದ ವೇತನ ನೀಡಿಲ್ಲ. ಅವರಿಗೂ ಬಾಕಿ ಇರುವ ವೇತನವನ್ನು ಶೀಘ್ರವೇ ಮಂಜೂರು ಮಾಡುವುದಾಗಿ ಭರವಸೆ ನೀಡಲಾಗಿದೆ.
ಇದೀಗ 130 ಕ್ಕೂ ಹೆಚ್ಚು ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಬಿಡುಗಡೆಯಾಗದಿರುವುದು ವಿವಿಯ ಪ್ರತಿಷ್ಠೆಗೆ ಹೊಡೆತ ಬೀಳುವಂತೆ ಮಾಡಿದೆ.
ಸರಕಾರ ಕೂಡಲೇ ಹಣ ಬಿಡುಗಡೆ ಮಾಡಲು ವಿಫಲವಾದರೆ ನಿರ್ವಹಣೆ ಕಷ್ಟವಾಗಲಿದೆ ಎಂದು ಎಸ್‌ಸಿ ಸಮುದಾಯದ ಸ್ನಾತಕೋತ್ತರ ವಿದ್ಯಾರ್ಥಿಯೊಬ್ಬರು ಅಳಲು ತೋಡಿಕೊಂಡಿದ್ದಾರೆ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


