ಬೆಂಗಳೂರು: ಬೆಳಗಾವಿಯಲ್ಲಿ ಡಿಸೆಂಬರ್.9ರಿಂದ ಡಿಸೆಂಬರ್.20ರವರೆಗೆ ಚಳಿಗಾಲದ ಅಧಿವೇಶನ ನಡೆಯಲಿದೆ.
ಈ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯು ಅಧಿವೇಶನ ಕರೆಯುವ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಡತ ರವಾನಿಸಿದೆ. ಈ ಕಡತಕ್ಕೆ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಅವರು ಸಹ ಒಪ್ಪಿಗೆ ಸೂಚಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಡಿಸೆಂಬರ್.9ರಿಂದ ಅಧಿವೇಶನ ಆರಂಭವಾಗಲಿದ್ದು, ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಮುಗಿಬೀಳುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ.
ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿರುವ ವಕ್ಫ್ ಹಗರಣ, ಬಿಪಿಎಲ್ ಕಾರ್ಡ್ ರದ್ದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಅಧಿವೇಶನದಲ್ಲಿ ಭಾರೀ ಕೋಲಾಹಲ ನಡೆಯುವ ಸಾಧ್ಯತೆಯಿದೆ.
ಇನ್ನು ಪದೇ ಪದೇ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಿಂತು ಹೋಗಿವೆ ಎಂದು ಹೇಳಿಕೆ ನೀಡುತ್ತಿರುವ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೂ ಕೂಡ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ದಾಖಲೆ ಸಮೇತ ಉತ್ತರ ಕೊಡಲಿದ್ದಾರೆ ಎನ್ನಲಾಗಿದೆ.
ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಏನೆಲ್ಲಾ ಅನುಕೂಲವಾಗಿದೆ ಎಂಬುದನ್ನು ಸಾಕ್ಷಿ ಸಮೇತ ವಿವರಣೆ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


