Monday, November 2, 2026
spot_img
More
    spot_img
    HomeJobsಪರಿಶಿಷ್ಟ ಜಾತಿಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಒಳಮೀಸಲಾತಿ: ಆದೇಶದ ವಿವರಗಳು

    ಪರಿಶಿಷ್ಟ ಜಾತಿಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಒಳಮೀಸಲಾತಿ: ಆದೇಶದ ವಿವರಗಳು

    ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿಯ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸಂಪುಟ ಸಭೆಯಲ್ಲಿ ನಿರ್ಧಾರಗೊಂಡಿದೆ. ರಾಜ್ಯದ ಪರಿಶಿಷ್ಟ ಜಾತಿಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಒಳಮೀಸಲಾತಿ ಕಲ್ಪಿಸುವ ಬಗ್ಗೆ ಆದೇಶವನ್ನು ಹೊರಡಿಸಲಾಗಿದೆ.

    ಈ ಕುರಿತು ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಎಸ್.ವಿ.ಕಲಾವತಿ ಸರ್ಕಾರದ ಜಂಟಿ ಕಾರ್ಯದರ್ಶಿ ಸಮಾಜ ಕಲ್ಯಾಣ ಇಲಾಖೆ ಆದೇಶವನ್ನು ಹೊರಡಿಸಿದ್ದಾರೆ.

    ಆದೇಶವು ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಒಳಮೀಸಲಾತಿ (ವರ್ಗೀಕರಣ) ಕಲ್ಪಿಸುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ. ಕರ್ನಾಟಕ ಸರ್ಕಾರವು ಮಾನ್ಯ ಸರ್ವೋಚ್ಚ ನ್ಯಾಯಾಲಯವು CA No 2317 ರಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಪಂಜಾಬ್ ರಾಜ್ಯ ಮತ್ತು ಇತರರು Vs ದೇವಿಂದರ್‌ ಸಿಂಗ್ ಪ್ರಕರಣದಲ್ಲಿ ನೀಡಿರುವ ತೀರ್ಪಿನ ಅನ್ವಯ ಪರಿಶಿಷ್ಟ ಜಾತಿಗಳ ಒಳಮೀಸಲಾತಿ (ವರ್ಗೀಕರಣ) ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಆಯೋಗ ವಿಚಾರಣಾ ಕಾಯ್ದೆ 1952 ರಂತೆ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಇವರ ನೇತೃತ್ವದ ಏಕ ಸದಸ್ಯ ಆಯೋಗವನ್ನು ರಚಿಸಿತ್ತು.

    ಅದರಂತೆ, ಸದರಿ ಆಯೋಗವು ದಿನಾಂಕ 04-08-2025 ರಂದು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ. ಆಯೋಗವು ಪರಿಶಿಷ್ಟ ಜಾತಿಗಳನ್ನು ಪವರ್ಗ ಎ, ಬಿ, ಸಿ, ಡಿ ಮತ್ತು ಇ ಎಂದು 5 ಗುಂಪುಗಳಾಗಿ ವರ್ಗೀಕರಿಸಿದ್ದು, ಸದರಿ ಆಯೋಗದ ವರದಿಯನ್ನು ಪರಿಶೀಲಿಸಿ, ಸೂಕ್ತ ನಿರ್ಧಾರಕ್ಕಾಗಿ, ಸಚಿವ ಸಂಪುಟದ ಮುಂದೆ ಮಂಡಿಸಲಾಗಿತ್ತು.

    ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ/ ವರ್ಗೀಕರಣದ ಬಗ್ಗೆ ನ್ಯಾಯಮೂರ್ತಿ ಡಾ. ಹೆಚ್.ಎನ್.ನಾಗಮೋಹನ್ ದಾಸ್ ಆಯೋಗವು ನೀಡಿರುವ ವರದಿಯನ್ನು ಕೂಲಂಕುಷವಾಗಿ ಚರ್ಚಿಸಿ, ಕೆಲವು ಮಾರ್ಪಾಡುಗಳೊಂದಿಗೆ ಸದರಿ ವರದಿಯನ್ನು ಸಚಿವ ಸಂಪುಟವು ಒಪ್ಪಿರುತ್ತದೆ ಎಂದು ಹೇಳಿದೆ.

    ಸರ್ಕಾರದ ಆದೇಶ: ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಅಗತ್ಯ ಮಾರ್ಪಾಡುಗಳೊಂದಿಗೆ ಅಂಗೀಕರಿಸಿ, ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳನ್ನು 5 ಪವರ್ಗಗಳ ಬದಲಾಗಿ ಪವರ್ಗ-ಎ, ಪ್ರವರ್ಗ-ಬಿ ಮತ್ತು ಪವರ್ಗ-ಸಿ ಎಂದು 3 ಪ್ರವರ್ಗಳಾಗಿ ವರ್ಗೀಕರಿಸಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇ.17% ಮೀಸಲಾತಿಯನ್ನು ಪವರ್ಗ-ಎ ರಲ್ಲಿನ ಸಮುದಾಯಗಳಿಗೆ ಶೇ.6%, ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇ. 6% ಮತ್ತು ಪ್ರವರ್ಗ -ಸಿ ರಲ್ಲಿನ ಸಮುದಾಯಗಳಿಗೆ ಶೇ.5% ರಷ್ಟು ನಿಗದಿಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದೆ.

    ಆಯೋಗದ ವರದಿಯಲ್ಲಿನ ಪವರ್ಗ-ಇ ರಲ್ಲಿನ ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಈ 3 ಸಮುದಾಯಗಳು ತಮ್ಮ ಮೂಲ ಜಾತಿಯನ್ನು ತಿಳಿಸದೇ ಇರುವುದರಿಂದ ಸದರಿ 3 ಜಾತಿಗಳು ಪ್ರವರ್ಗ-ಎ ಅಥವಾ ಪವರ್ಗ-ಬಿ ಗಳಲ್ಲಿ ಮೀಸಲಾತಿ ಸೌಲಭ್ಯವನ್ನು ಪಡೆಯಬಹುದು.

    ರಾಜ್ಯ ಸಿವಿಲ್ ಸೇವೆಗಳ ಹುದ್ದೆಗಳಿಗೆ ಒಳಮೀಸಲಾತಿ ಹಿನ್ನೆಲೆಯಲ್ಲಿ ತಡೆಹಿಡಿಯಲಾದ ನೇರ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಕ್ರಮವಹಿಸುವುದು. ಎಲ್ಲಾ ಇಲಾಖೆಗಳು ಮತ್ತು ಅವುಗಳ ಅಧೀನದ ಎಲ್ಲಾ ನಿಗಮ/ ಮಂಡಳಿ/ ಸಂಸ್ಥೆಗಳಲ್ಲಿ ಮುಂಬಡ್ತಿ ಪ್ರಕ್ರಿಯೆಯನ್ನೂ ಸಹ ಮುಂದುವರೆಸಬಹುದಾಗಿದೆ.

    ಉದ್ಯೋಗಳ ನೇಮಕಾತಿಯಲ್ಲಿ ಹಾಜರಾಗುವ ಎಲ್ಲಾ ಅಭ್ಯರ್ಥಿಗಳಿಗೆ ಆಯಾ ನೇಮಕಾತಿಗಳಿಗೆ ನಿಗದಿಪಡಿಸಿರುವ ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ ನೀಡಲು ತೀರ್ಮಾನಿಸಲಾಗಿದ್ದು, ಈ ಬಗ್ಗೆ ಪ್ರತ್ಯೇಕವಾಗಿ ಆದೇಶ ಹೊರಡಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಅಗತ್ಯ ಕ್ರಮವಹಿಸುವುದು.

    ಹೊಸ ದತ್ತಾಂಶ ಅಥವಾ ಮಾಹಿತಿ ಬಂದಾಗ ಅಗತ್ಯ ಮಾರ್ಪಾಡುಗಳನ್ನು ಮಾಡಲು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗಕ್ಕೆ ಅಧಿಕಾರ ನೀಡುವ ಬಗ್ಗೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಅಧಿನಿಯಮ, 2002ಕ್ಕೆ ಸೂಕ್ತ ತಿದ್ದುಪಡಿ ಮಾಡಲಾಗುವುದು.

    ಪರಿಶಿಷ್ಟ ಜಾತಿಗಳಲ್ಲಿನ ಚಲನಶೀಲತೆಯನ್ನು ಹಾಗೂ ಲಭ್ಯವಾಗುವ ದತ್ತಾಂಶಗಳನ್ನು ಪರಿಶೀಲಿಸಿಕೊಂಡು, ಕಾಲಕಾಲಕ್ಕೆ ಈ ಜಾತಿಗಳನ್ನು ಅಧ್ಯಯನ ಮಾಡಿ, ವರದಿ ನೀಡಲು ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗವನ್ನು ರಚಿಸಲಾಗುವುದು ಎಂದು ಆದೇಶ ಹೇಳಿತ್ತು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search