Sunday, September 20, 2026
spot_img
More
    spot_img
    HomeLatest newsರಾಜ್ಯದಲ್ಲಿ ಹೆಚ್ಚುವರಿ ವಿದ್ಯುತ್ ಉಪಸ್ಥಾವರಗಳ ನಿರ್ಮಾಣ; ಕೆಜೆ ಜಾರ್ಜ್ ಮಾಹಿತಿ

    ರಾಜ್ಯದಲ್ಲಿ ಹೆಚ್ಚುವರಿ ವಿದ್ಯುತ್ ಉಪಸ್ಥಾವರಗಳ ನಿರ್ಮಾಣ; ಕೆಜೆ ಜಾರ್ಜ್ ಮಾಹಿತಿ

    ಬೆಳಗಾವಿ: ಗುಣಮಟ್ಟದ ವಿದ್ಯುತ್ ಪೂರೈಕೆಗೆ ಪೂರಕವಾಗಿ ರಾಜ್ಯದಲ್ಲಿ ಹೆಚ್ಚುವರಿಯಾಗಿ 440 ಉಪಸ್ಥಾವರಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಯೋಜನೆ ಸಿದ್ಧ ಪಡಿಸಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

    Advertisement

    ವಿಧಾನಸಭೆಯ ಪ್ರಶ್ನೊ?ತ್ತರದ ಅವಧಿಯಲ್ಲಿ ಬಂಗಾರಪೇಟೆ ಕ್ಷೇತ್ರದ ಎಸ್.ಎನ್.ನಾರಾಯಣಸ್ವಾಮಿ, ತಮ ಕ್ಷೇತ್ರದಲ್ಲಿ ವಿದ್ಯುತ್ ವೋಲ್ಟೇಜ್ ಸಮಸ್ಯೆ ಹೆಚ್ಚಾಗಿದೆ. ಕೃಷಿ ಪಂಪ್ ಸೆಟ್‍ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ.

    ಜೊತೆಗೆ ಕೆಲವು ಪ್ರದೇಶಗಳಿಗೆ ಉಪಸ್ಥಾವರಗಳು ಮಂಜೂರಾಗಿವೆ. ಆದರೆ ಸಚಿವರು ನೀಡಿರುವ ಉತ್ತರದಲ್ಲಿ ಯಾವುದೇ ಉಪಸ್ಥಾವರಗಳು ಮಂಜೂರಾಗಿಲ್ಲ ಎಂದು ಹೇಳಿದ್ದಾರೆ. ಇದು ತಮಗೆ ಆಘಾತ ಉಂಟು ಮಾಡಿದೆ ಎಂದು ಹೇಳಿದರು.

    ಸಚಿವ ಕೆ.ಜೆ.ಜಾರ್ಜ್ ಉತ್ತರ ನೀಡಿ, ಬಂಗಾರಪೇಟೆ ಕ್ಷೇತ್ರದಲ್ಲಿ ಕೆಲವು ಕಡೆ ಭೂಮಿಯ ಲಭ್ಯತೆ ಸಮಸ್ಯೆ ಇದೆ, ಭೂಮಿ ದೊರೆತ ಬಳಿಕ ಉಪಸ್ಥಾವರಗಳನ್ನು ನಿರ್ಮಿಸಲಾಗುವುದು. ಆ ಭಾಗದಲ್ಲಿ ವಿದ್ಯುತ್ ಮಾರ್ಗ ಕಾಮಗಾರಿ ನಡೆಯುತ್ತಿದೆ. ಅದು ಪೂರ್ಣಗೊಂಡ ಬಳಿಕ ವೋಲ್ಟೆ?ಜ್ ಗುಣಮಟ್ಟದ ಸಮಸ್ಯೆ ನಿವಾರಣೆಯಾಗಲಿದೆ ಎಂದರು.

    ಈವರೆಗೂ ವರ್ಷಕ್ಕೆ 40 ಉಪಸ್ಥಾವರಗಳನ್ನು ನಿರ್ಮಿಸಲಾಗುತ್ತಿತ್ತು. ಪ್ರಸಕ್ತ ವರ್ಷ 100 ಉಪಸ್ಥಾವರಗಳ ನಿರ್ಮಾಣವನ್ನು ಕೈಗೆತ್ತಿಕೊಳ್ಳಲಾಗಿದೆ. ಹೆಚ್ಚುವರಿಯಾಗಿ 440 ಉಪಸ್ಥಾವರಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading