Monday, March 30, 2026
spot_img
More
    spot_img
    HomeLatest news2025ನೇ ಸಾಲಿನ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ ಅಂಗೀಕಾರ

    2025ನೇ ಸಾಲಿನ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ ಅಂಗೀಕಾರ

    ಬೆಳಗಾವಿ: ಖಾಸಗಿ ವೈದ್ಯಕೀಯ ಸಂಸ್ಥೆಯ ಪರಿಭಾಷೆಯೊಳಗೆ ಮಾನಸಿಕ ಆರೋಗ್ಯ ಸಂಸ್ಥೆಯನ್ನು ಸೇರಿಸಲು ಅವಕಾಶ ಮಾಡುವ 2025ನೇ ಸಾಲಿನ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕವನ್ನು ತಿದ್ದುಪಡಿಯೊಂದಿಗೆ ವಿಧಾನಸಭೆ ಅಂಗೀಕರಿಸಿತು.

    ಶಾಸನ ರಚನಾ ಕಲಾಪದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಪರ್ಯಾಲೋಚನೆಗೆ ಮಂಡಿಸಿ ಕಾಯ್ದೆಯಲ್ಲಿ ಮಾನಸಿಕ ಆರೋಗ್ಯ ಸಂಸ್ಥೆಗಳನ್ನು ಸೇರ್ಪಡೆ ಮಾಡುವ ಉದ್ದೇಶದಿಂದ ಈ ವಿಧೇಯಕ ತರಲಾಗಿದೆ. ಹೊಸದಾಗಿ ಆರಂಭವಾಗುವ ಆಸ್ಪತ್ರೆಗಳಿಗೆ 10 ದಿನದಲ್ಲಿ ತಾತ್ಕಾಲಿಕ ನೋಂದಣಿಯ ಅನುಮತಿ ನೀಡಲಾಗುವುದು. ಅಂತಹ ಆಸ್ಪತ್ರೆಗಳು ಆರು ತಿಂಗಳ ಒಳಗಾಗಿ ಷರತ್ತುಗಳನ್ನು ಪೂರೈಸಿ ಎಲ್ಲಾ ಮೂಲ ಸೌಲಭ್ಯಗಳನ್ನು ಪೂರ್ಣಗೊಳಿಸಬೇಕು ಎಂದರು.

    ಭಾರತೀಯ ವೈದ್ಯಕೀಯ ಸಂಘದಿಂದ ಒಬ್ಬ ಸದಸ್ಯ, ನೋಂದಾಯಿತ ವೈದ್ಯಕೀಯ ಸಂಸ್ಥೆ ಅಥವಾ ಆಯುಷ್‌ ವೈದ್ಯಕೀಯ ವೃತ್ತಿ ನಿರತ ಸಂಘವನ್ನು ಪ್ರತಿನಿಧಿಸುವ ಒಬ್ಬ ಸದಸ್ಯನನ್ನು ನೋಂದಣಿ ಮತ್ತು ಕುಂದು ಕೊರತೆ ಪರಿಹಾರ ಪ್ರಾಧಿಕಾರಕ್ಕೆ ಸದಸ್ಯನಾಗಿ ನಾಮನಿರ್ದೇಶನ ಮಾಡಲಾಗುತ್ತದೆ. ಈ ಪ್ರಾಧಿಕಾರವು ತಾತ್ಕಾಲಿಕ ನೋಂದಣಿ ಪ್ರಮಾಣಪತ್ರವನ್ನು ಮಂಜೂರು ಮಾಡಲು ಅಥವಾ ನವೀಕರಿಸಲು ಅವಕಾಶ ಕಲ್ಪಿಸಲಿದೆ. ಅವಧಿ ಮುಕ್ತಾಯಗೊಂಡ, ತಾತ್ಕಾಲಿಕವಾಗಿ ನೋಂದಾಯಿಸಿದ ಖಾಸಗಿ ವೈದ್ಯಕೀಯ ಸಂಸ್ಥೆಗಳ ಪಟ್ಟಿಯನ್ನು ಪ್ರಕಟಿಸಲು ಅನುವು ಮಾಡಿಕೊಡುತ್ತದೆ. ಖಾಸಗಿ ವೈದ್ಯಕೀಯ ಸಂಸ್ಥೆಗಳು ಶಾಶ್ವತ ಅಥವಾ ನವೀಕರಣಕ್ಕಾಗಿ ಅರ್ಜಿ ಸಲ್ಲಿಸಬೇಕು.

    ಶಾಶ್ವತ ನೋಂದಣಿ ನವೀಕರಣವನ್ನು ಮಂಜೂರು ಮಾಡಲು ಪೂರ್ವಾಪೇಕ್ಷಿತಗಳನ್ನು ನಿಯಮಿಸುವುದು ಮತ್ತು ಅರ್ಜಿಗಳ ವಿಲೇವಾರಿಗಾಗಿ ಕಾರ್ಯ ವಿಧಾನವನ್ನು ನಿಯಮಿಸುವ ಉದ್ದೇಶದಿಂದ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ -2007ಕ್ಕೆ ತಿದ್ದುಪಡಿ ತರಲಾಗಿದೆ ಎಂದು ಹೇಳಿದರು.

    ಚರ್ಚೆಯ ನಂತರ ಸಭಾಧ್ಯಕ್ಷರು ವಿಧೇಯಕವನ್ನು ಮತಕ್ಕೆ ಹಾಕಿದಾಗ ಈ ವಿಧೇಯಕವು ತಿದ್ದುಪಡಿಯೊಂದಿಗೆ ಧ್ವನಿಮತದ ಮೂಲಕ ಅನುಮೋದನೆ ಪಡೆಯಿತು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬಿಗ್ ನ್ಯೂಸ್! ಬೆಂಗಳೂರು ಕರಗ ಉತ್ಸವಕ್ಕೆ ಸಜ್ಜು—1000ಕ್ಕೂ ಹೆಚ್ಚು ಪೊಲೀಸರ ಬಿಗಿ ಭದ್ರತೆ, ₹1.70 ಕೋಟಿ ವೆಚ್ಚ!

    “ಬೆಂಗಳೂರು ಕರಗ ಉತ್ಸವ 2026” ಮತ್ತೆ ನಗರಕ್ಕೆ ಸಾಂಸ್ಕೃತಿಕ ಸಂಭ್ರಮ ತರಲು ಸಜ್ಜಾಗಿದೆ! ಏಪ್ರಿಲ್ 1ರಂದು ನಡೆಯಲಿರುವ ಈ ಐತಿಹಾಸಿಕ ಉತ್ಸವಕ್ಕಾಗಿ ಭರ್ಜರಿ ಸಿದ್ಧತೆಗಳು ನಡೆಯುತ್ತಿದ್ದು, ಭದ್ರತೆ ಮತ್ತು ವ್ಯವಸ್ಥೆಗಾಗಿ ಸರ್ಕಾರದಿಂದ ವಿಶೇಷ...

    ಬ್ರೇಕಿಂಗ್ರಾ! ಮನವಮಿ ಹಬ್ಬಕ್ಕೆ ಮಾರುಕಟ್ಟೆ ಬಂದ್ ಆಗುತ್ತಾ? ಹೂಡಿಕೆದಾರರಿಗೆ ಕ್ಲಿಯರ್ ಮಾಹಿತಿ!

    “ಸ್ಟಾಕ್ ಮಾರ್ಕೆಟ್ ಹಾಲಿಡೇ 2026” ಇದೀಗ ಹೂಡಿಕೆದಾರರಲ್ಲಿ ದೊಡ್ಡ ಗೊಂದಲ ಮೂಡಿಸಿದೆ. ರಾಮನವಮಿ ಹಬ್ಬದ ಹಿನ್ನೆಲೆಯಲ್ಲಿ ಗುರುವಾರ ಅಥವಾ ಶುಕ್ರವಾರ ಷೇರು ಮಾರುಕಟ್ಟೆ ಬಂದ್ ಆಗುತ್ತದೆಯಾ? ಎಂಬ ಪ್ರಶ್ನೆ ಟ್ರೇಡರ್‌ಗಳ ನಡುವೆ ಭಾರೀ...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading