ಬೆಳಗಾವಿ: ವಿಧಾನಮಂಡಲದ ಚಳಿಗಾಲದ ಅಧಿವೇಶನ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ತಗಾದೆಗಳು ಜೋರಾಗುವ ಸನ್ನಿವೇಶಗಳಿದ್ದು, ತಾತ್ಕಾಲಿಕ ಕದನ ವಿರಾಮದ ಉಲ್ಲಂಘನೆಯ ಲಕ್ಷಣಗಳು ಗೋಚರಿಸುತ್ತಿವೆ.
ವಿಧಾನ ಮಂಡಲದ ಅಧಿವೇಶನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎರಡು ಉಪಹಾರ ಕೂಟಗಳನ್ನು ನಡೆಸಿ, ಕದನ ವಿರಾಮ, ಘೋಷಿಸಿದ್ದರು. ಅದರ ಬಳಿಕವೂ ಉಭಯ ನಾಯಕರ ಬೆಂಬಲಿಗರ ನಡುವೆ ಪರಸ್ಪರ ಅಧಿಕಾರ ಹಂಚಿಕೆಯ ಚರ್ಚೆಗಳು, ಹಸಿ ಬಿಸಿ ವಾತಾವರಣವನ್ನು ಸೃಷ್ಟಿಸಿದ್ದವು.
ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರು, ತಮ ತಂದೆ ಐದು ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ಪೂರೈಸುತ್ತಾರೆ ಎಂದಿದ್ದರು. ಇದಕ್ಕೆ ಪ್ರತಿಯಾಗಿ ಡಿ.ಕೆ.ಶಿವಕುಮಾರ್ ಅವರ ಬೆಂಬಲಿಗ ಶಾಸಕರಾದ ಇಕ್ಬಾಲ್ ಹುಸೇನ್, ಜನವರಿ 6 ಅಥವಾ 9 ರಂದು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವಿಕರಿಸಲಿದ್ದಾರೆ ಎಂದು ಹೇಳಿದ್ದರು. ಇದಕ್ಕೆ ಪೂರಕವಾಗಿ ಬೆಳಗಾವಿಯಲ್ಲಿ ನಿರಂತರವಾದ ಔತಣಕೂಟಗಳು ನಡೆದಿವೆ.
ಡಿ.ಕೆ.ಶಿವಕುಮಾರ್ ಬೆಂಬಲಿಗರ ಔತಣಕೂಟಕ್ಕೆ ಸಿದ್ದರಾಮಯ್ಯ ಅವರ ಆಪ್ತರಿಗೆ ಆಹ್ವಾನ ಇರಲಿಲ್ಲ. ಅದೇ ರೀತಿ ಸಿದ್ದರಾಮಯ್ಯ ಬೆಂಬಲಿಗರ ಔತಣಕೂಟದಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಅವರ ಬೆಂಬಲಿಗರನ್ನು ಹೊರಗಿಡಲಾಗಿತ್ತು. ಎರಡು ಪಾಳಯದಲ್ಲೂ ತಮದೇ ಆದಂತಹ ಕಾರ್ಯತಂತ್ರಗಳು ರಚನೆಯಾಗಿವೆ.
ಮತ್ತೊಮೆ ದೆಹಲಿ ಯಾತ್ರೆ:
ಬೆಳಗಾವಿಯ ಅಧಿವೇಶನದ ಬಳಿಕ ಕಾಂಗ್ರೆಸ್ ವರಿಷ್ಠರು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿಕೊಂಡು ಚರ್ಚೆ ಮಾಡುವ ಮೂಲಕ ಅಧಿಕಾರ ಹಂಚಿಕೆಯ ಗೊಂದಲಗಳನ್ನು ಬಗೆಹರಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಸದ್ಯಕ್ಕೆ ಇಬ್ಬರು ನಾಯಕರ ದೆಹಲಿ ಪ್ರವಾಸ ವಾರದ ಮಟ್ಟಿಗೆ ಮುಂದೂಡಿಕೆಯಾಗಿದೆ ಎನ್ನಲಾಗಿದೆ.
ಡಿಸೆಂಬರ್ 27-28ರಂದು ದೆಹಲಿಯಲ್ಲಿ ಎಐಸಿಸಿ ಕಾರ್ಯಕಾರಿಣಿ ಸಭೆ ನಿಗದಿಯಾಗಿದೆ. ಕಾರ್ಯಕಾರಿಣಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರಾದ ಕೆ.ಜೆ.ಜಾರ್ಜ್, ಕೆ.ಎಚ್.ಮುನಿಯಪ್ಪ, ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಸದಸ್ಯರಾಗಿದ್ದಾರೆ. ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನು ಸಭೆಗೆ ವಿಶೇಷ ಆಹ್ವಾನಿಕರನ್ನಾಗಿ ಕರೆಸಲಾಗುತ್ತದೆ, ಅದರಂತೆ ಡಿ.ಕೆ.ಶಿವಕುಮಾರ್ ಅವರಿಗೂ ಆಹ್ವಾನ ದೊರೆಯುವ ವಿಶ್ವಾಸ ಇದೆ.
ಬಹುತೇಕ ಆ ದಿನಗಳಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದು ಅಧಿಕಾರ ಹಂಚಿಕೆಯ ಬಗ್ಗೆ ಸಂಧಾನ ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ. ಒಂದು ವೇಳೆ ನಾಯಕತ್ವ ಬದಲಾವಣೆಯಾಗದೇ ಇದ್ದರೆ ಸಚಿವ ಸಂಪುಟ ಪುನರ್ ರಚನೆಗೆ ಹೈಕಮಾಂಡ್ ಸಮತಿಸುವ ಸಾಧ್ಯತೆ ಇದೆ. ಸದ್ಯದ ಪರಿಸ್ಥಿತಿಯಲ್ಲಿ ಸಂಪುಟವನ್ನು ಸಂಪೂರ್ಣವಾಗಿ ಪುನಾರಚಿಸುವ ಬದಲಾಗಿ ಖಾಲಿ ಇರುವ ಎರಡು ಹುದ್ದೆಗಳನ್ನು ಭರ್ತಿ ಮಾಡಿದರೆ ಸಾಕು ಎಂಬ ಅಭಿಪ್ರಾಯವನ್ನು ಡಿ.ಕೆ.ಶಿವಕುಮಾರ್ ಬಣ ವ್ಯಕ್ತಪಡಿಸುತ್ತಿದೆ.
ಆದರೆ ಕೆಲಸ ಮಾಡದೆ ಇರುವ ಬಹಳಷ್ಟು ಸಚಿವರನ್ನು ಬದಲಾವಣೆ ಮಾಡಿ, ಸಂಪುಟ ಪುನರ್ ರಚಿಸುವ ಇರಾದೆಯನ್ನು ಸಿದ್ದರಾಮಯ್ಯ ಹೊಂದಿದ್ದಾರೆ. ಸಚಿವ ಸಂಪುಟ ಪುನರ್ ರಚನೆಯ ಸುಳಿವಿನ ಹಿನ್ನೆಲೆಯಲ್ಲಿ ಮತ್ತೊಮೆ ಕಾಂಗ್ರೆಸ್? ಶಾಸಕರು ದೆಹಲಿ ಯಾತ್ರೆ ಆರಂಭಿಸಲಿದ್ದಾರೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರೂ ದೆಹಲಿಗೆ ತೆರಳುವ ನಿರೀಕ್ಷೆ ಇದೆ.
ಬದಲಾದ ವರಸೆ :
ಇತ್ತಿ?ಚಿನ ದಿನಗಳವರೆಗೂ ಸಿದ್ದರಾಮಯ್ಯ ಅವರು 5 ವರ್ಷಗಳವರೆಗೂ ತಾವೇ ಮುಖ್ಯಮಂತ್ರಿಯಾಗಿರುವುದಾಗಿ ಹೇಳುತ್ತಿದ್ದರು. ಆದರೆ ಡಿ.ಕೆ.ಶಿವಕುಮಾರ್ ಬಣದ ಶಾಸಕರು ಕಳೆದ ತಿಂಗಳು ನಡೆದಿದ್ದ ದೆಹಲಿ ಯಾತ್ರೆಯ ಬಳಿಕ ಪರಿಸ್ಥಿತಿ ಬದಲಾಗಿದೆ. ಹೈಕಮಾಂಡ್ ಹೇಳುವವರೆಗೂ ತಾವು ಅಧಿಕಾರದಲ್ಲಿರುವುದಾಗಿ ಸಿದ್ದರಾಮಯ್ಯ ವರಸೆ ಬದಲಿಸಿದ್ದಾರೆ. ಈ ನಡುವೆ ವಿಧಾನ ಮಂಡಲದ ಅಧಿವೇಶನದಲ್ಲಿ ಸಿದ್ದರಾಮಯ್ಯ ಅವರು ಪದೇ ಪದೇ ತಾವೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದಾಗಿ ಪ್ರತಿಪಾದಿಸುವ ಮೂಲಕ ವಿರೋಧ ಪಕ್ಷಗಳ ಲೇವಡಿಗೆ ಪ್ರತ್ಯುತ್ತರಿಸುವ ಪ್ರಯತ್ನ ಮಾಡಿದ್ದರು. ಸಿದ್ದರಾಮಯ್ಯ ಅವರು ಬಲವಾಗಿ ಹೇಳಿದಷ್ಟು ಸುಲಭದ ವಾತಾವರಣ ಕಂಡುಬರುತ್ತಿಲ್ಲ. ಸಿದ್ದರಾಮಯ್ಯ ಅವರ ಮಾತಿನಲ್ಲೂ ದೃಢವಾದ ವಿಶ್ವಾಸ ಕಂಡು ಬರುತ್ತಿಲ್ಲ. ಹೀಗಾಗಿ ಅಧಿಕಾರ ಸ್ಥಿತ್ಯಂತರವಾಗುವ ಆತಂಕ ಸಿದ್ದು ಬಣದ ಶಾಸಕರನ್ನು ಕಾಡುತ್ತಿದೆ.
ಪತ್ರ ಚಳವಳಿ:
ಸಿದ್ದರಾಮಯ್ಯ ಅವರನ್ನು ಅಧಿಕಾರದಲ್ಲೇ ಮುಂದುವರಿಸಬೇಕು ಎಂಬ ಹಠಕ್ಕೆ ಬಿದ್ದಿರುವ ಕೆಲವರು ಹೈಕಮಾಂಡ್ ಗೆ ತಮ ಅಭಿಪ್ರಾಯ ತಿಳಿಸಲು, ಪತ್ರ ಚಳವಳಿ ನಡೆಸಲು ಮುಂದಾಗಿದ್ದಾರೆ. ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರ ನೇತೃತ್ವದಲ್ಲಿ ರಾಹುಲ್ ಗಾಂಧಿಯವರಿಗೆ ಸಿದ್ದರಾಮಯ್ಯ ಅವರ ಪರವಾಗಿ ಪತ್ರ ಬರೆದು ನಾಯಕತ್ವ ಬದಲಾವಣೆ ಮಾಡಿದರೆ ಅಹಿಂದ ವರ್ಗ ಕಾಂಗ್ರೆಸ್? ನಿಂದ ದೂರವಾಗಲಿದೆ ಎಂಬ ಎಚ್ಚರಿಕೆಯ ಸಂದೇಶ ರವಾನಿಸಲು ಮುಂದಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


