ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ, ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ವಿಜೇತ ನೀರಜ್ ಚೋಪ್ರಾ ಸದ್ದಿಲ್ಲದೇ ವಿವಾಹವಾಗುವ ಮೂಲಕ ಎಲ್ಲರನ್ನೂ ಬೆರಗುಗೊಳಿಸಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ನೀರಜ್ ಚೋಪ್ರಾ ತಮ್ಮ ಮದುವೆಯ ಸಂಭ್ರಮದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರೋ ನೀರಜ್, ಜೀವನದಲ್ಲಿ ಹೊಸ ಅಧ್ಯಾಯ ಶುರು ಮಾಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ನೀರಜ್-ಹಿಮಾನಿ ಎಂಬ ಕ್ಯಾಪ್ಷನ್ ನೀಡಿ ಮದುವೆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ನೀರಜ್ ಚೋಪ್ರಾ ಪತ್ನಿ ಹಿಮಾನಿ ಮೋರ್ ಸೋನಿಪತ್ ಮೂಲದವರಾಗಿದ್ದು ಟೆನ್ನಿಸ್ ಆಟಗಾರ್ತಿ ಆಗಿದ್ದಾರೆ. ಪ್ರಸ್ತುತ ಅಮೆರಿಕದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಫ್ರಾಂಕ್ಲಿನ್ ಪಿಯರ್ಸ್ ವಿಶ್ವವಿದ್ಯಾಲಯದಲ್ಲಿ ಟೆನ್ನಿಸ್‌ನಲ್ಲಿ ಅರೆಕಾಲಿಕ ಸಹಾಯಕ ತರಬೇತುದಾರರಾಗಿ ಕೆಲಸ ಮಾಡಿದ್ದಾರೆ.
ಮೊದಲು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ನೀರಜ್ ಚೋಪ್ರಾ ನಂತರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದಿದ್ದರು. ಈ ಮೂಲಕ ಅಥ್ಲೆಟಿಕ್ಸ್ನಲ್ಲಿ ಸತತ 2 ಪದಕ ಗೆದ್ದ ಭಾರತೀಯ ಕ್ರೀಡಾಪಟು ಎನಿಸಿಕೊಂಡಿದ್ದರು.
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ನೀರಜ್ ಚೋಪ್ರಾ 89.45 ಮೀಟರ್ ದೂರ ಜಾವೆಲಿನ್ ಎಸೆದಿದ್ದರು. ನೀರಜ್ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಪಡೆದರು. ಇದಕ್ಕೂ ಮುನ್ನ ನೀರಜ್ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


